ಸಾರಾಂಶ
ಕನ್ನಡ ಪ್ರಭ ವಾರ್ತೆ ಮದ್ದೂರು
ಹಿಂದೂ ಧರ್ಮ ಉಳಿವಿಗಾಗಿ ಕಾರ್ಯಕರ್ತರು ಮುಂದಿನ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಬೆಂಬಲಿಸುವುದು ಅನಿವಾರ್ಯ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಸಿ.ಕೆ.ಸತೀಶ್ ಹೇಳಿದರು.ಪಟ್ಟಣದ ಮಳವಳ್ಳಿ ರಸ್ತೆಯ ಮದ್ದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಕಚೇರಿಯಲ್ಲಿ ಸದಸ್ಯತ್ವ ನೋಂದಣಿ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ, ಕೆಲವು ಹಿಂದೂ ವಿರೋಧಿಗಳು ದೇಶದ ಹಿಂದೂಗಳ ಮೇಲೆ ದೌರ್ಜನ್ಯ ನಡೆಸುವ ಮೂಲಕ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಸಂಚು ನಡೆಸುತ್ತಿದ್ದಾರೆ. ಇದರಿಂದ ಹಿಂದೂ ಧರ್ಮಕ್ಕೆ ಸಂಕಷ್ಟ ಪರಿಸ್ಥಿತಿ ಎದುರಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು. ಹಿಂದೂ ಧರ್ಮದ ರಕ್ಷಣೆ ಮತ್ತು ಸದೃಢ ಭಾರತ ನಿರ್ಮಾಣ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯಿಂದ ಮಾತ್ರ ಸಾಧ್ಯವಿದೆ. ಹೀಗಾಗಿ ರಾಷ್ಟ್ರ ಮತ್ತು ರಾಜ್ಯಮಟ್ಟದಲ್ಲಿ ಬಿಜೆಪಿಯನ್ನು ಸದಾ ಅಧಿಕಾರಕ್ಕೆ ತರುವುದು ಮುಖ್ಯ ಎಂದರು.
ಪಕ್ಷದ ಎಲ್ಲಾ ಘಟಕಗಳ ಪದಾಧಿಕಾರಿಗಳು ಬಿಜೆಪಿಯನ್ನು ಬೂತ್ ಮಟ್ಟದಲ್ಲಿ ಸಂಘಟನೆ ಮಾಡುವ ಸಂಕಲ್ಪ ತೊಡಬೇಕು. ಪ್ರತಿ ಬೂತ್‌ನಲ್ಲಿ ಕನಿಷ್ಠ 300 ಮಂದಿಯನ್ನು ಸದಸ್ಯರಾಗಿ ನೋಂದಾಯಿಸುವ ಮೂಲಕ ವಿಧಾನಸಭಾ ಕ್ಷೇತ್ರದಲ್ಲಿ 1 ಲಕ್ಷ ಸದಸ್ಯತ್ವದ ಗುರಿಯನ್ನು ಹೊಂದಬೇಕು. ಪ್ರತಿ ಬೂತ್‌ನಲ್ಲಿ ಆನ್ ಲೈನ್ ಮೂಲಕ ನೋಂದಣಿಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಎಂ.ಸಿ.ಸಿದ್ದು ಮಾತನಾಡಿ, ಸೆ.2 ರಂದು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಾದ್ಯಂತ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಜಾದಳ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿಯಾನದಲ್ಲಿ ಸಕ್ರಿಯವಾಗಿ ತೊಡೆಗಿಸಿಕೊಳ್ಳಬೇಕು ಎಂದರು.
ಉಭಯ ಕಾರ್ಯಕರ್ತರು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಹಗರಣಗಳ ಬಗ್ಗೆ ಕ್ಷೇತ್ರದ ಮತದಾರರಿಗೆ ಮನವರಿಕೆ ಮಾಡಿಕೊಡುವ ಮೂಲಕ ಸದಸ್ಯತ್ವಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಮನವಿ ಮಾಡಿದರು.ಈ ವೇಳೆ ಬಿಜೆಪಿ ತಾಲೂಕು ಮಹಿಳಾ ಘಟಕದ ಅಧ್ಯಕ್ಷ ಶ್ವೇತ, ಮುಖಂಡರಾದ ಎಂ.ಸತೀಶ್, ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಇದ್ದರು.