ರೈತ ಹೋರಾಟ ಸಮಿತಿ ಪ್ರತಿಭಟನೆಗೆ ವಿವಿಧ ಗ್ರಾಮಗಳ ಅಧ್ಯಕ್ಷರ ಬೆಂಬಲ

| Published : Dec 06 2024, 08:55 AM IST

ರೈತ ಹೋರಾಟ ಸಮಿತಿ ಪ್ರತಿಭಟನೆಗೆ ವಿವಿಧ ಗ್ರಾಮಗಳ ಅಧ್ಯಕ್ಷರ ಬೆಂಬಲ
Share this Article
  • FB
  • TW
  • Linkdin
  • Email

ಸಾರಾಂಶ

ಸಿ ಆ್ಯಂಡ್ ಡಿ ಭೂಮಿ ಭೂಮಂಜೂರಿಗೆ ಆಗ್ರಹಿಸಿ ರೈತ ಹೋರಾಟ ಸಮಿತಿ ಹೋರಾಟಕ್ಕೆ ವಿವಿಧ ಗ್ರಾಮಗಳ ಅಧ್ಯಕ್ಷರು ಬೆಂಬಲ ವ್ಯಕ್ತಪಡಿಸಿದ್ದಾರೆ. ರೈತ ಹೋರಾಟ ಸಮಿತಿ ವತಿಯಿಂದ ಒಕ್ಕಲಿಗರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷರ ಸಭೆಯಲ್ಲಿ ಹೋರಾಟದ ರೂಪುರೇಷಗಳ ಬಗ್ಗೆ ಚರ್ಚೆ ನಡೆಯಿತು.

ಕನ್ನಡಪ್ರಭ ವಾರ್ತೆ ಸೋಮವಾರಪೇಟೆ

ಸಿ ಆ್ಯಂಡ್ ಡಿ ಭೂಮಿ ಭೂಮಂಜೂರಿಗೆ ಆಗ್ರಹಿಸಿ ರೈತ ಹೋರಾಟ ಸಮಿತಿ ಹೋರಾಟಕ್ಕೆ ವಿವಿಧ ಗ್ರಾಮಗಳ ಅಧ್ಯಕ್ಷರು ಬೆಂಬಲ ವ್ಯಕ್ತಪಡಿಸಿದ್ದಾರೆ.

ರೈತ ಹೋರಾಟ ಸಮಿತಿ ವತಿಯಿಂದ ಒಕ್ಕಲಿಗರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷರ ಸಭೆಯಲ್ಲಿ ಹೋರಾಟದ ರೂಪುರೇಷಗಳ ಬಗ್ಗೆ ಚರ್ಚೆ ನಡೆಯಿತು.

ಕಳೆದ ೫ ದಶಕಗಳಿಂದ ಸಿ ಆ್ಯಂಡ್ ಡಿ ಭೂಮಿಯಲ್ಲಿ ರೈತರು ಕೃಷಿ ಮಾಡಿಕೊಂಡು ಬರುತ್ತಿದ್ದಾರೆ. ಸಿ ಆ್ಯಂಡ್ ಡಿ ಭೂಮಿಯನ್ನು ಕೃಷಿಗೆ ಯೋಗ್ಯವಲ್ಲದ ಭೂಮಿ ಎಂದು ಕಂದಾಯ ಇಲಾಖೆಯ ಬೇಜವಾಬ್ದಾರಿಯಿಂದ ದಾಖಲಿಸಿದೆ ಎಂದು ಹೋರಾಟ ಸಮಿತಿ ಅಧ್ಯಕ್ಷ ಚಕ್ರವರ್ತಿ ಸುರೇಶ್ ಹೇಳಿದರು.

ಸಿ ಆ್ಯಂಡ್ ಡಿ ಭೂಮಿ ಎಲ್ಲಿದೆ ಎಂಬುದೇ ಕಂದಾಯ ಇಲಾಖೆಗೆ ಗೊತ್ತಿಲ್ಲ. ಈಗ ಶಾಂತಳ್ಳಿ, ಬೆಟ್ಟದಳ್ಳಿ, ಗರ್ವಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸೇರಿದಂತೆ ತಾಲೂಕಿನ ಕೆಲ ಕಡೆ ೨೫ ಸಾವಿರ ಎಕರೆ ಸಿ ಆ್ಯಂಡ್ ಡಿ ಭೂಮಿ ಇದ್ದು, ಅದನ್ನು ಅರಣ್ಯ ಇಲಾಖೆಗೆ ನೀಡಬೇಕೆಂದು ಸುಪ್ರೀಂ ಕೋರ್ಟ್ ಆದೇಶದಂತೆ ಸರ್ಕಾರ ತೆರವಿಗೆ ಮುಂದಾಗಿದೆ. ಕೃಷಿ ಭೂಮಿ ತೆರವು ಆದರೆ ರೈತರು ಬೀದಿಗೆ ಬರಬೇಕಾಗುತ್ತದೆ. ಹೋರಾಟದ ಮೂಲಕವೇ ನಮ್ಮ ಭೂಮಿಯ ಹಕ್ಕು ಪಡೆಯಬೇಕು. ಜಿಲ್ಲೆಯ ಹಾಗು ಮಲೆನಾಡು ವಿಭಾಗದ ಶಾಸಕರು ಒಗ್ಗಟ್ಟಿನಿಂದ ಅಧಿವೇಶನದಲ್ಲಿ ಚರ್ಚೆ ಮಾಡಿ, ರೈತರ ಭೂಮಿ ಉಳಿಸಿಕೊಡಬೇಕು ಎಂದರು.

ಸ್ಥಳಕ್ಕೆ ಬಂದ ಶಾಸಕ ಡಾ.ಮಂತರ್‌ಗೌಡ ರೈತರ ಬೇಡಿಕೆ ಆಲಿಸಿದರು.

ರೈತರಿಗೆ ನ್ಯಾಯ ಒದಗಿಸಿಕೊಡುವ ಪ್ರಾಮಾಣಿಕ ಪ್ರಯತ್ನ ನಡೆಯುತ್ತಿದೆ. ಈಗಾಗಲೇ ಕಂದಾಯ ಹಾಗು ಅರಣ್ಯ ಸಚಿವರೊಂದಿಗೆ ಅನೇಕ ಸುತ್ತಿನ ಮಾತುಕತೆ ನಡೆದಿದೆ. ರೈತರ ಸಂಕಷ್ಟ ಪರಿಹರಿಸುವ ಭರವಸೆಯನ್ನು ಸಚಿವರು ನೀಡಿದ್ದಾರೆ. ಸಿ ಆ್ಯಂಡ್ ಡಿ ಭೂಮಿ ಸಮಸ್ಯೆ, ಅರಣ್ಯ ಮತ್ತು ಕಂದಾಯ ಇಲಾಖೆಯ ಜಂಟಿ ಸರ್ವೆ, ಸೆಕ್ಷನ್ ೪ ಸರ್ವೆಯ ಬಗ್ಗೆ ಅಧಿವೇಶನದಲ್ಲಿ ಮಾತನಾಡುತ್ತೇನೆ ಎಂದು ಭರವಸೆ ನೀಡಿದರು.

ರೈತ ಸಂಘದ ಅಧ್ಯಕ್ಷ ಕೆ.ಎಂ.ದಿನೇಶ್, ಸಂಚಾಲಕರಾದ ಕೆ.ಎಂ.ಲೋಕೇಶ್, ಬಿ.ಜೆ.ದೀಪಕ್, ಬಗ್ಗನ ಅನಿಲ್ ಕುಮಾರ್ ಪ್ರಮುಖರಾದ ನಂದಕುಮಾರ್, ಬಿ.ಎಂ.ಸುರೇಶ್ ಇದ್ದರು.