ಸುಂಟಿಕೊಪ್ಪ: ಪ್ರಾಥಮಿಕ ಆರೋಗ್ಯ ಕೇಂದ್ರ ಚೆಟ್ಟಳ್ಳಿಯಲ್ಲಿ ಮಲೇರಿಯಾ ವಿರೋಧ ಮಾಸಾಚರಣೆ ಹಾಗೂ ಮಳೆಗಾಲದಲ್ಲಿ ಹರಡುವ ಸಾಂಕ್ರಾಮಿಕ ರೋಗ ಡೇಂಘಿ ಜ್ವರದ ಬಗ್ಗೆ ಆರೋಗ್ಯ ಅರಿವು ಮಾಹಿತಿ ಕಾರ್ಯಕ್ರಮ ನಡೆಯಿತು.
ಶುಕ್ರವಾರ ಚೆಟ್ಟಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಮಲೇರಿಯಾ ವಿರೋಧಿ ಮಾಸಾಚಾರಣೆ ಹಾಗೂ ಮಳೆಗಾಲದಲ್ಲಿ ಹರಡುವ ಸಾಂಕ್ರಾಮಿಕ ರೋಗಗಳ ಕುರಿತು ಆರೋಗ್ಯ ಅರಿವು ಕಾರ್ಯಕ್ರಮ ಮತ್ತು ತೆಗೆದುಕೊಳ್ಳಬೇಕಾದ ಮುಂಜಾಗ್ರತ ಕ್ರಮಗಳ ಬಗ್ಗೆ ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಶ್ವಜ್ಞ ಮಾಹಿತಿ ನೀಡಿದರು. ಪ್ರಾಥಮಿಕ ಆರೋಗ್ಯ ಚೆಟ್ಟಳ್ಳಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶಿವಪ್ಪ ಅವರು, ಮಳೆಗಾಲದಲ್ಲಿ ಹರಡುವ ಸಾಂಕ್ರಾಮಿಕ ರೋಗಗಳ ಬಗ್ಗೆ 100 ಡೇಸ್ ಟಿಬಿ ಕ್ಯಾಂಪೇನ್‌ನ ಬಗ್ಗೆ ನಶಮುಕ್ತ ಭಾರತ ಅಭಿಯಾನದ ಮಹತ್ವದ ಬಗ್ಗೆ ಹಾಗೂ ರಾಷ್ಟ್ರೀಯ ಪಲ್ಸ್ ಪೊಲಿಯೋ ನಿರ್ಮೂಲನಾ ಕಾರ್ಯಕ್ರಮದ ಬಗ್ಗೆ, ಸ್ಟಾಪ್ ಡಯೆ ರಿಯಾ ಕ್ಯಾಂಪೇನ್ 2026ರ ಬಗ್ಗೆ ಹಾಗೂ ಎಲ್ಲ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಲಾಯಿತು. ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿಗಳಾದ ಲಕ್ಷ್ಮಿ, ಸಮುದಾಯ ಆರೋಗ್ಯ ಅಧಿಕಾರಿಗಳಾದ ಹರ್ಷಿತಾ, ಭುವನಾ, ಆಶಾ ಕಾರ್ಯಕರ್ತೆಯರು ಮತ್ತು ಸಿಬ್ಬಂದಿ ಹಾಜರಿದ್ದರು.ಸುಂಟಿಕೊಪ್ಪ: ಆರೋಗ್ಯ ಅರಿವು ಮಾಹಿತಿ ಕಾರ್ಯಕ್ರಮ
ಪ್ರಾಥಮಿಕ ಆರೋಗ್ಯ ಕೇಂದ್ರ ಚೆಟ್ಟಳ್ಳಿಯಲ್ಲಿ ಮಲೇರಿಯಾ ವಿರೋಧ ಮಾಸಾಚರಣೆ ಹಾಗೂ ಮಳೆಗಾಲದಲ್ಲಿ ಹರಡುವ ಸಾಂಕ್ರಾಮಿಕ ರೋಗ ಡೇಂಘಿ ಜ್ವರದ ಬಗ್ಗೆ ಆರೋಗ್ಯ ಅರಿವು ಮಾಹಿತಿ ಕಾರ್ಯಕ್ರಮ ನಡೆಯಿತು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.