ಕೆಆರ್‌ಎಸ್‌ ಬೆಂಬಲಿಸಿ: ರವಿಕೃಷ್ಣಾರೆಡ್ಡಿ

| Published : Feb 22 2024, 01:51 AM IST

ಸಾರಾಂಶ

ರಾಮನಗರ: ಜನಪರ ಕಾಳಜಿಯ ಸ್ವಚ್ಚ, ಪ್ರಾಮಾಣಿಕ ರಾಜಕೀಯ ವ್ಯವಸ್ಥೆಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವನ್ನು ಬೆಂಬಲಿಸಿ ಎಂದು ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ತಿಳಿಸಿದರು.

ರಾಮನಗರ: ಜನಪರ ಕಾಳಜಿಯ ಸ್ವಚ್ಚ, ಪ್ರಾಮಾಣಿಕ ರಾಜಕೀಯ ವ್ಯವಸ್ಥೆಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವನ್ನು ಬೆಂಬಲಿಸಿ ಎಂದು ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ತಿಳಿಸಿದರು.

ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷದ ವತಿಯಿಂದ ನಡೆಯುತ್ತಿರುವ ಬೈಕ್ ಜಾಥಾ ಮಂಗಳವಾರ ಜಿಲ್ಲೆಗೆ ಆಗಮಿಸಿ ಜೂನಿಯರ್ ಕಾಲೇಜು ಮೈದಾನದಲ್ಲಿ ಬಹಿರಂಗ ಸಭೆಯಲ್ಲಿ ಮತನಾಡಿದ ಅವರು, ಭ್ರಷ್ಟ ವ್ಯವಸ್ಥೆಯನ್ನು ತೊಲಗಿಸಿ, ಭವ್ಯ ಸಮಾಜ ನಿರ್ಮಿಸಬೇಕು. ಸ್ವಾಭಿಮಾನದಿಂದ ಬದುಕಿ, ಬಾಳಲು ಕೆಆರ್‌ಎಸ್ ಪಕ್ಷ ಬೆಂಬಲಿಸಿ ಎಂದು ಕರೆ ನೀಡಿದರು.

ಭ್ರಷ್ಟರನ್ನು, ಅಪ್ರಾಮಾಣಿಕರನ್ನು, ಸ್ವಜನ ಪಕ್ಷಪಾತಿಗಳನ್ನು, ಸಮಾಜಘಾತುಕರನ್ನು, ಕುಟುಂಬ ರಾಜಕಾರಣದ ಮೂಲಕ ಪ್ರಜಾಪ್ರಭುತ್ವದ ಆಶಯಗಳನ್ನು ಮಣ್ಣುಪಾಲು ಮಾಡುತ್ತಿರುವ ಜೆಸಿಬಿ ಪಕ್ಷಗಳ ಪರಮಸ್ವಾರ್ಥ ರಾಜಕಾರಣಿಗಳನ್ನು ದೂರವಿಡಬೇಕು ಎಂದರು.

ರಾಜ್ಯ ಸಂಘಟನಾ ಕಾರ್ಯದರ್ಶಿ ಜೀವನ್ ಮಾತನಾಡಿ, ರಾಜ್ಯದ ಜನರಿಗೆ ದ್ರೋಹವೆಸಗುತ್ತಿರುವ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳನ್ನು ತಿರಸ್ಕರಿಸಿ ಕೆಆರ್‌ಎಸ್ ಅನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಬೈಕ್ ಜಾಥಾದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಎನ್. ದೀಪಕ್, ರಾಜ್ಯ ಕಾರ್ಯದರ್ಶಿ ನರಸಿಂಹಮೂರ್ತಿ, ಮಂಜುನಾಥ್, ರಾಜ್ಯ ಜಂಟಿ ಕಾರ್ಯದರ್ಶಿ ರಘುಪತಿ ಭಟ್, ರಾಜ್ಯ ಸಂಘಟನಾ ಚಂದ್ರಶೇಖರ್ ಮಠದ, ಬಿ.ಜಿ.ಕುಂಬಾರ, ಜಿಲ್ಲಾಧ್ಯಕ್ಷ ಸುಧಾಕರ್ ಮತ್ತಿತರರಿದ್ದರು.