ಸಾರಾಂಶ
ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ಆಶ್ರಯದಲ್ಲಿ ಸುರತ್ಕಲ್ ಗೋವಿಂದದಾಸ ಕಾಲೇಜಿನ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಹಿರಿಯರ ಕ್ರಿಕೆಟ್ ಹಬ್ಬ ಸೀಸನ್ 4 ಕ್ರಿಕೆಟ್ ಪಂದ್ಯಾಟದ ಸಮಾರೋಪ ಸಮಾರಂಭ ನೆರವೇರಿತು.
ಕನ್ನಡಪ್ರಭ ವಾರ್ತೆ ಮೂಲ್ಕಿ
ಸಂಘಟನೆಗಳು ಸಮಾಜಕ್ಕೆ ಮಾದರಿಯದಂತಹ ಕಾರ್ಯಗಳನ್ನು ಮಾಡಿದಾಗ ಮಾತ್ರ ಸಂಘಟನೆ ಪದದ ಸಾರ್ಥಕ್ಯ ಕಾಣಲು ಸಾಧ್ಯ ಎಂದು ಸುರತ್ಕಲ್ ಸ್ಪೋರ್ಟ್ಸ್ ಕ್ಲಬ್ ಮತ್ತು ಕಲ್ಚರಲ್ ಕ್ಲಬ್ ಅಧ್ಯಕ್ಷ ಮಹಾಬಲ ಪೂಜಾರಿ ಕಡಂಬೋಡಿ ಹೇಳಿದ್ದಾರೆ.ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ಆಶ್ರಯದಲ್ಲಿ ಸುರತ್ಕಲ್ ಗೋವಿಂದದಾಸ ಕಾಲೇಜಿನ ಕ್ರೀಡಾಂಗಣದಲ್ಲಿ ಜರುಗಿದ ರಾಜ್ಯ ಮಟ್ಟದ ಹಿರಿಯರ ಕ್ರಿಕೆಟ್ ಹಬ್ಬ ಸೀಸನ್ 4 ಕ್ರಿಕೆಟ್ ಪಂದ್ಯಾಟದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಾಜಿ ಸಚಿವರಾದ ಕೃಷ್ಣ ಜೆ ಪಾಲೆಮಾರ್, ಬಿಎಎಸ್‌ಎಪ್ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ಹಿರಿಯ ಪ್ರಬಂಧಕ ಸಂತೋಷ್ ಪೈ, ಮನಪಾ ಮಾಜಿ ಸದಸ್ಯ ವರುಣ್ ಚೌಟ, ಸೇವಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅರ್ಜುನ್ ಭಂಡಾರ್ಕರ್, ಎನ್ ಐ ಟಿ ಕೆ ಮಾಜಿ ಜಂಟಿ ಕುಲಪತಿ ರಾಮಮೋಹನ್ ಎಣ್ಮಕಜೆ, ಮಂಗಳೂರು ಎಸ್ ಡಿ ಸಿ ಸಿ ಬ್ಯಾಂಕ್ ಎ.ಜಿ.ಎಂ ರಾಜೇಶ್ ಶೆಟ್ಟಿ, ಬಾಲಕೃಷ್ಣ ಕೆಂಚನೂರು, ಮಂಗಳೂರು ಬಿ.ಎಂ.ಆರ್ ಗ್ರೂಪ್ ಮಾಲಕ ದಾವೂದ್ ಹಕಿಂ, ಸುರತ್ಕಲ್ ಸ್ಪೋರ್ಟ್ಸ್ಕ್ಲಬ್ ಸಂಚಾಲಕ ಮನೋಹರ ಶೆಟ್ಟಿ ಸೂರಿಂಜೆ, ಉದ್ಯಮಿ ಅನಿಲ್ ಶೆಟ್ಟಿ ತೇವು ಸೂರಿಂಜೆ, ಕಾರ್ಯದರ್ಶಿ ಕಿರಣ್ ಅಚಾರ್ಯ ಇದ್ದರು.
ಕ್ರಿಕೆಟ್ ಪಂದ್ಯಾವಳಿಯಲ್ಲಿ ಪ್ರಥಮ ಬಹುಮಾನ ದುರ್ಗಾಂಬ ತಡಂಬೈಲ್, ದ್ವೀತಿಯ ವೀರಕೇಸರಿ ತಡಂಬೈಲ್, ತೃತೀಯ ಬಿ.ಜೆ.ಸ್ಪಾರ್ಕ್ ಉಡುಪಿ, ಚತುರ್ಥ ಆನಂದಿಲೆವೆನ್ ಬೆಂಗಳೂರು ಪಡೆಯಿತು. ಕಾರ್ಯಕ್ರಮದಲ್ಲಿ ಬಬಿತಾ ಜೆ ಶೆಟ್ಟಿ ಮತ್ತು ಅರ್ಜುನ್ ಭಂಡಾರ್ಕರ್ ಅವರನ್ನು ಸನ್ಮಾನಿಸಲಾಯಿತು.