ಸಜ್ಜನ ವ್ಯಕ್ತಿ ಬಿ.ಎನ್.ಚಂದ್ರಪ್ಪರನ್ನು ಬೆಂಬಲಿಸಿ: ಶಾಸಕ ಟಿ.ಬಿ.ಜಯಚಂದ್ರ

| Published : Apr 04 2024, 01:05 AM IST

ಸಜ್ಜನ ವ್ಯಕ್ತಿ ಬಿ.ಎನ್.ಚಂದ್ರಪ್ಪರನ್ನು ಬೆಂಬಲಿಸಿ: ಶಾಸಕ ಟಿ.ಬಿ.ಜಯಚಂದ್ರ
Share this Article
  • FB
  • TW
  • Linkdin
  • Email

ಸಾರಾಂಶ

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರು ಸರಳ ಸಜ್ಜನ ವ್ಯಕ್ತಿಯಾಗಿದ್ದಾರೆ. ಈಗಾಗಲೇ ಚಿತ್ರದುರ್ಗ ಕ್ಷೇತ್ರದಲ್ಲಿ ಲೋಕಸಭಾ ಸದಸ್ಯರಾಗಿ ಹಲವಾರು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಬಿ.ಎನ್.ಚಂದ್ರಪ್ಪ ಅವರನ್ನು ಎಲ್ಲರೂ ಬೆಂಬಲಿಸಬೇಕಿದೆ ಎಂದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಶಿರಾ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರು ಸರಳ ಸಜ್ಜನ ವ್ಯಕ್ತಿಯಾಗಿದ್ದಾರೆ. ಈಗಾಗಲೇ ಚಿತ್ರದುರ್ಗ ಕ್ಷೇತ್ರದಲ್ಲಿ ಲೋಕಸಭಾ ಸದಸ್ಯರಾಗಿ ಹಲವಾರು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಬಿ.ಎನ್.ಚಂದ್ರಪ್ಪ ಅವರನ್ನು ಎಲ್ಲರೂ ಬೆಂಬಲಿಸಬೇಕಿದೆ ಎಂದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದರು. ಅವರು ಬುಧವಾರ ನಗರದ ತಮ್ಮ ಗೃಹ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಲೋಕಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರ, ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಶಿರಾ ತಾಲೂಕು ಒಳಪಡುತ್ತದೆ. ತುಮಕೂರು ಜಿಲ್ಲೆಯ ಕುಣಿಗಲ್ ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಒಳಪಡುತ್ತದೆ. ಚಿತ್ರದುರ್ಗದಲ್ಲಿ ಬಿ.ಎನ್.ಚಂದ್ರಪ್ಪ, ತುಮಕೂರಿನಲ್ಲಿ ಎಸ್.ಪಿ.ಮುದ್ದುಹನುಮೇಗೌಡ, ಬೆಂಗಳೂರು ಗ್ರಾಮಾಂತರದಲ್ಲಿ ಡಿ.ಕೆ.ಸುರೇಶ್ ಅವರು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದಾರೆ. ಏ.೪ರಂದು ಚಿತ್ರದುರ್ಗ ಕ್ಷೇತ್ರದ ಬಿ.ಎನ್.ಚಂದ್ರಪ್ಪ ಹಾಗೂ ತುಮಕೂರು ಕ್ಷೇತ್ರದ ಎಸ್.ಪಿ.ಮುದ್ದುಹನುಮೇಗೌಡ ಅವರು ನಾಮಪತ್ರ ಸಲ್ಲಿಸುತ್ತಿದ್ದು, ನಾಮಪತ್ರ ಸಲ್ಲಿಕೆಗೆ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿ ಎಂದು ಮನವಿ ಮಾಡಿದರು. ಬರದ ಹಿನ್ನೆಲೆ ಎಸ್.ಡಿ.ಆರ್.ಎಫ್.ನಲ್ಲಿ ರಾಜ್ಯ ಸರ್ಕಾರ 1000 ಕೋಟಿ ರು.ಗೂ ಹೆಚ್ಚು ಹಣವನ್ನು ಬಿಡುಗಡೆ ಮಾಡಿ ರೈತರ ಖಾತೆಗಳಿಗೆ ತಾತ್ಕಾಲಿಕ ಹಣ ನೀಡಿ, ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಮೇವಿನ ಸಮಸ್ಯೆ ಬಾರದಂತೆ ಕ್ರಮ ಕೈಗೊಂಡಿದ್ದೇವೆ. ಅವರು ಕರ್ನಾಟಕದ ಜನ ನಿಮ್ಮ ಹಸಿ ಸುಳ್ಳುಗಳನ್ನು ನಂಬುವುದಿಲ್ಲ. ಕರ್ನಾಟಕದ ಜನ ವಿಧಾನಸಭೆಯಲ್ಲಿ ನೀಡಿದಂತೆಯೇ ಲೋಕಸಭೆಗೂ ಮತ ನೀಡುತ್ತಾರೆ. ನಿಮ್ಮ ಅಬ್ಬರದ ಪ್ರಚಾರಕ್ಕೆ ಜನ ಮರುಳಾಗುವುದಿಲ್ಲ. ಈ ರೀತಿ ಸುಳ್ಳು ಹೇಳವುದುದನ್ನು ಬಿಟ್ಟು ಸತ್ಯ ಹೇಳವುವ ಕೆಲಸ ಮಾಡಿ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಶಿರಾ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪಿ.ಆರ್.ಮಂಜುನಾಥ್, ಸದಸ್ಯ ಲಕ್ಕನಹಳ್ಳಿ ಶ್ರೀನಿವಾಸ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷ ನಟರಾಜ್ ಬರಗೂರು, ನಗರಸಭಾ ಸದಸ್ಯರಾದ ಬಿ.ಎಂ.ರಾಧಕೃಷ್ಣ, ಮಹೇಶ್, ನೂರುದ್ದೀನ್, ಬಗರ್ ಹುಕುಂ ಸಮಿತಿ ಸದಸ್ಯ ಮದ್ದಕ್ಕನಹಳ್ಳಿ ತಿಪ್ಪೇಸ್ವಾಮಿ, ಮುಖಂಡರಾದ ರಾಕೇಶ್, ಓಕೇಶ್ ನಾಯಕ ಸೇರಿದಂತೆ ಹಲವರು ಹಾಜರಿದ್ದರು.

ಕಾಂಗ್ರೆಸ್‌ ಗ್ಯಾರಂಟಿಗಳಿಂದ ಜನರಿಗೆ ಶಕ್ತಿ:ರಾಜ್ಯದಲ್ಲಿ ತೀವ್ರ ಬರಗಾಲ ಇದ್ದು, ಇಂತಹ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆ ಜನರಿಗೆ ಬರ ಎದುರಿಸುವ ಶಕ್ತಿ ನೀಡಿವೆ ಎಂದು ಟಿ.ಬಿ.ಜಯಚಂದ್ರ ಹೇಳಿದರು. ಮಹಿಳೆಯರ ಖಾತೆಗೆ ಪ್ರತಿ ತಿಂಗಳೂ ೨೦೦೦ ರು.ಹಣ ಜಮೆ ಆಗುತ್ತಿದೆ. ನಿರುದ್ಯೋಗಿಗಳಿಗೆ ಭತ್ಯೆ ನೀಡಲಾಗುತ್ತಿದೆ. ಉಚಿತ ಬಸ್ ಸೌಲಭ್ಯದಿಂದ ಲಕ್ಷಾಂತರ ಮಹಿಳೆಯರು ಅನುಕೂಲ ಪಡೆದಿದ್ದಾರೆ. ಉಚಿತ ವಿದ್ಯುತ್‌ನಿಂದ ಜನರಿಗೆ ಅನುಕೂಲವಾಗಿದ್ದು ಒಟ್ಟಾರೆ ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಬರ ಎದುರಿಸುವ ಶಕ್ತಿ ಬಂದಿದೆ ಎಂದರು. ಕೇಂದ್ರ ಗೃಹ ಸಚಿವರಿಂದ ಹಸಿ ಸುಳ್ಳು:

ರಾಜ್ಯದಲ್ಲಿ ೨೩೩ ತಾಲೂಕಿನಲ್ಲಿ ಬೀಕರ ಬರ ಉಂಟಾಗಿದೆ. ಈ ಬಗ್ಗೆ ಅಂಕಿ ಅಂಶಗಳ ಆಧಾರದ ಮೇಲೆ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಕೇಂದ್ರ ತಂಡ ಸಮೀಕ್ಷೆ ಮಾಡಿ ಸುಮಾರು ೩೮೦೦೦ ಕೋಟಿಯಷ್ಟು ಹಣದ ರೂಪದಲ್ಲಿ ನಷ್ಟವಾಗಿದೆ ಎಂದು ಕೇಂದ್ರಕ್ಕೆ ವರದಿಯನ್ನೂ ಸಲ್ಲಿಸಿದ್ದಾರೆ. ರಾಜ್ಯಕ್ಕೆ ಬರಪರಿಹಾರ ನೀಡುವಂತೆ ಸೆಪ್ಟಂಬರ್ ೨೦೨೩ರಲ್ಲಿಯೇ ರಾಜ್ಯ ಸರ್ಕಾರ ಮನವಿ ಸಲ್ಲಿಸಿದೆ. ಇದಾದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಸ್ವತಃ ಹೋಗಿ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಹೀಗಿದ್ದರೂ ಸಹ ಕೇಂದ್ರದ ಗೃಹ ಸಚಿವರು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ರಾಜ್ಯ ಬರಪರಿಹಾರಕ್ಕೆ ಮೂರು ತಿಂಗಳು ತಡವಾಗಿ ಮನವಿ ನೀಡಿದ್ದಾರೆ ಎಂದು ಹಸಿ ಸುಳ್ಳು ಹೇಳುತ್ತಿದ್ದಾರೆ. ಗೃಹ ಸಚಿವರು ಬರಪರಿಸ್ಥಿತಿಯ ವಸ್ತು ಸ್ಥಿತಿಯನ್ನು ಅರಿಯದೇ ರಾಜ್ಯಕ್ಕೆ ಬಂದಿದ್ದಾರೆಯೇ ಎಂದು ಜಯಚಂದ್ರ ಪ್ರಶ್ನಿಸಿದರು.