ಸಾರಾಂಶ
ವಿಶ್ವವಿದ್ಯಾಲಯ ಕಾಲೇಜು ಮಂಗಳೂರು, ಕನ್ನಡ ಸಂಘ ಹಾಗೂ ಉದ್ಯೋಗ ಮತ್ತು ವೃತ್ತಿ ಸಮಾಲೋಚನಾ ಕೋಶ, ದ.ಕ. ಜಿಲ್ಲಾ ಸಾಹಿತ್ಯ ಪರಿಷತ್‌ನ ನಗರ ಹಾಗೂ ಹೋಬಳಿ ಘಟಕದ ಸಹಯೋಗದಲ್ಲಿ ಸ್ಪರ್ಧಾತ್ಮಕ ಯುಗದಲ್ಲಿ ನಮ್ಮ ತಯಾರಿ ಎಂಬ ವಿದ್ಯಾರ್ಥಿ ತರಬೇತಿ ಕಾರ್ಯಗಾರ ಮಂಗಳೂರು ವಿ.ವಿ. ಕಾಲೇಜಿನಲ್ಲಿ ಇತ್ತೀಚೆಗೆ ನಡೆಯಿತು.
ಕನ್ನಡಪ್ರಭ ವಾರ್ತೆ ಮಂಗಳೂರು
ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಹಂತದಲ್ಲಿಯೇ ಭವಿಷ್ಯದ ಕುರಿತು ಸೂಕ್ತ ದೃಷ್ಟಿಕೋನವನ್ನು ಹೊಂದಿರಬೇಕು. ವಿದ್ಯಾರ್ಥಿ ದಿಸೆಯಲ್ಲೇ ಉದ್ಯೋಗಕ್ಕೆ ಪೂರಕವಾದ ವೃತ್ತಿ ಕೌಶಲ್ಯಗಳನ್ನು ಕರಗತಮಾಡಿಕೊಂಡರೆ ಉದ್ಯೋಗ ಪಡೆಯಲು ಹೆಚ್ಚಿನ ಸಹಾಯವಾಗಲಿದೆ ಎಂದು ಮಂಗಳೂರು ವಿವಿ ಕುಲಸಚಿವ ರಾಜು ಮೊಗವೀರ ಹೇಳಿದರು.ವಿಶ್ವವಿದ್ಯಾಲಯ ಕಾಲೇಜು ಮಂಗಳೂರು, ಕನ್ನಡ ಸಂಘ ಹಾಗೂ ಉದ್ಯೋಗ ಮತ್ತು ವೃತ್ತಿ ಸಮಾಲೋಚನಾ ಕೋಶ, ದ.ಕ. ಜಿಲ್ಲಾ ಸಾಹಿತ್ಯ ಪರಿಷತ್‌ನ ನಗರ ಹಾಗೂ ಹೋಬಳಿ ಘಟಕದ ಸಹಯೋಗದಲ್ಲಿ ಸ್ಪರ್ಧಾತ್ಮಕ ಯುಗದಲ್ಲಿ ನಮ್ಮ ತಯಾರಿ ಎಂಬ ವಿದ್ಯಾರ್ಥಿ ತರಬೇತಿ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.ಕೊಡಗು ಮೀನುಗಾರಿಕಾ ಇಲಾಖೆ ಸಹಾಯಕ ನಿರ್ದೇಶಕಿ ಮಿಲನ ಕೆ. ಭರತ್ ಮಾತನಾಡಿ, ಇಂದಿನ ಯುವಜನತೆಯಲ್ಲಿ ಮಾಹಿತಿ, ಕೌಶಲ್ಯದ ಕೊರತೆಯಿದೆ. ಸಮಾಜದಲ್ಲಿ ಮುಂದೆ ಬರಬೇಕೆನ್ನುವ ಹಂಬಲ ಇರಬೇಕು. ಮುಂದೆ ನಾವು ಯಾವ ಕ್ಷೇತ್ರದಲ್ಲಿ ವೃತ್ತಿ ಜೀವನ ಆರಂಭಿಸಬೇಕು ಎಂಬುದರ ಬಗ್ಗೆ ನಾವು ಆರಂಭದಲ್ಲೇ ಕಾರ್ಯಯೋಜನೆ ರೂಪಿಸಿ ಅದಕ್ಕೆ ಪೂರಕವಾದ ತರಬೇತಿ ಪಡೆದು ನಮ್ಮ ವೃತ್ತಿ ಕೌಶಲಗಳನ್ನು ಹೆಚ್ಚಿಸಬೇಕು ಎಂದರು.ವಿಶ್ವವಿದ್ಯಾಲಯ ಕಾಲೇಜಿನ ಪ್ರಾಚಾರ್ಯ ಪ್ರೊ. ಗಣಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು.
ದ.ಕ ಜಿಲ್ಲಾ ಸಾಹಿತ್ಯ ಪರಿಷತ್‌ನ ಸಂಘಟನಾ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ, ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಎಲ್ ಲಕ್ಷ್ಮೇದೇವಿ, ಉದ್ಯೋಗ ಮತ್ತು ವೃತ್ತಿ ಸಮಾಲೋಚನಾ ಕೋಶದ ಸಂಯೋಜಕಿ ಡಾ. ಭಾರತಿ ಪ್ರಕಾಶ್ ಇದ್ದರು.ಕಸಾಪ ಕನ್ನಡ ಸಂಘದ ಕೇಂದ್ರೀಯ ಕಾರ್ಯಕಾರಿ ಸಮಿತಿ ಸಂಚಾಲಕ ಡಾ. ಮಧವ ಎಂ.ಕೆ. ಸ್ವಾಗತಿಸಿದರು. ದ.ಕ ಜಿಲ್ಲಾ ಸಾಹಿತ್ಯ ಪರಿಷತ್‌ನ ಮಂಗಳೂರು ಹೋಬಳಿ ಘಟಕದ ಅಧ್ಯಕ್ಷ ವಂದಿಸಿದರು. ವಿದ್ಯಾರ್ಥಿನಿ ಎಸ್.ಎನ್. ಸಪ್ನಾ ನಿರೂಪಿಸಿದರು.;Resize=(128,128))
;Resize=(128,128))
;Resize=(128,128))
;Resize=(128,128))