ಸಾರಾಂಶ
ರಾಮನಗರ: ಬಿಡದಿ ಟೌನ್ ಶಿಪ್ ಗಾಗಿ ಭೂ ಸ್ವಾಧೀನ ವಿರೋಧಿಸಿ ರೈತರು ಜುಲೈ 21ರಂದು ಕರೆನೀಡಿರುವ ಬಂದ್ ಗೆ ಜನತಾ ಪಕ್ಷ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಪಕ್ಷದ ರೈತ ಘಟಕ ಅಧ್ಯಕ್ಷ ಬೈರೇಗೌಡ ತಿಳಿಸಿದರು.
ರಾಮನಗರ: ಬಿಡದಿ ಟೌನ್ ಶಿಪ್ ಗಾಗಿ ಭೂ ಸ್ವಾಧೀನ ವಿರೋಧಿಸಿ ರೈತರು ಜುಲೈ 21ರಂದು ಕರೆನೀಡಿರುವ ಬಂದ್ ಗೆ ಜನತಾ ಪಕ್ಷ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಪಕ್ಷದ ರೈತ ಘಟಕ ಅಧ್ಯಕ್ಷ ಬೈರೇಗೌಡ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹುರಾಷ್ಟ್ರೀಯ ಕಂಪನಿಗಳ, ರಿಯಲ್ ಎಸ್ಟೇಟ್ ಮಾಫಿಯಾ ಹಾಗೂ ಜಾಗತಿಕ ಆಹಾರದ ಮಾಫಿಯಾಗಳ ಒತ್ತಡಕ್ಕೆ ಮಣಿದುರಾಜ್ಯ ಸರ್ಕಾರ ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ಫಲವತ್ತಾದ ಕೃಷಿ ಭೂಮಿಯನ್ನು ಬಲವಂತವಾಗಿ ಭೂಸ್ವಾಧೀನ ಪಡಿಸಿಕೊಳ್ಳುವುದನ್ನು ಕೈಬಿಡೇಕು ಎಂದು ಆಗ್ರಹಿಸಿದರು.
ಬೈರಮಂಗಲ ಮತ್ತು ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಮಾರು 24 ಗ್ರಾಮಗಳ ರೈತರ ಕೃಷಿ ಆಧಾರಿತ ಸುಮಾರು 9600 ಎಕರೆ ಜಮೀನನ್ನು ಬಿಡದಿ ಟೌನ್ ಶಿಪ್ ಯೋಜನೆಗಾಗಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಫಲವತ್ತಾದ ಕೃಷಿ ಭೂಮಿಯನ್ನೇ ಭೂಸ್ವಾಧೀನ ಪಡಿಸಿಕೊಳ್ಳುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.ಈ ಯೋಜನೆಗೆ 24 ಗ್ರಾಮಗಳ ಶೇಕಡ 80ರಷ್ಟು ರೈತರು ಅಸಮ್ಮತಿ ಸೂಚಿಸಿದ್ದಾರೆ. ಆದರೂ ಸರ್ಕಾರ ಬಲವಂತವಾಗಿ ಭೂ ಸ್ವಾಧೀನ ಮಾಡುತ್ತಿರವುದು ಭೂ ಸ್ವಾಧೀನ ಕಾಯ್ದೆ 2013ರ ಸ್ಪಷ್ಟ ಉಲ್ಲಂಘನೆಯಾಗಿದೆ. ಆದ್ದರಿಂದ ಭೂ ಸ್ವಾಧೀನ ಪ್ರಕ್ರಿಯೆ ಕೈಬಿಡಬೇಕು ಎಂದು ಬೈರೇಗೌಡ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಪಕ್ಷದ ರಾಜ್ಯ ಮಹಾಪ್ರಧಾನ ಕಾರ್ಯದರ್ಶಿ ಎನ್.ನಾಗೇಶ್ , ರಾಜ್ಯ ಕಾರ್ಯಾಧ್ಯಕ್ಷ ಡಿ.ಎಂ.ಮಾದೇಗೌಡ, ಮುಖಂಡರಾದ ಕೃಷ್ಣಯ್ಯ, ರಾಧಾಕೃಷ್ಣ, ಕೃಷ್ಣಮೂರ್ತಿ ಇತರರಿದ್ದರು.19ಕೆಆರ್ ಎಂಎನ್ 1.ಜೆಪಿಜಿ
ಜನತಾ ಪಕ್ಷ ರೈತ ಘಕದ ಅಧ್ಯಕ್ಷ ಬೈರೇಗೌಡ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.