ಈಡಿಗ ಜನಾಂಗದವರು ಪ್ರಣವಾನಂದ ಸ್ವಾಮೀಜಿ ಅವರ ನೇತೃತ್ವದಲ್ಲಿ ಹೋರಾಟದ ಮೂಲಕ ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಬೇಕು, ಈ ಹಿನ್ನೆಲೆಯಲ್ಲಿ ಸ್ವಾಮೀಜಿ ಅವರು ಕೈಗೊಂಡಿರುವ ಪಾದಯಾತ್ರೆಗೆ ಸಮುದಾಯದವರು ಸಂಪೂರ್ಣ ಬೆಂಬಲ
ಕನ್ನಡಪ್ರಭ ವಾರ್ತೆ ಶಿರಾ
ಈಡಿಗ ಜನಾಂಗದವರು ಪ್ರಣವಾನಂದ ಸ್ವಾಮೀಜಿ ಅವರ ನೇತೃತ್ವದಲ್ಲಿ ಹೋರಾಟದ ಮೂಲಕ ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಬೇಕು, ಈ ಹಿನ್ನೆಲೆಯಲ್ಲಿ ಸ್ವಾಮೀಜಿ ಅವರು ಕೈಗೊಂಡಿರುವ ಪಾದಯಾತ್ರೆಗೆ ಸಮುದಾಯದವರು ಸಂಪೂರ್ಣ ಬೆಂಬಲ ನೀಡುವಂತೆ ಕೆಪಿಎಸ್ಸಿ ಮಾಜಿ ಸದಸ್ಯ ಲಕ್ಷ್ಮೀ ನರಸಯ್ಯ ತಿಳಿಸಿದರು. ನಗರದಲ್ಲಿ ಬುಧವಾರ ಪ್ರಣವಾನಂದ ಸ್ವಾಮೀಜಿ ಅವರ ಪಾದಯಾತ್ರೆ ಹಿನ್ನೆಲೆಯಲ್ಲಿ ಸಭೆ ಹಾಗೂ ರಾಷ್ಟ್ರೀಯ ಈಡಿಗ ಮಹಾಮಂಡಲದ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿರುವ ಎ.ಸುರೇಶ್ ಹಾಗೂ ತಾಲೂಕು ಅಧ್ಯಕ್ಷ ಅಜ್ಜೇನಹಳ್ಳಿ ರಮೇಶ್ ಅವರನ್ನು ಅಭಿನಂದಿಸಿ ಮಾತನಾಡಿದರು.ರಾಷ್ಟ್ರೀಯ ಈಡಿಗ ಮಹಾಮಂಡಲದ ಹನುಮಂತರಾಜು ಮಾತನಾಡಿ, ಕುಣಿಗಲ್ ರಂಗಸ್ವಾಮಯ್ಯ ಅವರ ರಾಜೀನಾಮೆಯಿಂದ ತೆರವಾದ ರಾಷ್ಟ್ರೀಯ ಈಡಿಗ ಮಹಾಮಂಡಲದ ತುಮಕೂರು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಶಿರಾದ ಎ.ಸುರೇಶ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದರು.
ಜಿಲ್ಲಾಧ್ಯಕ್ಷ ಎ.ಸುರೇಶ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷ ಪ್ರಭಾ, ರಾಜ್ಯ ಉಪಾಧ್ಯಕ್ಷ ಮಣಿಕಂಠ, ವೆಂಕಟಶ್ವಾಮಯ್ಯ, ರಾಜಣ್ಣ, ದೇವರಾಜು, ಶ್ರೀನಿವಾಸ್, ಸೌಭಾಗ್ಯ ಶ್ರೀನಿವಾಸ್, ಬಸವರಾಜು, ಶ್ರೀನಿವಾಸ್, ವಿಜಯಕುಮಾರ್, ಶೇಷಾದ್ರಿ, ಬಾಲರಾಜು ಸೇರಿದಂತೆ ಹಲವರು ಹಾಜರಿದ್ದರು.