ಸಾರಾಂಶ
ಸುಂಟಿಕೊಪ್ಪ ನಗರ ಕಾಂಗ್ರೆಸ್ ಅಧ್ಯಕ್ಷ ರಫೀಕ್ ಖಾನ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಒಗ್ಗೂಡಿ ಜಯ ಘೋಷಣೆಗಳನ್ನು ಕೂಗಿದರು. .
ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಗೆಲವು ಸಾಧಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸುಂಟಿಕೊಪ್ಪದಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.ಕನ್ನಡ ವೃತ್ತದಲ್ಲಿ ಸುಂಟಿಕೊಪ್ಪ ನಗರ ಕಾಂಗ್ರೆಸ್ ಅಧ್ಯಕ್ಷ ರಫೀಕ್ ಖಾನ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಒಗ್ಗೂಡಿ ಸೋನಿಯ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲಿಕಾರ್ಜುನ ಖರ್ಗೆ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಜಿಲ್ಲೆಯ ಶಾಸಕರಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್ ಗೌಡ ಅವರಿಗೆ ಜಯ ಘೋಷಗಳನ್ನು ಕೂಗಿದರು.
ವಿಜಯೋತ್ಸವ ಉದ್ದೇಶಿಸಿ ಮಾತನಾಡಿದ ಸುಂಟಿಕೊಪ್ಪ ನಗರ ಕಾಂಗ್ರೆಸ್ ಅಧ್ಯಕ್ಷ ರಫೀಕ್ ಖಾನ್, ಇದೊಂದು ಅಭೂತಪೂರ್ವ ವಿಜಯವಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರವು ಮತ್ತಷ್ಟು ಸುಭದ್ರಗೊಂಡಿದೆ ಎಂದು ಹೇಳಿದರು.ಕಾಂಗ್ರೆಸ್ ಹಿರಿಯ ಮುಖಂಡ ಎಂ.ಎ.ವಸಂತ್, ಇಸಾಕ್ ಖಾನ್, ಗ್ರಾ.ಪಂ. ಮಾಜಿ ಸದಸ್ಯ ರಜಾಕ್, ಮಾಜಿ ಅಧ್ಯಕ್ಷ ಕೆ.ಇ.ಕರೀಂ ಮತ್ತಿತರರು ಮಾತನಾಡಿದರು.
ಪಂಚಾಯಿತಿ ಸದಸ್ಯರಾದ ಆಲಿಕುಟ್ಟಿ, ಪಿ.ಎಫ್.ಸಬಾಸ್ಟೀನ್, ಮಾಜಿ ಅಧ್ಯಕ್ಷೆ ರೋಸ್‌ಮೇರಿ ರಾಡ್ರಿಗಸ್, ಕಾಂಗ್ರೆಸ್ ಕಾರ್ಯಕರ್ತರಾದ ಶರೀಫ್, ಹಕೀಂ, ಹನೀಫ್ ಮತ್ತಿತರರು ಇದ್ದರು.-----------------------
ಕುಶಾಲನಗರದಲ್ಲಿ ಬಿಜೆಪಿ ಕಾರ್ಯಕರ್ತರ ವಿಜಯೋತ್ಸವಕನ್ನಡಪ್ರಭ ವಾರ್ತೆ ಕುಶಾಲನಗರಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯಭೇರಿ ಗಳಿಸಿರುವ ಹಿನ್ನೆಲೆಯಲ್ಲಿ ಕುಶಾಲನಗರದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.ಕುಶಾಲನಗರ ಗಣಪತಿ ದೇವಾಲಯದ ಮುಂಭಾಗ ಬಿಜೆಪಿ ನಗರಾಧ್ಯಕ್ಷ ಎಂ.ಎಂ. ಚರಣ್ ನೇತೃತ್ವದಲ್ಲಿ ಕಾರ್ಯಕರ್ತರು ಪಕ್ಷದ ಪರ ಘೋಷಣೆ ಕೂಗಿದರು. ಪಟಾಕಿ ಸಿಡಿಸಿ ಸಂಭ್ರಮಿಸಿದ ಕಾರ್ಯಕರ್ತರು ಸಿಹಿ ವಿತರಿಸಿದರು.ಈ ಸಂದರ್ಭ ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಧುಸೂದನ್, ಯುವ ಮೋರ್ಚಾ ಅಧ್ಯಕ್ಷ ರಮಾನಾಥನ್, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ನವನೀತ್ ಪೊನ್ನೇಟಿ, ಪ್ರಧಾನ ಕಾರ್ಯದರ್ಶಿ ಸಚಿನ್, ಆದರ್ಶ್, ಮಂಡಲ ಪ್ರಧಾನ ಕಾರ್ಯದರ್ಶಿ ಎಂ.ಡಿ,. ಕೃಷ್ಣಪ್ಪ, ಪ್ರಮುಖರಾದ ಜಿ.ಎಲ್. ನಾಗರಾಜ್, ವಿ.ಡಿ. ಪುಂಡರಿಕಾಕ್ಷ, ಅವಿನಾಶ್, ಚಂದ್ರಶೇಖರ್ ಹೇರೂರು ಗಣಪತಿ, ಚಂದ್ರಶೇಖರ್ ಕೆ.ಎನ್. ಮತ್ತು ಇತರರು ಇದ್ದರು.