ಜನರ ಸಂಕಷ್ಟಕ್ಕೆ ಸ್ಪಂದಿಸಿದ ಕಾಂಗ್ರೆಸ್ ಬೆಂಬಲಿಸಿ: ಪ್ರಕಾಶ

| Published : Apr 13 2024, 01:03 AM IST

ಸಾರಾಂಶ

ಚಿಕ್ಕೋಡಿ: ರಾಜ್ಯದಲ್ಲಿರುವ ಸಾಮಾನ್ಯ ಜನರ ಸಂಕಷ್ಟ ಅರಿತು ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಜನರ ಕಣ್ಣೀರು ಒರೆಸುವ ಕೆಲಸ ಮಾಡಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಹೇಳಿದರು.

ಕನ್ನಡಪ್ರಭ ವಾರ್ತೆ ಚಿಕ್ಕೋಡಿ

ರಾಜ್ಯದಲ್ಲಿರುವ ಸಾಮಾನ್ಯ ಜನರ ಸಂಕಷ್ಟ ಅರಿತು ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಜನರ ಕಣ್ಣೀರು ಒರೆಸುವ ಕೆಲಸ ಮಾಡಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಹೇಳಿದರು.

ಚಿಕ್ಕೋಡಿ-ಸದಲಗಾ ಮತಕ್ಷೇತ್ರದ ಖಡಕಲಾಟ ಗ್ರಾಮದಲ್ಲಿ ಶುಕ್ರವಾರ ಚಿಕ್ಕೋಡಿ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣೆ ಪ್ರಚಾರ ಹಾಗೂ ಖಡಕಲಾಟ ಜಿಪಂ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ಪ್ರತಿ ತಿಂಗಳು ₹2000 ಹಾಗೂ ಉಚಿತ ಬಸ್ ಪ್ರಯಾಣ ಯೋಜನೆಗಳಿಂದ ಜನರಿಗೆ ಅನುಕೂಲವಾಗಿವೆ. ಮತದಾರರು ಕಾಂಗ್ರೆಸ್‌ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಮಾಜಿ ಶಾಸಕರಾದ ಕಾಕಾಸಾಹೇಬ ಪಾಟೀಲ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಜಿಲ್ಲಾ ಪಂಚಾಯತಿ ಸದಸ್ಯರಾದ ಸತೀಶ ಪಾಟೀಲ, ವಿನೋದ ಕಾಗೆ, ನಾಸಿರ ತಹಸೀಲ್ದಾರ್‌, ರಾಕೇಶ ಚಿಂಚಣೆ, ಮಾಣಿಕ ಪಾಟೀಲ, ಭೀಮಾ ಉಡಗಟ್ಟಿ, ಭೀಮಾ ಖಂಚನಾಳೆ, ಜೀತೇಂದ್ರ ಪಾಟೀಲ, ಪ್ರಮೋದ ಪಾಟೀಲ, ರೋಹಿತ ಯಾದವ ಹಾಗೂ ನವಲಿಹಾಳ, ಖಡಕಲಾಟ, ಚಿಂಚಣಿ, ಕೋಥಳಿ, ಚಿಕ್ಕಲವಾಳ ಹಾಗೂ ಶಿರಗಾಂವ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಸೇರಿದಂತೆ ಸಾವಿರಾರು ಕಾರ್ಯಕರ್ತರು ಉಪಸ್ಥಿತರಿದ್ದರು.