ಸಾರಾಂಶ
ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ಸುಂಟಿಕೊಪ್ಪ ಮಲಯಾಳಿ ಸಮಾಜದ ವತಿಯಿಂದ 17ನೇ ವರ್ಷದ ಓಣಂ ಆಚರಣೆಯನ್ನು ನ.18 ರಂದು ಅದ್ಧೂರಿಯಾಗಿ ನಡೆಸಲಾಗುವುದು ಎಂದು ಮಲಯಾಳಿ ಸಮಾಜದ ಅಧ್ಯಕ್ಷ ಎಂ.ಆರ್.ಶಶಿಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಇಲ್ಲಿನ ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಸೋಮವಾರ ಬೆಳಗ್ಗೆ 11.30 ಗಂಟೆಗೆ 17ನೇ ವರ್ಷದ ಓಣಂ ಆಚರಣೆ ನಡೆಯಲಿದ್ದು, ಸಮಾರಂಭದ ಉದ್ಘಾಟನೆಯನ್ನು ಮಡಿಕೇರಿ ವಿಧಾಸಭಾ ಕ್ಷೇತ್ರ ಶಾಸಕರಾದ ಡಾ.ಮಂತರ್‌ಗೌಡ ನೆರವೇರಿಸಲಿರುವರು.
ಸಮಾರಂಭದ ಅಧ್ಯಕ್ಷತೆಯನ್ನು ಎಂ.ಆರ್.ಶಶಿಕುಮಾರ್ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಕೊಡಗು ಮೈಸೂರು ಕ್ಷೇತ್ರ ಸಂಸದರಾದ ಯದುವೀರ್ ಒಡೆಯರ್, ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್.ಸುನಿಲ್‌ಕುಮಾರ್, ಮಡಿಕೇರಿ ವಿಧಾನಸಭಾ ಕ್ಷೇತ್ರ ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಸುಂಟಿಕೊಪ್ಪ ಮಲಯಾಳಿ ಸಮಾಜದ ಸ್ಥಾಪಕ ಅಧ್ಯಕ್ಷ ಪಿ.ಆರ್.ಸುಕುಮಾರ್, ಕೊಡಗು ಜಿಲ್ಲಾ ಬಿ.ಜೆ.ಪಿ ಮಾಜಿ ಅಧ್ಯಕ್ಷ ಬಿ.ಬಿ.ಭಾರತೀಶ್, ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಚಂದ್ರಶೇಖರ್, ಕೊಡಗು ಜಿಲ್ಲಾ ಹಿಂದೂ ಮಲಯಾಳಿ ಸಮಾಜದ ಅಧ್ಯಕ್ಷ ವಿ.ಎಂ.ವಿಜಯನ್, ಕೊಡಗು ಜಿಲ್ಲಾ ಮಲಯಾಳಿ ಸಮಾಜ ಸ್ಥಾಪಕಾಧ್ಯಕ್ಷ ಕೆ.ಎಸ್.ರಮೇಶ್, ಕೊಡಗು ಜಿಲ್ಲಾ ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರರಾದ ಎ.ಲೋಕೇಶ್‌ಕುಮಾರ್, ಕೊಡಗು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಿ.ಎಂ.ಲತೀಫ್, ಮಡಿಕೇರಿ ಎಸ್.ಎನ್.ಡಿ.ಪಿ ಅಧ್ಯಕ್ಷ ಟಿ.ಆರ್.ವಾಸುದೇವ, ಸುಂಟಿಕೊಪ್ಪ ಯುವ ಕಾಂಗ್ರೆಸ್ ಅಧ್ಯಕ್ಷ ಅನೂಪ್ ಕುಮಾರ್, ಮಲಯಾಳಿ ಸಮಾಜದ ಮಾಜಿ ಅಧ್ಯಕ್ಷರಾದ ಪಿ.ಸಿ.ಮೋಹನ್, ವಿ.ಎ.ಸಂತೋಷ್, ವಿಜಯ ಪ್ಲಾಂಟೇಶನ್ ಮಾಲೀಕರಾದ ಎಸ್.ಜಿ.ಶ್ರೀನಿವಾಸ್ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಮಲಯಾಳಿ ಸಮಾಜದ ಅಧ್ಯಕ್ಷ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.