ಕೇಂದ್ರ ಸರ್ಕಾರವು ರಾಷ್ಟ್ರೀಯ ಉದ್ಯೋಗಖಾತ್ರಿ ಯೋಜನೆ ಹೆಸರನ್ನು ಬದಲಾಯಿಸಿ ಅದೇ ಯೋಜನೆ ಮುಂದುವರೆಸುವ ಬಗ್ಗೆ ಸುಂಟಿಕೊಪ್ಪ ಗ್ರೇಡ್ 1 ಗ್ರಾಮ ಪಂಚಾಯಿತಿಯಲ್ಲಿ ಕಾಂಗ್ರೆಸ್ ಸದಸ್ಯರು ಅದನ್ನು ವಿರೋಧಿಸಿ ಸಭಾತ್ಯಾಗ ನಡೆಸಿದರು.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ಕೇಂದ್ರ ಸರ್ಕಾರವು ರಾಷ್ಟ್ರೀಯ ಉದ್ಯೋಗಖಾತ್ರಿ ಯೋಜನೆ ಹೆಸರನ್ನು ಬದಲಾಯಿಸಿ ಅದೇ ಯೋಜನೆ ಮುಂದುವರೆಸುವ ಬಗ್ಗೆ ಸುಂಟಿಕೊಪ್ಪ ಗ್ರೇಡ್ 1 ಗ್ರಾಮ ಪಂಚಾಯಿತಿಯಲ್ಲಿ ಕಾಂಗ್ರೆಸ್ ಸದಸ್ಯರು ಅದನ್ನು ವಿರೋಧಿಸಿ ಸಭಾತ್ಯಾಗ ನಡೆಸಿದರು. ಬುಧವಾರ ಆಯೋಜಿತವಾಗಿದ್ದ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೇಂದ್ರ ಸರ್ಕಾರದಿಂದ ಬಂದಿರುವ ಸುತ್ತೋಲೆಯ ಕುರಿತು ಪ್ರಸ್ತಾಪಿಸಿದಾಗ ಪಂಚಾಯಿತಿ ಸದಸ್ಯರಾದ ಎಚ್.ಯು.ರಫೀಕ್‌ಖಾನ್ ಅವರು ಈ ಕುರಿತು ವಿರೋಧ ವ್ಯಕ್ತಪಡಿಸಿದರು. ಅಲ್ಲದೆ ಸಭಾ ನಡುವಳಿಯಲ್ಲಿ ಲಿಖಿತವಾಗಿ ತಮ್ಮ ವಿರೋಧವನ್ನು ಬರೆಸಿದರು. ಸಭಾ ತ್ಯಾಗ ಮಾಡಿದ ಬಳಿಕ ಹೊರಬಂದು ಕೇಂದ್ರ ಸರ್ಕಾರವು ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗಖಾತ್ರಿ ಯೋಜನೆ ಹೆಸರನ್ನು ಬದಲಾಯಿಸಿದ ಬಗ್ಗೆ ಧಿಕ್ಕಾರ ಘೋಷಣೆಗಳನ್ನು ಕೂಗಿದರು. ಅವರೊಂದಿಗೆ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಉಪಾಧ್ಯಕ್ಷೆ ಶಿವಮ್ಮ ಮಹೇಶ್, ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಪಿ.ಎಫ್.ಸಬಾಸ್ಟೀನ್, ಆಲಿಕುಟ್ಟಿ, ಶಬ್ಬೀರ್, ನಾಗರತ್ನ ಸುರೇಶ್ ಹಾಗೂ ರೇಷ್ಮಾ ಅವರು ಹೆಚ್.ಯು ರಫೀಕ್‌ಖಾನ್‌ಗೆ ಜೊತೆಗೂಡಿದ್ದರು.