ಶಿಕ್ಷಕರ ಸಮಸ್ಯೆ ಅರಿವಿರುವ ಮರಿತಿಬ್ಬೇಗೌಡರನ್ನು ಬೆಂಬಲಿಸಿ: ದರ್ಶನ್

| Published : Jun 02 2024, 01:46 AM IST

ಸಾರಾಂಶ

ಮರಿತಿಬ್ಬೇಗೌಡ ಅವರು 4 ಬಾರಿ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ಆಯ್ಕೆಯಾಗಿ ಹಲವಾರು ಶಿಕ್ಷಕರ ಸಮಸ್ಯೆಯನ್ನು ಸದನದಲ್ಲಿ ಧ್ವನಿ ಎತ್ತುವ ಮೂಲಕ ಪರಿಹಸಿಸಲು ಮುಂದಾಗಿದ್ದಾರೆ. ಜೊತೆಗೆ ಸತತವಾಗಿ ಶಿಕ್ಷಕರೊಂದಿಗೆ ಒಡನಾಟ ಇಟ್ಟುಕೊಂಡು ಶಿಕ್ಷಕರ ನೋವಿಗೆ ಸ್ಪಂದಿಸಿ ಕೆಲಸ ಮಾಡಿದ್ದಾರೆ. ಅಲ್ಲದೆ ಎನ್.ಪಿ.ಎಸ್ ರದ್ದುಗೊಳಿಸಿ ಒಪಿಎಸ್ ಯೋಜನೆ ಜಾರಿಗೊಳಿಸುವ ಬಗ್ಗೆ ಮುಖ್ಯಮಂತ್ರಿಗಳೂ ಕೂಡ ಒಪ್ಪಿಗೆ ನೀಡಿದ್ದು ಶೀಘ್ರದಲ್ಲೇ ಅದು ಕೂಡ ಜಾರಿಯಾಗಲಿದೆ.

ಕನ್ನಡಪ್ರಭ ವಾರ್ತೆ ನಂಜನಗೂಡು

ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಿ ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ ಒಪಿಎಸ್ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಸಲುವಾಗಿ ಶಿಕ್ಷಕರ ಸಮಸ್ಯೆಗಳ ಬಗ್ಗೆ ಅರಿವಿರುವ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಅವರಿಗೆ ಮೊದಲ ಪ್ರಾಶಸ್ತ್ಯದ ಮತ ನೀಡಿ ಜಯಶೀಲರನ್ನಾಗಿ ಮಾಡಿ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.

ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಲಯನ್ಸ್ ಶಾಲೆ, ರೋಟರಿ ಶಾಲೆ, ಕಾರ್ಮಲ್ ಶಾಲೆ, ಸಿಟಿಜನ್ ಶಾಲೆ ಸೇರಿದಂತೆ ವಿವಿಧ ಶಾಲಾ ಕಾಲೇಜಿಗೆ ತೆರಳಿ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಪರ ಮತಯಾಚಿಸಿ ಅವರು ಮಾತನಾಡಿದರು.

ಮರಿತಿಬ್ಬೇಗೌಡ ಅವರು 4 ಬಾರಿ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ಆಯ್ಕೆಯಾಗಿ ಹಲವಾರು ಶಿಕ್ಷಕರ ಸಮಸ್ಯೆಯನ್ನು ಸದನದಲ್ಲಿ ಧ್ವನಿ ಎತ್ತುವ ಮೂಲಕ ಪರಿಹಸಿಸಲು ಮುಂದಾಗಿದ್ದಾರೆ. ಜೊತೆಗೆ ಸತತವಾಗಿ ಶಿಕ್ಷಕರೊಂದಿಗೆ ಒಡನಾಟ ಇಟ್ಟುಕೊಂಡು ಶಿಕ್ಷಕರ ನೋವಿಗೆ ಸ್ಪಂದಿಸಿ ಕೆಲಸ ಮಾಡಿದ್ದಾರೆ. ಅಲ್ಲದೆ ಎನ್.ಪಿ.ಎಸ್ ರದ್ದುಗೊಳಿಸಿ ಒಪಿಎಸ್ ಯೋಜನೆ ಜಾರಿಗೊಳಿಸುವ ಬಗ್ಗೆ ಮುಖ್ಯಮಂತ್ರಿಗಳೂ ಕೂಡ ಒಪ್ಪಿಗೆ ನೀಡಿದ್ದು ಶೀಘ್ರದಲ್ಲೇ ಅದು ಕೂಡ ಜಾರಿಯಾಗಲಿದೆ ಎಂದರು.

ಶಿಕ್ಷಕರ ಸಮಸ್ಯೆಗಳ ಬಗ್ಗೆ ಬಹಳಷ್ಟು ಅರಿವಿರುವ ಸರಳ ಸಜ್ಜನ ವ್ಯಕ್ತಿ ಮರಿತಿಬ್ಬೇಗೌಡರಿಗೆ ಮೊದಲನೆ ಪ್ರಾಶಸ್ತ್ಯದ ಮತಗಳನ್ನು ನೀಡಿ ಅವರನ್ನು ಮತ್ತೊಮ್ಮೆ ಆಯ್ಕೆಗೊಳಿಸಿ ವಿಧಾನ ಪರಿಷತ್ ಗೆ ಕಳುಹಿಸಿಕೊಡಬೇಕು ಎಂದು ಅವರು ಮನವಿ ಮಾಡಿದರು.

ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಮಾತನಾಡಿ, ಮರಿತಿಬ್ಬೇಗೌಡ ಅವರು ಶಿಕ್ಷಕ ವೃಂದದ ಜೊತೆಗೆ ಆತ್ಮೀಯ ಸಂಬಂಧವನ್ನು ಹೊಂದಿ ಅವರ ನೋವಿಗೆ ಧ್ವನಿಯಾಗಿ ಕೆಲಸ ನಿರ್ವಹಿಸಿಕೊಂಡು ಬರುತ್ತಿದ್ದಾರೆ. ಶಿಕ್ಷಕರ ಬಹುದಿನದ ಕನಸಾಗಿರುವ 7ನೇ ವೇತನ ಆಯೋಗದ ಜಾರಿ ಸೇರಿದಂತೆ ಶಿಕ್ಷಕರ ಸಮಸ್ಯೆ ಬಗೆಹರಿಸಿ ಶಿಕ್ಷಕರ ಕ್ಷೇತ್ರದಲ್ಲಿ ಸಮಗ್ರ ಅಭಿವೃದ್ಧಿ ತರುವ ಸಲುವಾಗಿ ಅವರ ಹೆಸರಿನ ಮುಂದೆ 1 ಎಂದು ಬರೆಯುವ ಮೂಲಕ ಅವರನ್ನು ಗೆಲ್ಲಿಸಬೇಕು ಎಂದರು.

ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುರಹಟ್ಟಿ ಮಹೇಶ್, ಸಿ.ಎಂ. ಶಂಕರ್, ಶ್ರೀಕಂಠನಾಯಕ, ಜಿಪಂ ಮಾಜಿ ಸದಸ್ಯ ಕೆ. ಮಾರುತಿ, ಲತಾಸಿದ್ದಶೆಟ್ಟಿ, ಶಶಿರೇಖಾ, ಮುಖಂಡರಾದ ದೊರೆಸ್ವಾಮಿ ನಾಯಕ, ಶಿವಪ್ಪದೇವರು, ಹಾಡ್ಯ ಜಯರಾಂ, ಬಸವಣ್ಣ, ಮಂಜುನಾಥ್, ಶ್ರೀಧರ್, ನಗರಸಭಾ ಸದಸ್ಯರಾದ ಪ್ರದೀಪ್, ಶ್ರೀಕಂಠಸ್ವಾಮಿ, ಎಸ್.ಪಿ. ಮಹೇಶ್, ರವಿ, ಜಯಮಾಲಾ ಬೀರೇಗೌಡ, ನಗರಸಭಾ ಮಾಜಿ ಉಪಾಧ್ಯಕ್ಷ ದೊರೆಸ್ವಾಮಿ ಮೊದಲಾದರು ಇದ್ದರು.