ಸಾರಾಂಶ
ದೆಹಲಿ ಚುನಾವಣೆಯಲ್ಲಿ ಭಾರಿ ಬಹುಮತದೊಂದಿಗೆ ಬಿಜೆಪಿ ಪಕ್ಷ ಜಯಗಳಿಸಿದ ಹಿನ್ನೆಲೆಯಲ್ಲಿ ಸುಂಟಿಕೊಪ್ಪ ಬಿಜೆಪಿ ಪಕ್ಷದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ದೆಹಲಿ ಚುನಾವಣೆಯಲ್ಲಿ ಬಾರೀ ಬಹುಮತದೊಂದಿಗೆ ಬಿಜೆಪಿ ಪಕ್ಷವು ಜಯಗಳಿಸಿದ ಹಿನ್ನೆಲೆಯಲ್ಲಿ ಸುಂಟಿಕೊಪ್ಪ ಬಿಜೆಪಿ ಪಕ್ಷದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಶನಿವಾರ ಸಂಜೆ ಸುಂಟಿಕೊಪ್ಪ ಪಕ್ಷದ ಕಾರ್ಯಕರ್ತರು ಕನ್ನಡವೃತ್ತದಲ್ಲಿ ಜಮಾವಣೆಗೊಂಡು ಪ್ರಧಾನಿ ನರೇಂದ್ರಮೋದಿ ಹಾಗೂ ಅಮಿತ್‌ಶಾ ಪಕ್ಷದ ಮುಖಂಡರಿಗೆ ಜಯಘೋಷಗಳನ್ನು ಕೂಗುತ್ತ ಪಟಾಕಿ ಸಿಡಿಸಿ ಕನ್ನಡ ವೃತ್ತದಲ್ಲಿ ವಿಜಯೋತ್ಸವವನ್ನು ಆಚರಿಸಿ ಸಂಭ್ರಮಿಸಿದರು. ಈ ಸಂದರ್ಭ ಶಕ್ತಿ ಕೇಂದ್ರದ ಅಧ್ಯಕ್ಷ ಧನು ಕಾವೇರಪ್ಪ, ಗ್ರಾ.ಪಂ.ಅಧ್ಯಕ್ಷ ಪಿ.ಆರ್.ಸುನಿಲ್‌ಕುಮಾರ್, ಪಕ್ಷದ ಹಿರಿಯ ಮುಖಂಡರಾದ ಡಿ.ನರಸಿಂಹ, ಲೀಲಾವತಿ, ಶಕ್ತಿ ಕೇಂದ್ರದ ನಿಕಟಪೂರ್ವ ಅಧ್ಯಕ್ಷ ಬಿ.ಕೆ.ಪ್ರಶಾಂತ್, ಗ್ರಾ.ಪಂ.ಸದಸ್ಯೆ ವಸಂತಿ, ಪಟ್ಟೆಮನೆ ಉದಯಕುಮಾರ್, ವಿ.ಎ.ಸಂತೋಷ್, ಪ್ರಶಾಂತ್ (ಪ್ರಶು), ಕೆದಕಲ್ ರಮೇಶ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಇದ್ದರು.