ಸಾರಾಂಶ
ಸರ್ಕಾರದ ಸೌಲಭ್ಯಗಳನ್ನು ಗ್ರಾಮೀಣ ಭಾಗದ ಅರ್ಹ ಜನರಿಗೆ ತಲುಪಿಸುವುದು ಸಂಘ ಸಂಸ್ಥೆಗಳ ಪ್ರಮುಖ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಗಂಗಾಮತ ಸಮುದಾಯದ ಅಭಿವೃದ್ಧಿ ನಿಗಮದಿಂದ ಸಿಗುವ ಸಾಲ ಸೌಲಭ್ಯವನ್ನು ಸಮುದಾಯದ ಕಟ್ಟಕಡೆಯ ಫಲಾನುಭವಿಗೆ ತಲುಪಿಸುವ ನಿಟ್ಟಿನಲ್ಲಿ ತಾವು ಶ್ರಮಿಸಿ.
ಕನ್ನಡಪ್ರಭ ವಾರ್ತೆ ಮಂಡ್ಯ
ಗಂಗಾಮತ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕೆಂಬ ಬಹುದಿನಗಳ ಬೇಡಿಕೆಯ ನಿರಂತರ ಹೋರಾಟಕ್ಕೆ ಬೆಂಬಲವಾಗಿ ನಿಲ್ಲುವುದಾಗಿ ಶ್ರೀವೇದವ್ಯಾಸ ಆಶ್ರಮ ಸೇವಾ ಟ್ರಸ್ಟ್‌ನ ಬಸವಾನಂದ ಸ್ವಾಮೀಜಿ ತಿಳಿಸಿದರು.ತಾಲೂಕಿನ ಕೋಣನಹಳ್ಳಿ ಗೇಟ್‌ನಲ್ಲಿ ಗಂಗಾಮತ ಮಹಿಳಾ ಸಂಘದ ನೂತನ ಕಚೇರಿ ಉದ್ಘಾಟನೆ, ತಾಲೂಕು ಸಂಘದ ಪದಾಧಿಕಾರಿಗಳಿಗೆ ಅಧಿಕಾರ ಪದಗ್ರಹಣ ಸಮಾರಂಭದ ಉದ್ಘಾಟಿಸಿ ಮಾತನಾಡಿ, ಗಂಗಾಮತ ಮಹಿಳಾ ಸಂಘ ಹಾಗೂ ಭೀಷ್ಮಪಡೆ ಸಂಘಟನೆಗಳು ಜಿಲ್ಲೆಯಲ್ಲಿ ಉತ್ತಮವಾಗಿ ಕಾರ್‍ಯನಿರ್ವಹಿಸುತ್ತಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾ ಗಂಗಾಮತ ಮಹಿಳಾ ಸಂಘದ ಅಧ್ಯಕ್ಷೆ ಗಾಯಿತ್ರಿ ಮಾತನಾಡಿ, ರಥಸಪ್ತಮಿ ವೇಳೆ ಸಂಘದ ಕಚೇರಿ ಉದ್ಘಾಟನೆ ಮಾಡಿದ್ದೇವೆ. ಸಂಘದ ಕಚೇರಿಯಿಂದ ಸಭೆ ಮಾಡಲು ಅನುಕೂಲವಾಗಲಿದೆ ಎಂದರು.ಸರ್ಕಾರದ ಸೌಲಭ್ಯಗಳನ್ನು ಗ್ರಾಮೀಣ ಭಾಗದ ಅರ್ಹ ಜನರಿಗೆ ತಲುಪಿಸುವುದು ಸಂಘ ಸಂಸ್ಥೆಗಳ ಪ್ರಮುಖ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಗಂಗಾಮತ ಸಮುದಾಯದ ಅಭಿವೃದ್ಧಿ ನಿಗಮದಿಂದ ಸಿಗುವ ಸಾಲ ಸೌಲಭ್ಯವನ್ನು ಸಮುದಾಯದ ಕಟ್ಟ ಕಡೆಯ ಫಲಾನುಭವಿಗೆ ತಲುಪಿಸುವ ನಿಟ್ಟಿನಲ್ಲಿ ತಾವು ಶ್ರಮಿಸುವುದಾಗಿ ಭರವಸೆ ನೀಡಿದರು.
ಈ ವೇಳೆ ಮಂಡ್ಯ ತಾಲೂಕು ಗಂಗಾಮತಸ್ಥ ಮಹಿಳಾ ಸಂಘದ ನೂತನ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ ನೀಡಲಾಯಿತು. ಭೀಷ್ಮಪಡೆ ಸಂಘಟನೆ ಜಿಲ್ಲಾಧ್ಯಕ್ಷ ಕನ್ನಲಿ ದೇವರಾಜು, ಪ್ರಧಾನ ಕಾರ್ಯದರ್ಶಿ ಸಂತೆಕಸಲಗೆರೆ ಬಸವರಾಜು, ಜಲದರ್ಶಿನಿ ಮೀನುಗಾರರ ಸಂಘದ ಅಧ್ಯಕ್ಷ ಚಿಕ್ಕಯ್ಯ, ರಾಜ್ಯ ಮೀನುಗಾರ ಮಹಾಮಂಡಳಿ ಮಾಜಿ ನಿರ್ದೇಶಕ ಚೆನ್ನಪ್ಪ, ಮುದಗಂದೂರು ಗ್ರಾಪಂ ಅಧ್ಯಕ್ಷೆ ಸುಜಾತ, ತಾಲೂಕು ಅಧ್ಯಕ್ಷೆ ರೇಣುಕಾ, ಗೌರಮ್ಮ, ಸೇರಿದಂತೆ ಇತರೆ ಪದಾಧಿಕಾರಿಗಳು ಭಾಗವಹಿಸಿದ್ದರು.