ವಚನದಿಂದ ವೈಚಾರಿಕ ಪ್ರಜ್ಞೆ ಮೂಡಿಸಿದ ಶರಣರು: ಮೇಯರ್ ಬಿ. ಶ್ವೇತಾ

| Published : Jan 24 2024, 02:00 AM IST / Updated: Jan 24 2024, 02:01 AM IST

ವಚನದಿಂದ ವೈಚಾರಿಕ ಪ್ರಜ್ಞೆ ಮೂಡಿಸಿದ ಶರಣರು: ಮೇಯರ್ ಬಿ. ಶ್ವೇತಾ
Share this Article
  • FB
  • TW
  • Linkdin
  • Email

ಸಾರಾಂಶ

ಸಮಾಜದ ಅನಾಚಾರ, ಮೌಢ್ಯತೆಯನ್ನು ನಿರ್ಭೀತಿಯಿಂದ ಕಟುವಾಗಿ ಟೀಕಿಸುತ್ತಿದ್ದ ಚೌಡಯ್ಯ ಅವರು ವಚನಗಳ ಮೂಲಕ ವೈಚಾರಿಕ ಪ್ರಜ್ಞೆ ಮೂಡಿಸಿದ ಮಹಾನ್ ಮಾನವತಾವಾದಿಯಾಗಿದ್ದಾರೆ.

ಬಳ್ಳಾರಿ: ಸಮಾಜದಲ್ಲಿದ್ದ ತಾರತಮ್ಯ ನೀತಿಯ ವಿರುದ್ಧ ಹೋರಾಡಿ ಹೊಸ ವ್ಯವಸ್ಥೆಯ ಸೈದ್ಧಾಂತಿಕ ನೆಲೆಗಟ್ಟನ್ನು ಭದ್ರಗೊಳಿಸಿದ ಅಂಬಿಗರ ಚೌಡಯ್ಯ ನಿಜಶರಣ ಎನಿಸಿಕೊಂಡಿದ್ದರು. ಸಮಾಜದ ಅನಾಚಾರ, ಮೌಢ್ಯತೆಯನ್ನು ನಿರ್ಭೀತಿಯಿಂದ ಕಟುವಾಗಿ ಟೀಕಿಸುತ್ತಿದ್ದ ಚೌಡಯ್ಯ ಅವರು ವಚನಗಳ ಮೂಲಕ ವೈಚಾರಿಕ ಪ್ರಜ್ಞೆ ಮೂಡಿಸಿದ ಮಹಾನ್ ಮಾನವತಾವಾದಿಯಾಗಿದ್ದಾರೆ ಎಂದು ಮೇಯರ್ ಬಿ. ಶ್ವೇತಾ ತಿಳಿಸಿದರು.

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜರುಗಿದ ಅಂಬಿಗರ ಚೌಡಯ್ಯ ಜಯಂತಿ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.

ವಿಶೇಷ ಉಪನ್ಯಾಸ ನೀಡಿದ ಲೇಖಕ ಡಾ. ತಿಪ್ಪೇಸ್ವಾಮಿ ಸಂಡೂರು ಅವರು, ಅಂಬಿಗರ ಚೌಡಯ್ಯ 12ನೇ ಶತಮಾನದ ಬಸವಣ್ಣನವರ ಅನುಯಾಯಿ ಶರಣರಾಗಿದ್ದಾರೆ. ಸಾವಿರಾರು ವರ್ಷಗಳಿಂದ ಧರ್ಮ- ದೇವರ ಬಗೆಗೆ ಜನಸಮೂಹದಲ್ಲಿದ್ದ ಮೂಢನಂಬಿಕೆಗಳನ್ನೆಲ್ಲ ಗುರು ಬಸವಣ್ಣನವರೊಂದಿಗೆ ಅಂಬಿಗರ ಚೌಡಯ್ಯ ಹೊಡೆದೋಡಿಸುತ್ತಲೇ ವಿಚಾರ ಪರ ವಾದ, ವಾಸ್ತವವಾದ ಅಂಶಗಳನ್ನು ಜನಮನದಲ್ಲಿ ಮೂಡಿಸಿದವರು ಎಂದರು.

ಎಂ. ನಾಗಭೂಷಣ ಬಾಪುರೆ ಅವರು ವಚನ ಗಾಯನಗಳನ್ನು ಪ್ರಸ್ತುತಪಡಿಸಿದರು. ಉಪಮೇಯರ್ ಬಿ. ಜಾನಕಿ, ಎಡಿಸಿ ಮಹಮ್ಮದ್ ಝುಬೇರ್ ಎನ್., ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ ಸೇರಿದಂತೆ ಗಂಗಾಮತ ಸಮಾಜದ ಮುಖಂಡರು ಇದ್ದರು.

ಅಂಬಿಗರ ಚೌಡಯ್ಯ ಜಯಂತ್ಯುತ್ಸವದ ಅಂಗವಾಗಿ ನಗರದ ಕನಕದುರ್ಗಮ್ಮ ದೇವಸ್ಥಾನ ಆವರಣದಿಂದ ಮೆರವಣಿಗೆ ನಡೆಯಿತು. ಮೇಯರ್ ಬಿ. ಶ್ವೇತಾ ಚಾಲನೆ ನೀಡಿದರು. ಮೆರವಣಿಗೆಯಲ್ಲಿ ಪೂರ್ಣಕುಂಭ ಹೊತ್ತ ಮಹಿಳೆಯರು ಹಾಗೂ ವಿವಿಧ ಸಾಂಸ್ಕೃತಿಕ ಕಲಾತಂಡಗಳು ಪಾಲ್ಗೊಂಡಿದ್ದವು.

ಮೆರವಣಿಗೆಯು ನಗರದ ಕನಕ ದುರ್ಗಮ್ಮ ದೇವಸ್ಥಾನದಿಂದ ಆರಂಭವಾಗಿ ಗಡಿಗಿ ಚೆನ್ನಪ್ಪ ವೃತ್ತದ ಮೂಲಕ ಬಿಡಿಎಎ ಫುಟ್‍ಬಾಲ್ ಮೈದಾನದ ವೇದಿಕೆ ಸಭಾಂಗಣಕ್ಕೆ ತಲುಪಿತು.