ಶಿರಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಟಿ.ಬಿ.ಜಯಚಂದ್ರ

| Published : Aug 07 2025, 12:45 AM IST

ಶಿರಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಟಿ.ಬಿ.ಜಯಚಂದ್ರ
Share this Article
  • FB
  • TW
  • Linkdin
  • Email

ಸಾರಾಂಶ

ನಗರವು ಉತ್ತರ ಕರ್ನಾಟಕದ ಹೆಬ್ಬಾಗಿಲಿನಂತಿದ್ದು, ಉತ್ತರ ಕರ್ನಾಟಕದ ಭಾಗದ ಜನರಿಗೆ ಅನುಕೂಲವಾಗಲು ಶಿರಾದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಯಾಗಬೇಕು. ಅದಕ್ಕಾಗಿ ಸುಮಾರು 50 ಎಕರೆ ಜಾಗ ಮೀಸಲಿಟ್ಟಿದ್ದೇನೆ ಎಂದರು.

ಕನ್ನಡಪ್ರಭ ವಾರ್ತೆ ಶಿರಾಶಿರಾದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಪ್ರಾರಂಭಿಸಿದ್ದರಿಂದ ಸಾವಿರಾರು ತಾಯಂದಿರ ಆರೋಗ್ಯ ಕಾಪಾಡಲು ಸಾಧ್ಯವಾಗಿದೆ. ಮುಂದಿನ ದಿನಗಳಲ್ಲಿ ಆಸ್ಪತ್ರೆಯನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡಲು ಕ್ರಮ ಕೈಗೊಳ್ಳುತ್ತೇನೆ ಎಂದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದರು.ಅವರು ಬುಧವಾರ ನಗರದಲ್ಲಿ ಜ್ಯೋತಿನಗರ ಸಚಿನ್ ಲೇಔಟ್‌ನಲ್ಲಿರುವ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪದಲ್ಲಿ ಶ್ರೀ ಚೌಡೇಶ್ವರಿ ಚಾರಿಟಬಲ್ ಟ್ರಸ್ಟ್, ಡಾ.ಟಿ.ಬಿ. ಜಯಚಂದ್ರ ಅಭಿಮಾನಿ ಬಳಗ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿ.ಪಂ., ತಾ.ಪಂ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ನಗರಸಭೆ ಹಾಗೂ ವಿವಿಧ ಇಲಾಖೆಗಳು ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಡಾ.ಟಿ.ಬಿ. ಜಯಚಂದ್ರ, ಅವರ ಹುಟ್ಟುಹಬ್ಬದ ಪ್ರಯುಕ್ತ ತಾಲೂಕಿನ ಎಲ್ಲಾ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ ಹಾಗೂ ಆರೋಗ್ಯ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನಗರವು ಉತ್ತರ ಕರ್ನಾಟಕದ ಹೆಬ್ಬಾಗಿಲಿನಂತಿದ್ದು, ಉತ್ತರ ಕರ್ನಾಟಕದ ಭಾಗದ ಜನರಿಗೆ ಅನುಕೂಲವಾಗಲು ಶಿರಾದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಯಾಗಬೇಕು. ಅದಕ್ಕಾಗಿ ಸುಮಾರು 50 ಎಕರೆ ಜಾಗ ಮೀಸಲಿಟ್ಟಿದ್ದೇನೆ ಎಂದರು.ತುಮಕೂರು- ದಾವಣಗೆರೆ ರೈಲ್ವೆ ಕಾಮಗಾರಿಯು ಈಗಾಗಲೇ ತುಮಕೂರಿನ ಊರುಕೆರೆಯಿಂದ ಕಾಮಗಾರಿ ಪ್ರಾರಂಭವಾಗಿದ್ದು, ಇದುವರೆಗೂ ಸುಮಾರು 1,000 ಕೋಟಿ ರು. ವೆಚ್ಚಾಗಿದೆ. ಶಿರಾ ಭಾಗದ ಕಾಮಗಾರಿಯನ್ನು ಇನ್ನ ಹದಿನೈದು ದಿನದಲ್ಲಿ ಪ್ರಾರಂಭಿಸಲಾಗುವುದು. ಅದಕ್ಕಾಗಿ ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ ಆಗಮಿಸಲಿದ್ದಾರೆ ಎಂದರು.ಪ್ರತಿ ಗ್ರಾಮಕ್ಕೂ ಶುದ್ಧ ನೀರು:

ತಾಲೂಕಿಗೆ ಕಳೆದ 23 ವರ್ಷಗಳಿಂದ ಹೇಮಾವತಿ ನೀರು ಹರಿಯುತ್ತಿದೆ. ತಾಲೂಕಿಗೆ ದೇವರು ಕೈಕೊಟ್ಟರೂ ಹೇಮಾವತಿ ತಾಯಿ ಕೈಕೊಡುವುದಿಲ್ಲ. ತಾಲೂಕಿಗೆ ಈಗಾಗಲೇ ಹೇಮಾವತಿ ನೀರು ಹರಿಯುತ್ತಿದ್ದು, ಕೆಲವೇ ದಿನಗಳಲ್ಲಿ ತಾಲೂಕಿಗೆ ಭದ್ರ, ಎತ್ತಿನಹೊಳೆ ನದಿ ನೀರು ಹರಿಯಲಿದ್ದು, ತಾಲೂಕಿಗೆ ಮೂರು ನದಿಗಳ ನೀರು ಬರಲಿದೆ. ಮುಂದಿನ ದಿನಗಳಲ್ಲಿ ಸುಮಾರು 500 ಕೋಟಿ ವೆಚ್ಚದಲ್ಲಿ ತಾಲೂಕಿನ ಪ್ರತಿಯೊಂದು ಹಳ್ಳಿಗೂ ಶುದ್ಧ ಕುಡಿಯುವ ನೀರು ನೀಡಲಿದ್ದೇನೆ ಎಂದರು. ಕಾರ್ಯಕ್ರಮದಲ್ಲಿ ಸುಮಾರು 750 ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ ಮಾಡಲಾಯಿತು. ಶ್ರೀ ಚೌಡೇಶ್ವರಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಅನಂತರಾಮು, ನಿರ್ಮಲ ಟಿ.ಬಿ.ಜಯಚಂದ್ರ, ನಗರಸಭೆ ಅಧ್ಯಕ್ಷ ಜೀಷಾನ್ ಮೊಹಮದ್, ಉಪಾಧ್ಯಕ್ಷ ಲಕ್ಷ್ಮೀಕಾಂತ್, ಸ್ಥಾಯಿ ಸಮಿತಿ ಅಧ್ಯಕ್ಷ ಅಜಯ್‌ಕುಮಾರ್, ಕಾಂಗ್ರೆಸ್ ಮುಖಂಡ ಸಂಜಯ್ ಜಯಚಂದ್ರ, ಶಿರಾ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಿ.ಆರ್.ಮಂಜುನಾಥ್, ಗ್ರಾರಂಟಿ ಅನುಷ್ಟಾನ ಸಮಿತಿ ಅಧ್ಯಕ್ಷ ಗುಳಿಗೇನಹಳ್ಳಿ ನಾಗರಾಜು, ಜಿಲ್ಲಾ ರೋಗ್ಯಾಧಿಕಾರಿ ಡಾ.ಚಂದ್ರಶೇಖರ್.ಬಿ.ಎಂ, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಮೋಹನ್, ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಡಿ.ಎಂ.ಗೌಡ, ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಬಾಬು ರಾಜೇಂದ್ರ ಪ್ರಸಾದ್, ಪೌರಾಯುಕ್ತ ರುದ್ರೇಶ್, ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಶೋಭಾ ನಾಗರಾಜ್, ಶ್ರೀನಿವಾಸ್, ನಗರಸಭಾ ಸದಸ್ಯ ಬಿ.ಎಂ.ರಾಧಾಕೃಷ್ಣ, ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷ ಅಬ್ದುಲ್ಲಾ ಖಾನ್, ಮಾಜಿ ತಾ.ಪಂ. ಸದಸ್ಯೆ ಮಂಜುಳಬಾಯಿ ಶೇಷಾನಾಯ್ಕ, ಆಶ್ರಯ ಸಮಿತಿ ಸದಸ್ಯ ಜಯಲಕ್ಷ್ಮಿ, ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಮಣಿಕಂಠ, ನಗರ ಅಧ್ಯಕ್ಷ ಅಂಜನ್‌ಕುಮಾರ್, ಗ್ರಾಮಾಂತರ ಅಧ್ಯಕ್ಷ ಹೇಮಂತ್ ಗೌಡ, ಸೇರಿದಂತೆ ಹಲವರು ಹಾಜರಿದ್ದರು. ೬ಶಿರಾ೧: ಶಿರಾ ನಗರದ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪದಲ್ಲಿ ಟಿ.ಬಿ.ಜಯಚಂದ್ರ ಅವರ ಹುಟ್ಟುಹಬ್ಬದ ಪ್ರಯುಕ್ತ ಏರ್ಪಡಿಸಿದ್ದ ತಾಲೂಕಿನ ಎಲ್ಲಾ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ ಹಾಗೂ ಆರೋಗ್ಯ ಅರಿವು ಕಾರ್ಯಕ್ರಮವನ್ನು ಶಾಸಕ ಟಿ.ಬಿ.ಜಯಚಂದ್ರ ಉದ್ಘಾಟಿಸಿದರು. ೬ಶಿರಾ೨: ಶಿರಾ ನಗರದ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪದಲ್ಲಿ ಟಿ.ಬಿ.ಜಯಚಂದ್ರ ಅವರ ಹುಟ್ಟುಹಬ್ಬದ ಪ್ರಯುಕ್ತ ತಾಲೂಕಿನ ಎಲ್ಲಾ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ ನೆರವೇರಿಸಲಾಯಿತು.