ಸಾರಾಂಶ
ಕನ್ನಡಪ್ರಭ ವಾರ್ತೆ ಹಾಸನ
ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಆಲೂರು ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿಗೆ ಅಧ್ಯಕ್ಷರಾಗಿ ಆಯ್ಕೆಯಾಗಲು ಸಹಕರಿಸಿದ ಪಕ್ಷದ ಎಲ್ಲಾ ಮುಖಂಡರಿಗೆ ಎಚ್. ಸುರೇಶ್ ಧನ್ಯವಾದ ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿ, ಎಐಸಿಸಿ ಅಧ್ಯಕ್ಷ ಎಂ. ಮಲ್ಲಿಕಾರ್ಜುನ ಖರ್ಗೆ, ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾದ ರಾಜೇಶ್ ಲಿಲೋತಿಯಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಎಚ್. ಸುರೇಶ್, ಮುರುಳಿ ಮೋಹನ್ ಸೇರಿದಂತೆ ಪಕ್ಷದ ಎಲ್ಲಾ ಮುಖಂಡರಿಗೆ ಹಾಗೂ ಕಾಂಗ್ರೆಸ್ ಮುಖಂಡರ ಶಿಫಾರಸ್ಸಿನ ಮೇಲೆ ಹಾಗೂ ಪರಿಶಿಷ್ಟ ಜಾತಿ ವಿಭಾಗದ ಹಾಸನ ಜಿಲ್ಲಾಧ್ಯಕ್ಷ ಎಂ.ಕೆ. ದೇವಪ್ಪ ಮಲ್ಲಿಗೆವಾಲು ಅನುಮೋದನೆಯೊಂದಿಗೆ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಆಲೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿರುತ್ತದೆ ಎಂದರು.
ನನ್ನನ್ನು ಆಲೂರು ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿರುತ್ತದೆ. ಈ ಉನ್ನತ ಹುದ್ದೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಹಿಸಿಕೊಂಡು ಕಾಂಗ್ರೆಸ್ ಪಕ್ಷದ ನೀತಿ ನಿಯಮ ಮತ್ತು ಪಕ್ಷದ ಸಿದ್ಧಾಂತಗಳಿಗೆ ಬದ್ಧರಾಗಿ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡು ಪಕ್ಷವನ್ನು ಇನ್ನಷ್ಟು ಬಲಪಡಿಸಲು ಕಾರ್ಯೋನ್ಮುಖರಾಗಿ ಕೆಲಸಗಳನ್ನು ಮಾಡಬೇಕೆಂದು ಕಾಂಗ್ರೆಸ್ ಮುಖಂಡರು ತಿಳಿಸಿರುತ್ತಾರೆ. ನಾನು ಜನಪರ ಕೆಲಸವನ್ನು ಮಾಡುತ್ತಾ ಬಂದಿದ್ದೇನೆ. ಮುಂದೆಯೂ ನನ್ನ ಸೇವೆಯನ್ನು ಜನಗಳಿಗೆ ತಲುಪಿಸುತ್ತೇನೆ. ಯಾವುದೇ ಸಮಸ್ಯೆಗಳಿದ್ದರೂ ಸ್ವತಃ ನಾನು ಜೊತೆಯಲ್ಲಿ ನಿಂತು ಸಮಸ್ಯೆಯನ್ನು ಬಗೆಹರಿಸುತ್ತೇನೆ ಎಂದರು.ಮಾಡಿದ ಕಾರ್ಯಗಳನ್ನು ಗಮನದಲ್ಲಿಟ್ಟುಕೊಂಡು ನನ್ನನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಿರುವುದಕ್ಕೆ ಎಲ್ಲರಿಗೂ ಅಭಿನಂದನೆಯನ್ನು ತಿಳಿಸಿದರು. ಮುಂದಿನ ದಿನಗಳಲ್ಲಿ ಆಲೂರಿನಲ್ಲಿ ಇರುವ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿ ಮಾಡಲಾಗುವುದು. ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ಕೊಡುವುದಾಗಿ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಅಜ್ಜನಹಳ್ಳಿ ರಂಗಯ್ಯ, ಎಸ್.ಸಿ, ಎಸ್.ಟಿ. ಆಲೂರು ತಾಲೂಕು ಮಾಜಿ ಅಧ್ಯಕ್ಷ ಹೊನ್ನಪ್ಪ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಧರ್ಮಣ್ಣ, ಹಿಂದುಳಿದ ವರ್ಗದ ಅಧ್ಯಕ್ಷ ರಾಜಶೇಖರ್ ಇತರರು ಉಪಸ್ಥಿತರಿದ್ದರು.