ಸಾರಾಂಶ
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಅನುಭವಿಸಿ ಸಿಎಂ ಸಿದ್ದರಾಮಯ್ಯ ರಾಜಿನಾಮೆ
ನರಗುಂದ: ದೇಶದ ಉಜ್ವಲ್ ಭವಿಷ್ಯಕ್ಕಾಗಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ಕಾಂಗ್ರೆಸ್ ಪಕ್ಷದ ಹಿರಿಯರು ಸ್ವಇಚ್ಛೆಯಿಂದ ಬಿಜೆಪಿಗೆ ಆಗಮಿಸಿದ್ದು ಸಂತಸ ತಂದಿದೆ ಎಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.
ಅವರು ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಬೆನಕನಕೊಪ್ಪ ಗ್ರಾಮದ ಪಿಎಲ್ ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ದೇಸಾಯಿಗೌಡ ಪಾಟೀಲ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆ ಹಿನ್ನೆಲೆ ಪಕ್ಷಕ್ಕೆ ಸ್ವಾಗತಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಭವಿಷ್ಯವಿಲ್ಲ ಎಂಬುದನ್ನು ಅರಿತು ಮತ್ತು ಸ್ವಹಿತಾಸಕ್ತಿ ಬದಿಗಿಟ್ಟು ದೇಸಾಯಿಗೌಡ್ರ ಬಿಜೆಪಿ ಆಗಮಿಸಿದ್ದು ಒಳ್ಳೆಯ ಬೆಳವಣಿಗೆ ಆಗಿದೆ ಎಂದರು.ರಾಜ್ಯದಲ್ಲಿ ಈ ಬಾರಿ ಬಿಜೆಪಿ 25 ಸ್ಥಾನಗಳಲ್ಲಿ ಜಯಗಳಿಸಲಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಅನುಭವಿಸಿ ಸಿಎಂ ಸಿದ್ದರಾಮಯ್ಯ ರಾಜಿನಾಮೆ ಕೊಡುತ್ತಾರೆ. ಈ ಎಲ್ಲ ಗೊಂದಲಗಳ ನಡುವೆ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದರು.ಪಕ್ಷ ಸೇರ್ಪಡೆ ನಂತರ ಮಾತನಾಡಿದ ದೇಸಾಯಿಗೌಡ ಪಾಟೀಲ, ನಮ್ಮ ವೈಯಕ್ತಿಕ ಸ್ವಹಿತಾಸಕ್ತಿ ಬದಿಗಿಟ್ಟು ರಾಷ್ಟ್ರಕ್ಕೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡಲು ನಾವೆಲ್ಲರೂ ಒಗ್ಗೂಡಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಅಜ್ಜನಗೌಡ ಪಾಟೀಲ, ಬಾಬುಗೌಡ ತಿಮ್ಮನಗೌಡ್ರ, ಚಂಬಣ್ಣ ವಾಳದ, ಶಿವಾನಂದ ಮುತ್ತವಾಡ, ಅಜ್ಜಪ್ಪ ಹುಡೇದ, ಬಿ.ಬಿ. ಐನಾಪೂರ, ಮಲ್ಲಪ್ಪ ಮೇಟಿ, ಚಂದ್ರು ದಂಡಿನ, ಈಶ್ವರಗೌಡ ಪಾಟೀಲ, ಉಮೇಶ ಯಳ್ಳೂರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.