ಸಾರಾಂಶ
ಮುಂಡರಗಿ: ಜನತೆಗೆ ಉಚಿತ ಗ್ಯಾರಂಟಿ ಕೊಡುವ ಮೂಲಕ ರಾಜ್ಯದಲ್ಲಿ ಕಳೆದ 11ತಿಂಗಳಿಂದ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದಿಂದ ಅಭಿವೃದ್ಧಿ ಶೂನ್ಯವಾಗಿದೆ. ಆದ್ದರಿಂದ ಹಾವೇರಿ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬಸವರಾಜ ಬೊಮ್ಮಾಯಿಗೆ ಮತ ನೀಡಿ ಬೆಂಬಲಿಸಬೇಕು ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ ಹೇಳಿದರು.
ಅವರು ಸೋಮವಾರ ಸಂಜೆ ತಾಲೂಕಿನ ಕಲಕೇರಿ ಗ್ರಾಮದಲ್ಲಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪರ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 10 ವರ್ಷದ ಅವಧಿಯಲ್ಲಿ ಯಾವುದೇ ಭಯೋತ್ಪಾದಕ ಚಟುವಟಿಕೆ ನಡೆಯದಂತೆ, ಭ್ರಷ್ಟಾಚಾರ ರಹಿತ ಪಾರದರ್ಶಕ ಆಡಳಿತ ನಡೆಸಿದ್ದಾರೆ. ಹೀಗಾಗಿ ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಹೆಚ್ಚು ಬೆಲೆ ಬಂದಿದೆ. ನರೇಂದ್ರ ಮೋದಿ ಅವರನ್ನು ಇಡೀ ದೇಶದ ಜನತೆ ಅರ್ಥ ಮಾಡಿಕೊಂಡಿದ್ದಾರೆ. ಅವರೂ ಸಹ ಜನರ ಮನಸ್ಸನ್ನು ಗೆದ್ದಿದ್ದಾರೆ. ಅದಕ್ಕೆ ಅವರು ಮಾಡಿದ ಅಭಿವೃದ್ಧಿ ಕೆಲಸಗಳೇ ಸಾಕ್ಷಿ. ಭದ್ರತೆ ದೃಷ್ಠಿಯಿಂದ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಮತದಾರರು ಗ್ಯಾರಂಟಿ ಯೋಜನೆಗಳಿಗೆ ಕಿವಿಗೊಡದೇ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ ನೀರಾವರಿ ತಜ್ಞೆ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರದಲ್ಲಿ ನರೇಂದ್ರ ಮೋದಿಯವರ ಕಾರ್ಯ ಮೆಚ್ಚಿ ಬಿಜೆಪಿಗೆ ಮತ ನೀಡುವ ಮೂಲಕ ಹಾವೇರಿ ಕ್ಷೇತ್ರದಲ್ಲಿ ಬೊಮ್ಮಾಯಿಯವರನ್ನು ಆರಿಸಿ ತರಲಿದ್ದಾರೆ. ದೇಶದಲ್ಲಿ 390ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದರು.
ಧಾರವಾಡ ಕೆಸಿಸಿ ಬ್ಯಾಂಕ್ ಅಧ್ಯಕ್ಷ ಶಿವಕುಮಾರಗೌಡ ಪಾಟೀಲ ಮಾತನಾಡಿ, ಬಸವರಾಜ ಬೊಮ್ಮಾಯಿ ಈ ಭಾಗದಿಂದ ಎರಡು ಭಾರಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದು, ಇಲ್ಲಿನ ಎಲ್ಲ ಸಮಸ್ಯೆಗಳ ಬಗ್ಗೆ ಅವರ ಗಮನಕ್ಕೆ ಇದೆ. ಆದರಿಂದ ಈ ಭಾಗದಲ್ಲಿ ನವೋದಯ ಶಾಲೆ ಹಾಗೂ ಸಿಂಗಟಾಲೂರು ಏತನೀರಾವರಿ ಯೋಜನೆಗೆ ಹೆಚ್ಚಿನ ಪ್ರಮಾಣದಲ್ಲಿ ಅನುಕೂಲವಾಗಿದೆ. ಅವರು ಸಂಸದರಾಗಿ ಕೇಂದ್ರ ಸಚಿವರಾಗುವ ಮೂಲಕ ಇಲ್ಲಿ ಹೊಸ ಅಭಿವೃದ್ಧಿ ಪರ್ವ ಮಾಡುತ್ತಾರೆ. ಹೀಗಾಗಿ ನಾವೆಲ್ಲರೂ ಅವರಿಗೆ ಹೆಚ್ಚಿನ ಮತ ನೀಡುವ ಮೂಲಕ ಕೇಂದ್ರಕ್ಕೆ ಕಳಿಸೋಣ ಎಂದರು.ಬಿಜೆಪಿ ಮುಂಡರಗಿ ಮಂಡಲದ ಅಧ್ಯಕ್ಷ ಹೇಮಗಿರೀಶ ಹಾವಿನಾಳ ಮಾತನಾಡಿದರು. ಕಾರ್ಯಕ್ರಮದಲ್ಲಿ ಕರಬಸಪ್ಪ ಹಂಚಿನಾಳ, ಲಿಂಗರಾಜಗೌಡ ಪಾಟೀಲ, ಅಂದಪ್ಪ ಮೇಟಿ, ಕಲಕೇರಿ ಗ್ರಾಪಂ ಅಧ್ಯಕ್ಷೆ ಪುಷ್ಪಾ ತಿಪ್ಪಾಪೂರ, ಉಪಾಧ್ಯಕ್ಷ ಬಸವರಾಜ ದೇಸಾಯಿ, ಲಿಂಗನಗೌಡ ಪಾಟೀಲ, ಹನಮಂತಪ್ಪ ಕಕ್ಕೂರ, ಯಮನಮ್ಮ ಬಂಡಿವಡಿವಡ್ಡರ, ರವೀಂದ್ರ, ಕೊಪ್ಪಣ್ಣ ಕೊಪ್ಪಣ್ಣವರ, ಮಂಜುನಾಥಗೌಡ ಪಾಟೀಲ, ಎಸ್.ವಿ. ಪಾಟೀಲ, ಸುಭಾಸ ಗುಡಿಮನಿ, ಕುಮಾರಸ್ವಾಮಿ ಹಿರೇಮಠ, ರಮೇಶ ಹುಳಕಣ್ಣವರ, ಬಸವರಾಜ ಹಬಿಳಿಮಗ್ಗದ, ಮೈಲಾರಪ್ಪ ಕಲಕೇರಿ, ಪವನ ಮೇಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಕಾರ್ಯಕ್ರಮದ ನಂತರ ಹಾಲಪ್ಪ ಆಚಾರ್ ಮಾಜಿ ಸಚಿವ ಎಸ್.ಎಸ್. ಪಾಟೀಲ ಅವರ ನಿವಾಸಕ್ಕೆ ತೆರಳಿ ಅವರನ್ನು ಭೇಟಿ ಮಾಡಿ ಮಾತನಾಡಿದರು. ನಂತರ ಅಂದಪ್ಪ ಮೇಟಿ ನಿವಾಸಕ್ಕೆ ಭೇಟಿ ಮಾಡಿದರು.