ಸಾರಾಂಶ
೧೨ನೇ ಶತಮಾನದ ಪ್ರಮುಖ ವಚನಕಾರರಲ್ಲಿ ಅಂಬಿಗರ ಚೌಡಯ್ಯನವರು ಒಬ್ಬರು.
ಸಂಡೂರು: ೧೨ನೇ ಶತಮಾನದ ಶಿವಶರಣರು ಕಾಯಕವೇ ಕೈಲಾಸವೆಂದು ನಂಬಿ, ತಮ್ಮ ವಚನಗಳ ಮೂಲಕ ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದಲು ಶ್ರಮಿಸಿದರು. ನಾವೆಲ್ಲರೂ ನಿಜಶರಣ ಅಂಬಿಗರ ಚೌಡಯ್ಯ ಮುಂತಾದ ವಚನಕಾರರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಕಾಯಕದ ಮೂಲಕ ಜೀವನವನ್ನು ಪರಿಪೂರ್ಣಗೊಳಿಸಿಕೊಳ್ಳಬೇಕು ಎಂದು ಶಾಸಕ ಈ. ತುಕಾರಾಂ ಅಭಿಪ್ರಾಯಪಟ್ಟರು.
ಪಟ್ಟಣದ ತಾಲೂಕು ಕಚೇರಿಯಲ್ಲಿ ಭಾನುವಾರ ನಡೆದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ತಹಸೀಲ್ದಾರ್ ಜಿ. ಅನಿಲ್‌ಕುಮಾರ್ ಮಾತನಾಡಿ, ೧೨ನೇ ಶತಮಾನದ ಪ್ರಮುಖ ವಚನಕಾರರಲ್ಲಿ ಅಂಬಿಗರ ಚೌಡಯ್ಯನವರು ಒಬ್ಬರು. ಇವರು ಬಸವಣ್ಣನವರ ಅನುಭವ ಮಂಟಪದಲ್ಲಿ ಪ್ರಮುಖ ಸ್ಥಾನವನ್ನು ಅಲಂಕರಿಸಿದ್ದರು. ಇವರು ತಮ್ಮ ವಚನಗಳ ಮೂಲಕ ಸಮಾಜ ಸುಧಾರಣೆಗೆ ಶ್ರಮಿಸಿದರು. ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಸಮಾಜ ನಿರ್ಮಾಣಕ್ಕೆ ಶ್ರಮಿಸೋಣ ಎಂದರು. ರಾಘವೇಂದ್ರ ಹಾಗೂ ಬಸವರಾಜ ಬಣಕಾರ್ ಅವರು ಮಾತನಾಡಿದರು. ಶಿರಸ್ತೇದಾರ್ ಕೆ.ಎಂ. ಶಿವಕುಮಾರ್, ಮುಖಂಡರಾದ ಕೆ. ಸತ್ಯಪ್ಪ, ಎಸ್.ವಿ. ಹಿರೇಮಠ್, ಬಿ. ಸಂತೋಷ್‌ಕುಮಾರ್, ಜಿ. ಗಣೇಶ್, ಯು. ಈಶಪ್ಪ, ಎಂ. ಶಿವಕುಮಾರ್, ಬಿ. ಚಂದ್ರಶೇಖರ್ ಮುಂತಾದವರು ಉಪಸ್ಥಿತರಿದ್ದರು.ಚಿತ್ರ : ೨೧ಎಸ್.ಎನ್.ಡಿ.೦೨ಸಂಡೂರಿನ ತಾಲೂಕು ಕಚೇರಿಯಲ್ಲಿ ಭಾನುವಾರ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿಯನ್ನು ಆಚರಿಸಲಾಯಿತು.