ಸಾರಾಂಶ
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲೂಕು ಕಚೇರಿ ಮುಂಭಾಗ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳು ನಡೆಸುತ್ತಿರುವ ಎರಡನೇ ಹಂತದ ಮುಷ್ಕರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಮುನಿರಾಜು ಧರಣಿ ಸ್ಥಳಕ್ಕೆ ತೆರಳಿ ಬೆಂಬಲ ಸೂಚಿಸಿದರು.
ಶಿಡ್ಲಘಟ್ಟ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲೂಕು ಕಚೇರಿ ಮುಂಭಾಗ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳು ನಡೆಸುತ್ತಿರುವ ಎರಡನೇ ಹಂತದ ಮುಷ್ಕರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಮುನಿರಾಜು ಧರಣಿ ಸ್ಥಳಕ್ಕೆ ತೆರಳಿ ಬೆಂಬಲ ಸೂಚಿಸಿದರು.
ಈ ವೇಳೆ ಮಾತನಾಡಿದ ಅವರು, ಗ್ರಾಮ ಆಡಳಿತ ಅಧಿಕಾರಿಗಳ ವಾರ್ಷಿಕ ವೇತನ ಭತ್ಯೆಯನ್ನು ನೀಡಬೇಕು, ಅಂತರ್ ಜಿಲ್ಲೆ ವರ್ಗಾವಣೆ ನೀಡಬೇಕು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳಿಗೆ ಪ್ರತ್ಯೇಕ ಕಚೇರಿಗಳನ್ನು ನೀಡಬೇಕು ಎಂದರು.ಲ್ಯಾಪ್ ಟಾಪ್ , ಪ್ರಿಂಟರ್ ಗಳನ್ನು ನೀಡಬೇಕು ಮತ್ತು ಇವರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಬೇಕು. ಎರಡನೇ ಹಂತದ ಮುಷ್ಕರಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಬೆಂಬಲ ಸೂಚಿಸುತ್ತೇವೆ ಎಂದು ತಿಳಿಸಿದರು.ಸಂಘದ ಮಹಿಳಾ ಘಟಕ ಅಧ್ಯಕ್ಷೆ ಮಧು ಲತಾ ಮಾತನಾಡಿದರು. ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಉಪಾಧ್ಯಕ್ಷ ಆಸೀಫ್, ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ವಿಸ್ಡಂ ನಾಗರಾಜ್, ಸಂಘಟನಾ ಕಾರ್ಯದರ್ಶಿ ದೇವು, ನಗರ ಘಟಕ ಉಪಾಧ್ಯಕ್ಷ ಸಾಧಿಕ್, ಯುವ ಘಟಕ ಅಧ್ಯಕ್ಷ ನಂದತೇಜ, ಮಹಿಳಾ ಘಟಕ ಉಪಾಧ್ಯಕ್ಷೆ ಲಕ್ಷ್ಮಿ, ಶಾರದಮ್ಮ ಶ್ರೀರಾಮ್, ವರದರಾಜ್, ಕೆ ಅರುಣ್ ಕುಮಾರ್ ಸೇರಿದಂತೆ ಮತ್ತಿತರರು ಹಾಜರಿದ್ದರು.