ದ.ಕ.ದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆಗೆ ಚಾಲನೆ

| Published : Sep 16 2025, 12:04 AM IST

ಸಾರಾಂಶ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಗಳೊಂದಿಗೆ ಪೋಸ್ಟರ್ಸ್‌ಗಳನ್ನು ಶುಕ್ರವಾರ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಿಡುಗಡೆಗೊಳಿಸಲಾಯಿತು.

ಮಂಗಳೂರು: ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆಯ ಚಾಲನೆ ಕುರಿತು ಸಮುದಾಯದಲ್ಲಿ ಅರಿವು ಮೂಡಿಸಲು ಹಾಗೂ ಸಾರ್ವಜನಿಕರಲ್ಲಿ ತಿಳುವಳಿಕೆ ನೀಡಲು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಗಳೊಂದಿಗೆ ಪೋಸ್ಟರ್ಸ್‌ಗಳನ್ನು ಶುಕ್ರವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಿಡುಗಡೆಗೊಳಿಸಲಾಯಿತು.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಜೇಬುನ್ನಿಸಾ ಮಾತನಾಡಿ, ಲಿಂಗತ್ವ ಅಲ್ಪಸಂಖ್ಯಾತರ ಸಮುದಾಯದವರು ಮುಖ್ಯವಾಹಿನಿಗೆ ಬರಲು ವಿವಿಧ ಕಾಯ್ದೆಗಳನ್ನು ರೂಪಿಸಿದ್ದು, ಅವುಗಳ ಪ್ರಯೋಜನ ಪಡೆಯುವಂತೆ ಸೂಚಿಸಿದರು.

ಅಧ್ಯಕ್ಷತೆ ವಹಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಕೆ., ಜಿಲ್ಲಾಡಳಿತದಿಂದ ಸಮುದಾಯದವರಿಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುತ್ತದೆ ಎಂದು ತಿಳಿಸಿದರು.

ವೆನ್ಲಾಕ್‌ ಆಸ್ಪತ್ರೆ ಅಧೀಕ್ಷಕ ಡಾ.ಶಿವಪ್ರಕಾಶ್ ಮಾತನಾಡಿ, ಸ್ವಾವಲಂಬಿ ಬದುಕು ರೂಪಿಸಲು ಸರ್ಕಾರ ಹಲವಾರು ಯೋಜನೆಗಳನ್ನು ಒಗದಿಸಿದ್ದು, ಸಮೀಕ್ಷೆಯ ನಂತರ ಜನಸಂಖ್ಯೆ ಅನುಗುಣವಾಗಿ ಯೋಜನೆಗಳನ್ನು ರೂಪಿಸಲು ಸಾಧ್ಯವಿದೆ. ಸಮೀಕ್ಷೆ ನಡೆಸಲು ಆಸ್ಪತ್ರೆಗಳಲ್ಲಿ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಲಾಗುತ್ತದೆ ಎಂದು ಹೇಳಿದರು.

ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆಯನ್ನು ನಡೆಸಲು ಟ್ಯಾಬ್‍ಗಳನ್ನು ಸಮೀಕ್ಷೆದಾರಿಗೆ ವಿತರಿಸಲಾಯಿತು. ಲಿಂಗತ್ವ ಅಲ್ಪಸಂಖ್ಯಾತರನ್ನು ಮುಖ್ಯವಾಹಿನಿಗೆ ತರಲು ಆಗತ್ಯವಾದ ಸೌಲಭ್ಯಗಳನ್ನು ಒದಗಿಸಲು ಸಮುದಾಯದ ಜನಸಂಖ್ಯೆಯೊಂದಿಗೆ ಶೈಕ್ಷಣಿಕಮಟ್ಟ ಸಾಮಾಜಿಕ ಹಾಗೂ ಆರ್ಥಿಕ ಮಾಹಿತಿಯು ಅತೀ ಅಗತ್ಯವಾಗಿದೆ. ಸಮೀಕ್ಷೆ ಕಾರ್ಯ ಸುಗಮವಾಗಿ ನಡೆಯಲು ಹಾಗೂ ಸಮುದಾಯದವರಿಗೆ ಹೆಚ್ಚಿನ ಅರಿವು ಮೂಡಿಸುವ ಉದ್ದೇಶದಿಂದ ಸರ್ಕಾರದಿಂದ ಪೋಸ್ಟರ್‌ಗಳನ್ನು ಒದಗಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಉಸ್ಮಾನ್ ಹೇಳಿದರು.

ಮಹಿಳಾ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಚಂದ್ರಿಕಾ ವಂದಿಸಿದರು.