ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಬೆಂಬಲಿಸಿ: ಶಾಸಕ ಸಿ. ಎನ್. ಬಾಲಕೃಷ್ಣ

| Published : Apr 07 2024, 01:53 AM IST

ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಬೆಂಬಲಿಸಿ: ಶಾಸಕ ಸಿ. ಎನ್. ಬಾಲಕೃಷ್ಣ
Share this Article
  • FB
  • TW
  • Linkdin
  • Email

ಸಾರಾಂಶ

ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಮತದಾರರು ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರನ್ನು ಬೆಂಬಲಿಸುವಂತೆ ಶಾಸಕ ಸಿ. ಎನ್.ಬಾಲಕೃಷ್ಣ ಮನವಿ ಮಾಡಿದರು. ಚನ್ನರಾಯಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

। ಪ್ರಜ್ವಲ್‌ ರೇವಣ್ಣಗೆ ಮತ ಹಾಕುವಂತೆ ಮನವಿ

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಮತದಾರರು ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರನ್ನು ಬೆಂಬಲಿಸುವಂತೆ ಶಾಸಕ ಸಿ. ಎನ್.ಬಾಲಕೃಷ್ಣ ಮನವಿ ಮಾಡಿದರು.

ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಮತದಾರರು ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರನ್ನು ಬೆಂಬಲಿಸುವಂತೆ ಶಾಸಕ ಸಿ. ಎನ್.ಬಾಲಕೃಷ್ಣ ಮನವಿ ಮಾಡಿದರು. ಚನ್ನರಾಯಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಪಟ್ಟಣದ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಒಕ್ಕೂಟದಿಂದ ಅಣ್ಣ-ತಮ್ಮಂದಿರಂತೆ ಚುನಾವಣೆಯನ್ನು ನಡೆಸಲು ಮುಂದಾಗಿದ್ದೇವೆ. ಆ ನಿಟ್ಟಿನಲ್ಲಿ ಈ ಎರಡು ಪಕ್ಷಗಳ ಆಸೆಯಂತೆ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿ ಹುದ್ದೆಯನ್ನು ಅಲಂಕರಿಸಿ ರಾಷ್ಟ್ರ ಕಟ್ಟುವ ಕೆಲಸಕ್ಕೆ ಇನ್ನು ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುವ ಸಲುವಾಗಿ ಮಾಜಿ ಪ್ರಧಾನ ಮಂತ್ರಿ ಎಚ್ ಡಿ ದೇವೇಗೌಡ ಮತ್ತು ರಾಜ್ಯನಾಯಕ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಸೆಯಾಗಿದೆ. ಅದರಂತೆ ರಾಜ್ಯದಲ್ಲಿ ೨೮ ಸ್ಥಾನಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳು ಗೆಲವು ಸಾಧಿಸುವುದು ಖಚಿತ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

೨೫ ಸ್ಥಾನಗಳು ಬಿಜೆಪಿ, ಉಳಿದ ಮೂರು ಸ್ಥಾನಗಳು ಜೆಡಿಎಸ್‌ಗೆ ನೀಡಲಾಗಿದೆ. ಎಲ್ಲ ಕ್ಷೇತ್ರಗಳ ಗೆಲುವು ನರೇಂದ್ರ ಮೋದಿಯ ಗೆಲುವಾಗಿದೆ. ಅದರಂತೆ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ರವರಿಗೆ ಜಿಲ್ಲೆಯ ಮತ್ತು ತಾಲೂಕಿನ ಜನತೆ ಹೆಚ್ಚಿನ ಮತಗಳನ್ನು ನೀಡುವ ಮೂಲಕ ಜಯಶೀಲರಾಗಿ ಮಾಡಬೇಕು ಎಂದು ಮನವಿ ಮಾಡಿದರು.

ಬಿಜೆಪಿ ಮುಖಂಡ ಅಣತಿ ಆನಂದ್ ಮಾತನಾಡಿ, ‘ಲೋಕಸಭಾ ಚುನಾವಣೆಯು ಈ ಬಾರಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಮೈತ್ರಿ ಚುನಾವಣೆ ಆಗಿದ್ದು ಈ ಚುನಾವಣೆಯಲ್ಲಿ ಯಾವುದೇ ರೀತಿಯ ತಾರತಮ್ಯ ಇಲ್ಲದೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಗ್ಗಟ್ಟಿನಿಂದ ಚುನಾವಣೆ ಎದುರಿಸಲು ರಾಜ್ಯ ಮತ್ತು ರಾಷ್ಟ್ರ ನಾಯಕರು ಸೂಚನೆ ನೀಡಿದ್ದಾರೆ. ಅದರ ಅನ್ವಯ ಚುನಾವಣೆಯಲ್ಲಿ ನಾವು ಜೆಡಿಎಸ್ ಅಭ್ಯರ್ಥಿಗೆ ಬೆಂಬಲಿಸುತ್ತಿದ್ದೇವೆ. ಈ ಬೆಂಬಲ ರಾಷ್ಟ್ರದಲ್ಲಿ ೪೦೦ಕ್ಕೂ ಅಧಿಕ ಸ್ಥಾನಗಳು ಗೆಲ್ಲುವ ಸಾಧ್ಯತೆ ಇದೆ’ ಎಂದರು.

ಜೆಡಿಎಸ್ ತಾಲೂಕು ಅಧ್ಯಕ್ಷ ಪರಮ ದೇವರಾಜೇಗೌಡ, ಜೆಡಿಎಸ್ ಮುಖಂಡರಾದ ಮಂಜುನಾಥ್, ರಾಮಣ್ಣ, ಬಿಜೆಪಿ ತಾಲೂಕು ಅಧ್ಯಕ್ಷ ರವಿ ದಮ್ಮನಿಂಗಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಿರೀಶ್, ಬಿಜೆಪಿ ಮುಖಂಡ ಶಿವನಂಜೇಗೌಡ, ಮಾಜಿ ಪುರಸಭಾ ಸದಸ್ಯ ನಂಜುಂಡ ಮೈಮ್ ಹಾಜರಿದ್ದರು.

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಬಾಲಕೃಷ್ಣ.