ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಬೆಂಬಲಿಸಿ : ಎಂ. ರಾಮಚಂದ್ರ

| Published : May 28 2024, 01:15 AM IST / Updated: May 28 2024, 10:35 AM IST

ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಬೆಂಬಲಿಸಿ : ಎಂ. ರಾಮಚಂದ್ರ
Share this Article
  • FB
  • TW
  • Linkdin
  • Email

ಸಾರಾಂಶ

ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಜೂ.3 ರಂದು ನಡೆಯುವ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಕೆ. ವಿವೇಕಾನಂದ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡುವ ಮೂಲಕ ಗೆಲ್ಲಿಸಬೇಕು ಎಂದು ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ. ರಾಮಚಂದ್ರ ಶಿಕ್ಷಕರಲ್ಲಿ ಮನವಿ ಮಾಡದರು.

 ಚಾಮರಾಜನಗರ :  ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಜೂ.3 ರಂದು ನಡೆಯುವ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಕೆ. ವಿವೇಕಾನಂದ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡುವ ಮೂಲಕ ಗೆಲ್ಲಿಸಬೇಕು ಎಂದು ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ. ರಾಮಚಂದ್ರ ಶಿಕ್ಷಕರಲ್ಲಿ ಮನವಿ ಮಾಡದರು.

ನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಕೆ. ವಿವೇಕಾನಂದ ಪರ ಮತಯಾಚಿಸಿ ಮಾತನಾಡಿದರು. ಜೆಡಿಎಸ್, ಬಿಜೆಪಿ ಸರ್ಕಾರ ಶಿಕ್ಷಕರ ಅನೇಕ ಸಮಸ್ಯೆಗಳನ್ನು ಈಡೇರಿಸಿದೆ. ಹಾಗಾಗಿ ಶಿಕ್ಷಕರ ಹಿತ ಬಯಸುವ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾದ ವಿವೇಕಾನಂದ ಅವರಿಗೆ ಶಿಕ್ಷಕರು ತಮ್ಮ ಅಮೂಲ್ಯವಾದ ಮೊದಲ ಪ್ರಾಶಸ್ತ್ಯದ ಮತವನ್ನು ನೀಡುವ ಮೂಲಕ ಅವರನ್ನು ಜಯಶೀಲರನ್ನಾಗಿ ಮಾಡಿ ತಮ್ಮ ಸೇವೆಗೆ ಅವಕಾಶ ಮಾಡಿಕೊಡಬೇಕು ಎಂದು ರಾಮಚಂದ್ರ ಮನವಿ ಮಾಡಿದರು.

ರಾಜ್ಯದಲ್ಲಿ ಬಿಜೆಪಿ, ಜೆಡಿಎಸ್ ಆಡಳಿತದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಲಾಗಿತ್ತು. 2005–06ರಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಮೀಸಲಿಟ್ಟಿದ್ದು 4,800 ಕೋಟಿ ಅನುದಾನ, ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಮೀಸಲಿಟ್ಟಿದ್ದು ಕೋಟಿ, ಕೋಟಿ ಅನುದಾನ. ಶಿಕ್ಷಕರಿಗೆ ವೈದ್ಯಕೀಯ ಭತ್ಯೆ, ಒಂದು ಸಾವಿರ ಪ್ರೌಢಶಾಲೆಗಳು, 530 ಪದವಿ ಪೂರ್ವ ಕಾಲೇಜು ಸೇರಿದಂತೆ 2000 ಪದವಿ ಪೂರ್ವ ಉಪನ್ಯಾಸಕರ ನೇಮಕ ಆಗಿದ್ದು ಬಿಜೆಪಿ ಸರ್ಕಾರದ ಆಡಳಿತದಲ್ಲಿ. ಕಾಂಗ್ರೆಸ್‌ ಸರ್ಕಾರದಿಂದ ಇಂತಹ ಯಾವುದೇ ಕೊಡುಗೆ ನೀಡಲು ಸಾಧ್ಯವಾಗಿಲ್ಲ ಎಂದು ಆರೋಪಿಸಿದರು.

 ಸೇವಾಭಾರತಿ, ವಿಶ್ವಹಿಂದೂ ಪರಿಷತ್, ಜೆಎಸ್‌ಎಸ್ ಕಾಲೇಜು ಶಿಕ್ಷಣ ಸಂಸ್ಥೆಗಳಿಗೆ ತೆರಳಿ ಮತಯಾಚಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಓಬಿಸಿ ಮೋರ್ಚಾದ ರಾಷ್ಟ್ರೀಯ ಕಾರ‍್ಯಕಾರಿಣಿ ಸದಸ್ಯ ನೂರೊಂದುಶೆಟ್ಟಿ, ಮುಖಂಡ ಡಾ.ಎ.ಆರ್. ಬಾಬು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ. ವೃಷಬೇಂದ್ರಪ್ಪ, ನಿಕಟಪೂರ್ವ ಅಧ್ಯಕ್ಷ ಆರ್.ಸುಂದರ್, ಜಿಲ್ಲಾ ಉಪಾಧ್ಯಕ್ಷರಾದ ಸುಂದ್ರಪ್ಪ, ಶಿವುವಿರಾಟ್, ಜಿಲ್ಲಾ ಕಾರ್ಯದರ್ಶಿ ನಟರಾಜು, ನಗರ ಮಂಡಲ ಅಧ್ಯಕ್ಷ ಶಿವರಾಜ್, ಗ್ರಾಮಾಂತರ ಮಂಡಲ ಅಧ್ಯಕ್ಷ ಮಹೇಶ್, ಮಹಿಳಾ ಮೋರ್ಚಾದ ಅಧ್ಯಕ್ಷೆ ಕಮಲಮ್ಮ, ಪ್ರಧಾನ ಕಾರ್ಯದರ್ಶಿ ಶೈಲ, ಮುಖಂಡ ವೇಣುಗೋಪಾಲ್ ಹಾಜರಿದ್ದರು.