ಸಾರಾಂಶ
ಯಕ್ಷ ಅಭಿಮಾನಿ ಬಳಗ ಟ್ರಸ್ಟ್ ಸುರತ್ಕಲ್ ವತಿಯಿಂದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಸಹಯೋಗದಲ್ಲಿ ಸುರತ್ಕಲ್‌ನ ವಿದ್ಯಾದಾಯಿನಿ ವಜ್ರಮಹೋತ್ಸವ ಸಭಾಂಗಣದಲ್ಲಿ ಟ್ರಸ್ಟ್‌ನ ದಶ ಸಂವತ್ಸರ ಸಂಭ್ರಮ ನೆರವೇರಿತು.
ಮೂಲ್ಕಿ: ಎಲ್ಲ ಕಲಾ ಪ್ರಕಾರಗಳನ್ನು ಹೊಂದಿರುವ ಯಕ್ಷಗಾನಕ್ಕೆ ಕಳೆದ ಹತ್ತು ವರ್ಷಗಳಿಂದ ಯಕ್ಷ ಅಭಿಮಾನಿ ಬಳಗವು ಟ್ರಸ್ಟ್ ಮೂಲಕ ಪ್ರೋತ್ಸಾಹ ನೀಡುತ್ತಿದೆ ಎಂದು ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು.
ಯಕ್ಷ ಅಭಿಮಾನಿ ಬಳಗ ಟ್ರಸ್ಟ್ ಸುರತ್ಕಲ್ ವತಿಯಿಂದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಸಹಯೋಗದಲ್ಲಿ ಸುರತ್ಕಲ್‌ನ ವಿದ್ಯಾದಾಯಿನಿ ವಜ್ರಮಹೋತ್ಸವ ಸಭಾಂಗಣದಲ್ಲಿ ಟ್ರಸ್ಟ್‌ನ ದಶ ಸಂವತ್ಸರ ಸಂಭ್ರಮ ಕಾರ್ಯಕ್ರಮ ಅಂಗವಾಗಿ ನಡೆದ ಶುಭಂ ಕರೋತಿ ಕಲ್ಯಾಣಂ ಯಕ್ಷಗಾನ ಕಾರ್ಯಕ್ರಮ ಹಾಗೂ ಸಾಧಕರಿಗೆ ಸಮ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಕಾರ್ಯಕ್ರಮದಲ್ಲಿ ಹಿರಿಯ ಭಾಗವತರಾದ ಕುರಿಯ ಗಣಪತಿ ಶಾಸ್ತ್ರಿ, ಹಿರಿಯ ಮದ್ದಳೆಗಾರರಾದ ಮಣಿಮುಂಡ ಸುಬ್ರಹ್ಮಣ್ಯ ಶಾಸ್ತ್ರಿ, ಹಿರಿಯ ವೇಷಧಾರಿ ರಮೇಶ್ ಭಟ್ ಬಾಯಾರು, ಹಿರಿಯ ಪ್ರಸಂಗಕರ್ತರಾದ ಮಾಧವ ಭಂಡಾರಿ ಕುಳಾಯಿ, ನೇಪಥ್ಯ ಕಲಾವಿದರಾದ ಮನೋಜ್ ಕುಮಾರ್ ಕಿನ್ನಿಗೋಳಿ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದ ಸಂಘಟನೆಗೆ ನೆರವು ನೀಡಿದ ಗಣ್ಯರನ್ನು ಗೌರವಿಸಲಾಯಿತು. ಶ್ರೀ ಕ್ಷೇತ್ರ ಕಟೀಲಿನ ಅರ್ಚಕ ವೆಂಕಟರಮಣ ಆಸ್ರಣ್ಣ ಶುಭಾಸಂಶನೆಗೈದರು. ಉದ್ಯಮಿ ರವೀಂದ್ರ ಶೇಟ್, ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷ, ಧರ್ಮದರ್ಶಿ ಹರಿಕೃಷ್ಣ ಪುನರೂರು, ಅಗರಿ ಎಂಟರ್ಪೈಸಸ್ ಮಾಲಕ ಅಗರಿ ರಾಘವೇಂದ್ರ ರಾವ್, ಹಿಂದೂ ವಿದ್ಯಾದಾಯಿನಿ ಸಂಘದ ಅಧ್ಯಕ್ಷ ಜಯಚಂದ್ರ ಹತ್ವಾರ್, ಯಕ್ಷಗಾನ ಅಕಾಡೆಮಿ ಸದಸ್ಯ ರಾಜೇಶ್ ಕುಳಾಯಿ, ನ್ಯಾಯವಾದಿ ಮಹಾಬಲ ಶೆಟ್ಟಿ, ಸುರತ್ಕಲ್ ಬಂಟರ ಸಂಘ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ, ಕಲಾವಿದೆ ಪೂರ್ಣಿಮಾ ಯತೀಶ್ ರೈ, ಟ್ರಸ್ಟ್ ಅಧ್ಯಕ್ಷ ವಿದ್ಯಾ ಶಂಕರನಾರಾಯಣ ಭಟ್, ಕಾರ್ಯದರ್ಶಿ ಪೂರ್ಣಿಮಾ ಪ್ರಶಾಂತ ಶಾಸ್ತ್ರಿ, ಕೋಶಾಧಿಕಾರಿ ಡಾ.ಅನಂತಮೂರ್ತಿ, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ರಸಾದ್ ಕಾಟಿಪಳ್ಳ, ಟ್ರಸ್ಟ್ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.ಕಲಾವಿದ ವಾದಿರಾಜ ಕಲ್ಲೂರಾಯ ಅಭಿನಂದನಾ ಭಾಷಣಗೈದರು. ಅಭಿನೇತ್ರಿ ರಾವ್ ವಂದಿಸಿದರು.