ಸುಂಟಿಕೊಪ್ಪ ಸರ್ಕಾರಿ ಕಾಲೇಜು: ವಿದ್ಯಾರ್ಥಿಗಳ ಸಂಘ ಉದ್ಘಾಟನೆ

| Published : Jul 15 2024, 01:52 AM IST

ಸುಂಟಿಕೊಪ್ಪ ಸರ್ಕಾರಿ ಕಾಲೇಜು: ವಿದ್ಯಾರ್ಥಿಗಳ ಸಂಘ ಉದ್ಘಾಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಸುಂಟಿಕೊಪ್ಪ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ 2024-25ನೇ ಸಾಲಿನ ವಿದ್ಯಾರ್ಥಿಗಳ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಉದ್ಘಾಟನಾ ಸಮಾರಂಭ ನಡೆಯಿತು.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ಪಿಯುಸಿ ವಿದ್ಯಾರ್ಥಿಗಳ ವ್ಯಾಸಂಗ ಭವಿಷ್ಯದ ಪ್ರಮುಖ ಘಟ್ಟವಾಗಿದ್ದು, ಈ ಸಂದರ್ಭ ವಿದ್ಯಾರ್ಥಿಗಳು ವಿಚಲಿತರಾಗದೆ ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನಹರಿಸಬೇಕೆಂದು ಸುಂಟಿಕೊಪ್ಪ ಪೊಲೀಸ್‌ ಠಾಣೆಯ ಪಿಎಸ್‌ಐ ಶ್ರೀಧರ್ ಹೇಳಿದರು.ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ 2024-25ನೇ ಸಾಲಿನ ವಿದ್ಯಾರ್ಥಿಗಳ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಹದಿಹರೆಯದಲ್ಲಿ ಮಾದಕ ವ್ಯಸನಕ್ಕೆ ವಿದ್ಯಾರ್ಥಿಗಳು ಬಲಿಯಾಗಬಾರದು. ಮೊಬೈಲ್‌ನ ದಾಸರಾಗಬಾರದು, ರಸ್ತೆ ಸುರಕ್ಷತೆ ಬಗ್ಗೆ ಅರಿತುಕೊಳ್ಳಬೇಕೆಂದು ಕರೆ ನೀಡಿದರು.ಕಾರ್ಯಕ್ರಮವನ್ನು ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಉದ್ಘಾಟಿಸಿದರು.ಜೀವಶಾಸ್ತ್ರ ಉಪನ್ಯಾಸಕಿ ಪದ್ಮಾವತಿ ಪ್ರತಿಜ್ಞಾನ ವಿಧಿ ಬೋಧಿಸಿದರು.ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಶ್ರೀಲತಾ ಮಾತನಾಡಿ, ವಿದ್ಯಾರ್ಥಿಗಳಲ್ಲಿ ವ್ಯಾಸಂಗದ ಅವಧಿಯಲ್ಲಿಯೇ ಅವರು ನಾಯಕತ್ವ ಗುಣಗಳನ್ನು ಬೆಳೆಸುವ ದೃಷ್ಟಿಯಿಂದ ಕಾಲೇಜಿನಲ್ಲಿ ಪ್ರಜಾಸತ್ತಾತ್ಮಕ ರೀತಿಯಲ್ಲೇ ಚುನಾವಣೆ ನಡೆಸಿ ವಿದ್ಯಾರ್ಥಿ ಸಂಘವನ್ನು ರಚಿಸಲಾಗಿದೆ ಎಂದು ಹೇಳಿದರು.ಈ ಸಂದರ್ಭ 2024-25ನೇ ಸಾಲಿನಲ್ಲಿ ಗರಿಷ್ಠ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರು ಪ್ರತಿಭಾ ಪುರಸ್ಕಾರ ನೀಡಿದರು.ನಿಶಾ ಸ್ವಾಗತಿಸಿದರು. ಕಿಶೋರ್ ಮತ್ತು ಜೋಸ್ನಾ ರವಿ ನಿರೂಪಿಸಿದರು. ಸಮೀರಾ ವಂದಿಸಿದರು.