ದೇಶದ ಅಭಿವೃದ್ಧಿಗಾಗಿ ಮೋದಿ ಬೆಂಬಲಿಸಿ: ಮುದ್ನಾಳ

| Published : Apr 19 2024, 01:00 AM IST

ಸಾರಾಂಶ

ದೇಶದ ಸರ್ವತೋಮುಖ ಅಭಿವೃದ್ಧಿಗಾಗಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕು. ಈ ದಿಸೆಯಲ್ಲಿ ಪ್ರತಿಯೊಬ್ಬ ಕಾರ್ಯಕರ್ತರು ಹಗಲಿರುಳು ಶ್ರಮಿಸುವಂತೆ ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಕರೆ ನೀಡಿದರು.

ಕನ್ನಡಪ್ರಭ ವಾರ್ತೆ ಯಾದಗಿರಿ

ದೇಶದ ಸರ್ವತೋಮುಖ ಅಭಿವೃದ್ಧಿಗಾಗಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕು. ಈ ದಿಸೆಯಲ್ಲಿ ಪ್ರತಿಯೊಬ್ಬ ಕಾರ್ಯಕರ್ತರು ಹಗಲಿರುಳು ಶ್ರಮಿಸುವಂತೆ ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಕರೆ ನೀಡಿದರು.

ಜಿಲ್ಲೆಯ ವಡಗೇರಾ ತಾಲೂಕಿನ ಮದರಕಲ್ ಗ್ರಾಮದ ಹಯ್ಯಾಳ ಮಹಾಶಕ್ತಿ ಕೇಂದ್ರದ ಮುಖಂಡ ಚೆನ್ನಾರಡ್ಡಿ ಪಾಟೀಲ್ ಮನೆ ಆವರಣದಲ್ಲಿ ನಡೆದ ರಾಯಚೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಕಳೆದ 5 ವರ್ಷಗಳಲ್ಲಿ ಕೇಂದ್ರ ಸರ್ಕಾರ ಮಾಡಿದ ಅಭಿವೃದ್ಧಿ ಕಾರ್ಯಗಳ ಬಗ್ಗೆ ನಮ್ಮ ಕಾರ್ಯಕರ್ತರು ಪ್ರತಿ ಮನೆಗೆ ಭೇಟಿಕೊಟ್ಟ ಮತದಾರರಲ್ಲಿ ಮನವರಿಕೆ ಮಾಡಿಕೊಡಬೇಕು ಎಂದು ಸಲಹೆ ನೀಡಿದರು.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಮಾರು ಹೋಗದೆ ದೇಶದ ಒಳಿತಿಗಾಗಿ ಜನತೆ ಈ ಬಾರಿ ಬಿಜೆಪಿಯನ್ನು ಬೆಂಬಲಿಸಬೇಕು. ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ ಯಾವುದೇ ಪ್ರಯೋಜನವಿಲ್ಲ. ನನಗೆ ಮುದ್ನಾಳ ಹೋಬಳಿಯಂತೆ, ಹಯ್ಯಾಳ ಹೋಬಳಿ ಜನ ಸಹ ಅಷ್ಟೇ ಪ್ರೀತಿಯಿಂದ ಕಂಡಿದ್ದಾರೆ ಎಂದು ಹೇಳಿದರು.

ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಮಾತನಾಡಿ, ನನ್ನ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶಕ್ತಿ ಮೀರಿ ಕೆಲಸ ಮಾಡಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಅವರ ಯೋಜನೆಗಳು ಶಾಶ್ವತ ಗ್ಯಾರಂಟಿಗಳಾಗಿವೆ. ಕಳೆದ ಬಾರಿಯಂತೆ ಈ ಬಾರಿಯೂ ಕ್ಷೇತ್ರದ ಜನತೆ ನನ್ನನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಜಿಲ್ಲಾಧ್ಯಕ್ಷ ಅಮೀನ್ ರೆಡ್ಡಿ ಯಾಳಗಿ ಮತ್ತು ಯುವ ಮುಖಂಡ ಮಹೇಶರೆಡ್ಡಿ ಮುದ್ನಾಳ ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪರುಶುರಾಮ ಕುರಕುಂದಿ, ಜಿಲ್ಲಾ ವಕ್ತಾರ ಹೆಚ್.ಸಿ. ಪಾಟೀಲ್, ಆರ್.ರುದ್ರಯ್ಯ, ಸದಾಶಿವಪ್ಪಗೌಡ ರೋಟ್ನಡಗಿ, ಸಿದ್ದಣಗೌಡ ಕಾಡಂನೊರ, ದೇವರಾಜನಾಯಕ ಉಳ್ಳೆಸೂಗುರ, ಚನ್ನಾರಡ್ಡಿಗೌಡ ಮಾದರಕಲ್, ಗ್ರಾಮಾಂತರ ಮಂಡಲದ ಅಧ್ಯಕ್ಷ ರಾಜಶೇಖರ ಕಾಂಡನೊರ, ಚನ್ನಾರಡ್ಡಿಗೌಡ ಮಾರಕಲ್, ಸಂಗು ಅನವಾರ, ಶರಣು ಐಕೂರ, ಪರ್ವತರಡ್ಡಿ ದೇಸಾಯಿ ಇತರರಿದ್ದರು.