ಕೆಳಭಾಗದ ಜಮೀನು ಕಾಲುವೆಗಳಿಗೆ ನೀರು ಪೂರೈಸಿ

| Published : Dec 01 2024, 01:30 AM IST

ಕೆಳಭಾಗದ ಜಮೀನು ಕಾಲುವೆಗಳಿಗೆ ನೀರು ಪೂರೈಸಿ
Share this Article
  • FB
  • TW
  • Linkdin
  • Email

ಸಾರಾಂಶ

ಈಗಾಗಲೇ ಹಲವಾರು ಬಾರಿ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಈ ಕುರಿತು ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನವಾಗಿಲ್ಲ

ನರಗುಂದ: ಹಿಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ್ದ ಬೆಳೆಗಳು ಕಾಲುವೆ ನೀರು ಸಿಗದೇ ಒಣಗುತ್ತಿದ್ದು, ಆದರಿಂದ ನೀರಾವರಿ ಅಧಿಕಾರಿಗಳು ಕೆಳಭಾಗದ ರೈತರ ಜಮೀನಗಳಿಗೆ ನೀರು ಪೂರೈಕೆ ಮಾಡಲು ಕ್ರಮ ವಹಿಸಬೇಕು ಎಂದು ರೈತ ಸೇನಾ ಸಂಘಟನೆ ರಾಜ್ಯ ಕಾರ್ಯದರ್ಶಿ ಎಸ್.ಬಿ. ಜೋಗಣ್ಣವರ ಆಗ್ರಹಿಸಿದರು.

ಅವರು 3421ನೇ ದಿನದ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆ ನಿರಂತರ ಹೋರಾಟ ವೇದಿಕೆಯಲ್ಲಿ ಮಾತನಾಡಿ, ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ಬೆಳೆಗಳು ತೇವಾಂಶ ಕೊರತೆಯಿಂದ ಒಣಗುತ್ತಿದ್ದು, ಪ್ರಸಕ್ತ ವರ್ಷ ಮಲಪ್ರಭಾ ಜಲಾಶಯ ಭರ್ತಿಯಾದರೂ ತಾಲೂಕಿನ ಹದಲಿ, ಭೈರನಹಟ್ಟಿ, ಹುಣಿಸಿಕಟ್ಟಿ, ಹಿರೇಕೊಪ್ಪ, ಕಲಕೇರಿ, ಬನಹಟ್ಟಿ, ಶಿರೋಳ, ಸುರಕೋಡ, ಮುದ್ಗಣಿಕಿ ಸೇರಿದಂತೆ ಕೆಳ ಭಾಗದ ರೈತರಿಗೆ ಕಾಲುವೆ ನೀರು ಸಿಗದೆ ಬೆಳೆಗಳು ಒಣಗುತಿವೆ. ಈಗಾಗಲೇ ಹಲವಾರು ಬಾರಿ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಈ ಕುರಿತು ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನವಾಗಿಲ್ಲ. ಕೆಳಭಾಗದ ಕಾಲುವೆಗಳಿಗೆ ನೀರು ಪೂರೈಕೆ ಮಾಡದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ವೀರಬಸಪ್ಪ ಹೂಗಾರ, ಪರಶುರಾಮ ಜಂಬಗಿ, ಸಿ.ಎಸ್. ಪಾಟೀಲ, ಸುಭಾಸ ಗಿರಿಯಣ್ಣವರ, ಹನುಮಂತ ಸರನಾಯ್ಕರ, ಶಿವಪ್ಪ ಸಾತಣ್ಣವರ, ಶಂಕ್ರಪ್ಪ ಜಾಧವ, ಯಲ್ಲಪ್ಪ ಚಲವಣ್ಣವರ, ಮಲ್ಲೇಶ ಅಣ್ಣಗೇರಿ, ಅರ್ಜುನ ಮಾನೆ, ಫಕೀರಪ್ಪ ಅಣ್ಣಿಗೇರಿ, ಅನಸವ್ವ ಶಿಂಧೆ, ನಾಗರತ್ನ ಸವಳಭಾವಿ, ವಾಸು ಚವ್ಹಾಣ, ವಿಜಯಕುಮಾರ ಹೂಗಾರ ಸೇರಿದಂತೆ ಮುಂತಾದವರು ಇದ್ದರು.