ಸಹಕಾರ ಸಂಘಗಳಲ್ಲಿ ಶೇ.50 ರಷ್ಟು ಮಹಿಳಾ ಮೀಸಲು ಹೆಚ್ಚಳಕ್ಕೆ ಬೆಂಬಲ: ಸಂಸದೆ ಸುಮಲತಾ

| Published : Mar 01 2024, 02:18 AM IST

ಸಹಕಾರ ಸಂಘಗಳಲ್ಲಿ ಶೇ.50 ರಷ್ಟು ಮಹಿಳಾ ಮೀಸಲು ಹೆಚ್ಚಳಕ್ಕೆ ಬೆಂಬಲ: ಸಂಸದೆ ಸುಮಲತಾ
Share this Article
  • FB
  • TW
  • Linkdin
  • Email

ಸಾರಾಂಶ

ಸರ್ಕಾರದ ಯೋಜನೆಗಳು ಸಹಕಾರ ಸಂಘಗಳಿಗಿಂತ ರೈತರಿಗೆ ಹೆಚ್ಚಿನ ಉಪಯುಕ್ತವಾಗಿರುವುದರಿಂದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಯೋಜನೆಗಳ ಲಾಭ ಪಡೆದು ಅಭಿವೃದ್ಧಿಪಥದಲ್ಲಿ ಮುನ್ನಡೆಯಬೇಕು. ಸಹಕಾರ ಸಂಘಗಳ ಮೂಲಕ ರೈತರು ಪಡೆದ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡಲು ಹೆಚ್ಚಿನ ಆಸಕ್ತಿ ಹೊಂದಬೇಕು. ಇದರಿಂದ ತಮ್ಮ ಅಭಿವೃದ್ಧಿ ಜೊತೆಗೆ ಸಹಕಾರ ಸಂಘವು ಆರ್ಥಿಕವಾಗಿ ಸದೃಢಗೊಳ್ಳಲು ಸಹಕಾರಿಯಾಗುತ್ತದೆ.

ಕನ್ನಡಪ್ರಭ ವಾರ್ತೆ ಮದ್ದೂರು

ಸಹಕಾರ ಸಂಘಗಳಲ್ಲಿ ಹಾಲಿ ಇರುವ ಶೇ.33ರಷ್ಟು ಮೀಸಲಾತಿಯನ್ನು ಶೇ.50ಕ್ಕೆ ಹೆಚ್ಚಿಸುವಂತೆ ಮಹಿಳೆಯರ ಹೋರಾಟಕ್ಕೆ ನನ್ನ ಸಹಮತವಿದೆ ಎಂದು ಸಂಸದೆ ಸುಮಲತಾ ಗುರುವಾರ ಹೇಳಿದರು.

ತಾಲೂಕಿನ ಗೆಜ್ಜಲಗೆರೆ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಕಚೇರಿ ಹಾಗೂ ಮಳಿಗೆಗಳನ್ನು ಉದ್ಘಾಟಿಸಿ ಮಾತನಾಡಿ, ಮಹಿಳಾ ಸಂಘಟನೆಗಳು ಸಹಕಾರ ಸಂಘದ ಮೂಲಕ ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಹಲವರಿಗೆ ಉದ್ಯೋಗ ಕಲ್ಪಿಸುವಲ್ಲಿ ಸಹಕಾರಿಯಾಗಿದೆ ಎಂದರು.

ಸಹಕಾರ ಸಂಘಗಳಲ್ಲಿ ಮಹಿಳೆಯರಿಗೆ ಹಾಲಿ ಶೇ.33ರಷ್ಟು ಮೀಸಲಾತಿ ಇದೆ. ಇದನ್ನು ಶೇ.50ಕ್ಕೆ ಹೆಚ್ಚಿಸುವಂತೆ ಒತ್ತಾಯಿಸಿ ಮಹಿಳೆಯರು ಬಹಳ ದಿನಗಳಿಂದ ಹೋರಾಟ ನಡೆಸುತ್ತಿದ್ದಾರೆ. ಅವರ ಬೇಡಿಕೆ ಈಡೇರಿಸಬೇಕು ಎಂದು ಸಲಹೆ ನೀಡಿದರು. ಸಹಕಾರ ಕ್ಷೇತ್ರ ಬೆಳೆದರೆ ಕೃಷಿಕರ ಪ್ರಗತಿ ಸಾಧ್ಯವಾಗುತ್ತದೆ. ಸಹಕಾರ ಸಂಘಗಳ ಜನಪ್ರತಿನಿಧಿಗಳು ಜನಪ್ರತಿನಿಧಿಗಳು ಸರ್ಕಾರದ ಯೋಜನೆಗಳನ್ನು ರೈತರಿಗೆ ಸಮರ್ಪಕವಾಗಿ ತಲುಪುವ ಕಾರ್ಯದಲ್ಲಿ ತೊಡಗಬೇಕು ಎಂದರು.

ಸರ್ಕಾರದ ಯೋಜನೆಗಳು ಸಹಕಾರ ಸಂಘಗಳಿಗಿಂತ ರೈತರಿಗೆ ಹೆಚ್ಚಿನ ಉಪಯುಕ್ತವಾಗಿರುವುದರಿಂದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಯೋಜನೆಗಳ ಲಾಭ ಪಡೆದು ಅಭಿವೃದ್ಧಿಪಥದಲ್ಲಿ ಮುನ್ನಡೆಯಬೇಕು. ಸಹಕಾರ ಸಂಘಗಳ ಮೂಲಕ ರೈತರು ಪಡೆದ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡಲು ಹೆಚ್ಚಿನ ಆಸಕ್ತಿ ಹೊಂದಬೇಕು. ಇದರಿಂದ ತಮ್ಮ ಅಭಿವೃದ್ಧಿ ಜೊತೆಗೆ ಸಹಕಾರ ಸಂಘವು ಆರ್ಥಿಕವಾಗಿ ಸದೃಢಗೊಳ್ಳಲು ಸಹಕಾರಿಯಾಗುತ್ತದೆ ಎಂದರು.

ಕಾರ್ಯಕ್ರಮಕ್ಕೂ ಮುನ್ನ ಆಗಮಿಸಿದ್ದ ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ಜಿಪಂ ಮಾಜಿ ಅಧ್ಯಕ್ಷ ಎಸ್.ಗುರುಚರಣ್, ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷ ಕೆ.ಸಿ.ಜೋಗಿಗೌಡ, ಮನ್ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ಅಂಗಡಿ ಮಳಿಗೆಗಳನ್ನು ಉದ್ಘಾಟಿಸಿದರು.

ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ .ಸಂದರ್ಶ, ಸಿಇಒ ವನಜಾಕ್ಷಿ, ಸಹಕಾರ ಸಂಘಗಳ ಉಪನಿಬಂಧಕಿ ಟಿ.ಆರ್.ರೇಖಾ, ಸಹಾಯಕ ನಿಬಂಧಕಿ ಕೆ.ಅನಿತ, ಅಭಿವೃದ್ಧಿ ಅಧಿಕಾರಿ ಧರಣಿಕುಮಾರ್, ತಾಲೂಕು ಸಹಕಾರ ಸಂಘದ ಉಪಾಧ್ಯಕ್ಷ ಪಿ. ರಾಘವ, ನಿರ್ದೇಶಕಿ ಸಿ.ಪಿ.ಸುಧಾ, ಸಂಘದ ಅಧ್ಯಕ್ಷ ಕೆ.ಬಿ.ಕೃಷ್ಣಪ್ಪ, ಉಪಾಧ್ಯಕ್ಷ ಸತೀಶ್, ನಿರ್ದೇಶಕರಾದ ಜಿ.ಬಿ.ಕೃಷ್ಣ, ಸಿದ್ದಪ್ಪ, ಕಾಶಿ ಹೆಗಡೆ, ಮಹದೇವು, ಸುಶೀಲಮ್ಮ, ಪ್ರಭಾವತಿ ಸಿದ್ದಪ್ಪಗೌಡ, ಶಿವ ಬೋರಯ್ಯ, ಅರವಿಂದ, ಸಿಇಒ ಕೆ.ಡಿ. ರಾಜೇಶ್ ಮತ್ತಿತರ ಇದ್ದರು.