ಮಕ್ಕಳ ಬೆಳವಣಿಗೆಗೆ ಪೂರಕ ಪೌಷ್ಟಿಕ ಆಹಾರ ಅವಶ್ಯಕ: ರಾಹುಲ್‌ ಶಿಂಧೆ

| Published : Oct 27 2024, 02:33 AM IST

ಸಾರಾಂಶ

ವಿಶ್ವ ಆರೋಗ್ಯ ಸಂಸ್ಥೆ ಮತ್ತು ಆರೋಗ್ಯ ಇಲಾಖೆ ವರದಿಯ ಪ್ರಕಾರ ಮಕ್ಕಳ ಮೆದುಳು ಮತ್ತು ಬೌದ್ಧಿಕವಾಗಿ ಬೆಳವಣಿಗೆಗೆ ಬಾಲ್ಯದಲ್ಲಿ ಪೂರಕ ಪೌಷ್ಟಿಕ ಆಹಾರ ಒದಗಿಸುವುದು ಸೂಕ್ತವೆಂದು ಬೆಳಗಾವಿ ವಿಭಾಗ ಮಟ್ಟದ ಕಾರ್ಯಾಗಾರದಲ್ಲಿ ಜಿಪಂ ಸಿಇಒ ರಾಹುಲ್ ಶಿಂಧೆ ನಿರ್ದೇಶನ ನೀಡಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ವಿಶ್ವ ಆರೋಗ್ಯ ಸಂಸ್ಥೆ ಮತ್ತು ಆರೋಗ್ಯ ಇಲಾಖೆ ವರದಿಯ ಪ್ರಕಾರ ಮಕ್ಕಳ ಮೆದುಳು ಮತ್ತು ಬೌದ್ಧಿಕವಾಗಿ ಬೆಳವಣಿಗೆಗೆ ಬಾಲ್ಯದಲ್ಲಿ ಪೂರಕ ಪೌಷ್ಟಿಕ ಆಹಾರ ಒದಗಿಸುವುದು ಸೂಕ್ತವೆಂದು ಬೆಳಗಾವಿ ವಿಭಾಗ ಮಟ್ಟದ ಕಾರ್ಯಾಗಾರದಲ್ಲಿ ಜಿಪಂ ಸಿಇಒ ರಾಹುಲ್ ಶಿಂಧೆ ಬೆಳಗಾವಿ ವಿಭಾಗ ಮಟ್ಟದ ಶಿಕ್ಷಣಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದ ರೈತ ಭವನದ ಸಭಾಂಗಣದಲ್ಲಿ ಶುಕ್ರವಾರ ನಡೆದ ಶಿಕ್ಷಣ ಇಲಾಖೆಯ ವಿಭಾಗ ಮಟ್ಟದ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪಿಎಂ ಪೋಷಣ್ ಶಕ್ತಿ ನಿರ್ಮಾಣ ಯೋಜನೆ ಅಡಿಯಲ್ಲಿ ಈಗಾಗಲೇ ಕರ್ನಾಟಕ ಸರ್ಕಾರ 1 ರಿಂದ 10ನೇ ತರಗತಿಯವರೆಗೆ ವಾರದಲ್ಲಿ 2 ದಿವಸ ಪೂರಕ ಪೌಷ್ಟಿಕ ಆಹಾರ ವಿತರಣೆ ಮಾಡುತ್ತಿದ್ದು, ಕರ್ನಾಟಕ ಸರ್ಕಾರ ಹಾಗೂ ಅಜೀಂ ಫೌಂಡೇಶನ್‌ ಸಹಭಾಗಿತ್ವದಲ್ಲಿ ವಾರದ 6 ದಿನ ಪೂರಕ ಪೌಷ್ಟಿಕ ಆಹಾರ (ಬೇಯಿಸಿದ ಮೊಟ್ಟೆ,/ಶೇಂಗಾ ಚೆಕ್ಕೆ/ಬಾಳೆ ಹಣ್ಣು) ವಿತರಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ. ಶಿಕ್ಷಣ ಇಲಾಖೆಯ ಎಲ್ಲ ಅಧಿಕಾರಿಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ನಿಯಮಾನುಸಾರ ಮತ್ತು ಪ್ರಾಮಾಣಿಕತೆಯಿಂದ ನಿರ್ವಹಿಸಿ ಅರ್ಹ ಫಲಾನುಭವಿಗಳಿಗೆ ಪೂರಕ ಪೌಷ್ಟಿಕ ಆಹಾರ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಶಿಕ್ಷಣಾಧಿಕಾರಿ(ಅಕ್ಷರ ದಾಸೋಹ) ಲಕ್ಷ್ಮಣರಾವ್ ಯಕ್ಕುಂಡಿ, ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಎಸ್.ಸಿ., ಸಹಾಯಕ ನಿರ್ದೇಶಕಿ ನಾಗರತ್ನ ಜಿ(ಪಿಎಂ ಪೋಷಣ್) ಹಾಗೂ ಎಪಿಎಫ್ ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ನಾಗರಾಜ್, ಬೆಳಗಾವಿ ವಿಭಾಗದ ಎಲ್ಲ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಇದ್ದರು.