ಸಮೀಕ್ಷಾ ಕಾರ್ಯ ಯಶಸ್ವಿಯಾಗಿ ನಿರ್ವಹಿಸಬೇಕು: ಜಿಪಂ ಸಿಇಒ ಕೀರ್ತನಾ

| Published : Apr 24 2025, 11:53 PM IST

ಸಾರಾಂಶ

ಚಿಕ್ಕಮಗಳೂರು, ಗೌರವಾನ್ವಿತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಏಕ ಸದಸ್ಯ ವಿಚಾರಣಾ ಆಯೋಗದಿಂದ ಸಮೀಕ್ಷೆ ನಡೆಸಲು ಈಗಾಗಲೇ ರಚಿಸಿರುವ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷಾ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸುವಂತೆ ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಚ್.ಎಸ್. ಕೀರ್ತನಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಗೌರವಾನ್ವಿತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಏಕ ಸದಸ್ಯ ವಿಚಾರಣಾ ಆಯೋಗದಿಂದ ಸಮೀಕ್ಷೆ ನಡೆಸಲು ಈಗಾಗಲೇ ರಚಿಸಿರುವ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷಾ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸುವಂತೆ ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಚ್.ಎಸ್. ಕೀರ್ತನಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪರಿಶಿಷ್ಟ ಜಾತಿ ಒಳ ಮೀಸಲಾತಿ ಕುರಿತಂತೆ ನ್ಯಾಯಮೂರ್ತಿ ಎಚ್.ಎನ್, ನಾಗಮೋಹನದಾಸ್ ಏಕಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ಸಮೀಕ್ಷೆ ನಡೆಸುವ ಸಂಬಂಧ ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.ತಾಲೂಕು ಮಟ್ಟದಲ್ಲಿ ಉಪ ವಿಭಾಗಾಧಿಕಾರಿಗಳ ನೇತೃತ್ವದಲ್ಲಿ ತಾಲೂಕು ಮಟ್ಟದ ಸಮನ್ವಯ ಸಮಿತಿ ರಚಿಸಲಾಗಿದ್ದು ತಾಲೂಕಿನ ತಹಸೀಲ್ದಾರ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ತಾಲೂಕು ಮಟ್ಟದ ಇತರ ಅಧಿಕಾರಿಗಳು. ಸದಸ್ಯ ರಾಗಿರುತ್ತಾರೆ. ಸಮೀಕ್ಷೆ ಮೇಲ್ವೆಚಾರಣೆಗೆ ಕ್ಷೇತ್ರ ಶಿಕ್ಷಣಾಧಿಕಾರಿ, ಮುಖ್ಯ ಶಿಕ್ಷಕರ ನಿಯೋಜಿಸಲು ಉಪ ನಿರ್ದೇಶಕರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ರಮವಹಿಸಲು ತಿಳಿಸಿದರು.

ಗ್ರಾಪಂ ಮಟ್ಟದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ತಾಲೂಕು ನೋಡಲ್ ಅಧಿಕಾರಿಗಳು ಸಮೀಕ್ಷೆ ಸಂಪೂರ್ಣ ಮೇಲುಸ್ತುವಾರಿ ವಹಿಸಬೇಕು. ಕುಟುಂಬ ದತ್ತಾಂಶದ ಪ್ರಕಾರ ಗ್ರಾಮ ಹಾಗೂ ನಗರಗಳಲ್ಲಿನ ಕುಟುಂಬವಾರು ಸಂಖ್ಯೆಗಳನ್ನು ಗ್ರಾಮ ಪಂಚಾಯಿತಿವಾರು, ಗ್ರಾಮವಾರು, ವಾರ್ಡ್‌ವಾರು ಸಂಗ್ರಹಿಸಬೇಕು ಎಂದು ಹೇಳಿದರು.ಚಿಕ್ಕಮಗಳೂರು ಜಿಲ್ಲೆಯಲ್ಲಿ 2,53,651 ಪರಿಶಿಷ್ಟ ಜಾತಿ ಜನಸಂಖ್ಯೆ ಇದ್ದು, ಇವರ ಸಮೀಕ್ಷೆ ನಡೆಸಲು ಸುಮಾರು 600 - 700 ಶಿಕ್ಷಕರ ಅವಶ್ಯಕತೆ ಇದ್ದು. ಸದರಿ ಶಿಕ್ಷಕರಿಗೆ ಸಹಾಯಕರಾಗಿ ಅಲ್ಲಿನ ಅಂಗನವಾಡಿ ಕಾರ್ಯಕಾರ್ತೆಯರನ್ನು ನಿಯೋಜಿಸುವ ಕುರಿತು ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ತಿಳಿಸಿದ ಅವರು, ಸರ್ಕಾರದಿಂದ ಕಾಲಕಾಲಕ್ಕೆ ನೀಡುವ ನಿರ್ದೇಶನ ಹಾಗೂ ಮಾರ್ಗಸೂಚಿ ಅನ್ವಯ ಎಲ್ಲಾ ಇಲಾಖೆ ಸಮನ್ವಯದಿಂದ ಕರ್ತವ್ಯ ನಿರ್ವಹಿಸಿ ಸಮೀಕ್ಷೆ ಕಾರ್ಯ ಯಶಸ್ವಿ ಆಗುವಂತೆ ಕ್ರಮವಹಿಸಬೇಕು ಎಂದರು.

ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಬಿ. ಮಾಲತಿ, ಸಭೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.23 ಕೆಸಿಕೆಎಂ 2ನ್ಯಾಯಮೂರ್ತಿ ಎಚ್.ಎನ್, ನಾಗಮೋಹನದಾಸ್ ಏಕಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ಸಮೀಕ್ಷೆ ನಡೆಸುವ ಸಂಬಂಧ ಚಿಕ್ಕಮಗಳೂರು ಜಿಪಂ ಸಭಾಂಗಣದಲ್ಲಿ ಸಿಇಒ ಕೀರ್ತನಾ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ನಡೆಯಿತು.