ಸಾರಾಂಶ
ಕನ್ನಡಪ್ರಭ ವಾರ್ತೆ ಮೂಲ್ಕಿ
ಯುವ ಶಕ್ತಿ ದೇಶದ ಭವಿಷ್ಯವಾಗಿದ್ದು ಯುವ ಸಮುದಾಯದ ಸದ್ಬಳಕೆಯಾಗಲಿ, ಕ್ರೀಡೆಯಿಂದ ಮನಸ್ಸಿನ ಕಾರ್ಯಕ್ಷಮತೆ ಹೆಚ್ಚುತ್ತದೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.ಸುರತ್ಕಲ್ ವಿದ್ಯಾದಾಯಿನಿ ಪ್ರೌಢಶಾಲಾ ಮೈದಾನದಲ್ಲಿ ಮೈ ಭಾರತ್ ನೆಹರು ಯುವ ಕೇಂದ್ರ ಮಂಗಳೂರು ಮತ್ತು ವಿವಿಧ ಇಲಾಖೆಗಳ ಮಾರ್ಗದರ್ಶನದಲ್ಲಿ ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ನ ಆಶ್ರಯದಲ್ಲಿ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮೀ ಚಾರಿಟೇಬಲ್ ಟ್ರಸ್ಟ್, ಪಾವಂಜೆ, ಪ್ರಿಯದರ್ಶಿನಿ ಕೋ. ಒಪರೇಟಿವ್ ಸೊಸೈಟಿ ಲಿಮಿಟೆಡ್, ಹಳೆಯಂಗಡಿ.ಪೂಜಾ ಫ್ರೆಂಡ್ಸ್ ಹಳೆಯಂಗಡಿ, ಸುರತ್ಕಲ್ ಗೋವಿಂದದಾಸ ಕಾಲೇಜು ಮತ್ತು ಅನುದಾನಿತ ವಿದ್ಯಾದಾಯಿನಿ ಪ್ರೌಢಶಾಲೆಯ ಸಹಕಾರದಲ್ಲಿ ಜರುಗಿದ ದ.ಕ ಜಿಲ್ಲಾ ಮಟ್ಟದ ಕ್ರೀಡಾ ಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ಮೈ ಭಾರತ್ ನೆಹರು ಯುವ ಕೇಂದ್ರದ ನಿರ್ದೇಶಕ ಲೋಕೇಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದು ಸಂಸದ ಕ್ಯಾಪ್ಟನ್ ಬ್ರಜೇಶ್ ಚೌಟ ಶುಭ ಹಾರೈಸಿದರು.ಈ ಸಂದರ್ಭ ಗೋವಿಂದದಾಸ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೋ. ಕೃಷ್ಣಮೂರ್ತಿ, ಮೈ ಭಾರತ್ ನೆಹರು ಯುವ ಕೇಂದ್ರದ ನಿರ್ದೇಶಕ ಲೋಕೇಶ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು. ಮಂಗಳೂರು ಕೆಎಂಎಫ್ ನ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ, ಮಂಗಳೂರು ಮಹಾನಗರ ಪಾಲಿಕೆ ಸದಸ್ಯ ವರುಣ್ ಚೌಟ, ಚೆಳಾಯರು ಗ್ರಾ.ಪಂ. ನ ಜಯಾನಂದ, ಪಡುಪಣಂಬೂರು ಗ್ರಾ.ಪಂ. ನ ಉಪಾಧ್ಯಕ್ಷ ಹೇಮಂತ್ ಅಮೀನ್ ತೋಕೂರು, ಕ್ಲಬ್ ನ ಅಧ್ಯಕ್ಷ ದೀಪಕ್ ಸುವರ್ಣ, ಗೌರವಾಧ್ಯಕ್ಷ ಪ್ರಶಾಂತ್ ಕುಮಾರ್ ಬೇಕಲ್, ಮಹಿಳಾ ವಿಭಾಗದ ಅಧ್ಯಕ್ಷೆ ಯಶೋಧಾ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು.ಮೈ ಭಾರತ್ ನೆಹರು ಯುವ ಕೇಂದ್ರದ ಆಡಳಿತಾಧಿಕಾರಿ ಜಗದೀಶ್ ಕೆ. ಸ್ವಾಗತಿಸಿದರು. ಕ್ಲಬ್ ನ ಮಾಜಿ ಅಧ್ಯಕ್ಷ ಸುರೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.