ಸಾರಾಂಶ
ದೊಡ್ಡಬಳ್ಳಾಪುರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಭಾರತ ದೇಶಕ್ಕೆ ಸರ್ವ ಶ್ರೇಷ್ಠ ಸಂವಿಧಾನ ಕೊಟ್ಟಿದ್ದಾರೆ. ಪ್ರಜಾಪ್ರಭುತ್ವ ಉಳಿಯಬೇಕಾದರೆ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಎಲ್ಲಾ ವರ್ಗದ ಜನರು ಭಾವೈಕ್ಯತೆಯಿಂದ ಬದುಕಬೇಕು. ಆಗಲೇ ಪ್ರಜಾಪ್ರಭುತ್ವದ ಉಳಿವು ಸಾಧ್ಯ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂ.ಗ್ರಾ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತಾಲೂಕಿನ ಹೆಗ್ಗಡಿಹಳ್ಳಿ ಬಳಿ ಇಂದು ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲೇ ಮೊಟ್ಟಮೊದಲ ಬಾರಿಗೆ ಬೀದರ್ ಇಂದ ಚಾಮರಾಜನಗರದವರೆಗೆ ಬೃಹತ್ ಮಾನವ ಸರಪಳಿ ಕಾರ್ಯಕ್ರಮ ಆಯೋಜಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 77 ಕಿಲೋಮೀಟರ್ ಉದ್ದದ ಬೃಹತ್ ಮಾನವ ಸರಪಳಿಗೆ ಸುಮಾರು 60 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದ್ದಾರೆ. ಇದಕ್ಕಾಗಿ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಶ್ರಮಿಸಿದ್ದಾರೆ. ಸಂವಿಧಾನದ ಉಳಿವು ಹಾಗು ಪ್ರಜಾಪ್ರಭುತ್ವದ ರಕ್ಷಣೆಇದರ ಮೂಲ ಉದ್ದೇಶವಾಗಿದೆ. ಭಾರತ ದೇಶದ ಪ್ರತಿಯೊಬ್ಬ ಪ್ರಜೆಯು ಜಾತ್ಯಾತೀತ ಭಾವನೆಯಿಂದ ಬದುಕಲು ಸಂವಿಧಾನ ಪ್ರಮುಖ ಪಾತ್ರ ವಹಿಸುತ್ತದೆ. ಇದು ರಾಷ್ಟ್ರಪಿತ ಮಹಾತ್ಮಾ ಗಾಂಧಿಜೀಯವರ ಕನಸು ಸಹ ಆಗಿತ್ತು ಎಂದು ಹೇಳಿದರು.
ಜಿಲ್ಲಾಧಿಕಾರಿ ಡಾ.ಶಿವಶಂಕರ್ ಮಾತನಾಡಿ, ಅಂತಾರಾಷ್ಟ್ರೀಯ ಸಂವಿಧಾನ ದಿನಾಚರಣೆಯನ್ನು ಸಂವಿಧಾನ ಅಳವಡಿಸಿಕೊಂಡಿರುವ ವಿಶ್ವದ ಪ್ರಜಾಪ್ರಭುತ್ವ ದೇಶಗಳಲ್ಲಿ ಆಚರಿಸಲಾಗುತ್ತಿದೆ. ಭಾರತ ವಿಶ್ವದಲ್ಲಿಯೇ ದೊಡ್ಡ ಸಂವಿಧಾನ ಹೊಂದಿರುವ ದೇಶ. ನಮ್ಮ ಸಂವಿಧಾನ ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನತೆ, ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟು ದೇಶದ ಸರ್ವತೋಮುಖ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿದೆ ಎಂದು ಹೇಳಿದರು.ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಾನವ ಸರಪಳಿ ಕಾರ್ಯಕ್ರಮ ಯಶಸ್ವಿಗೊಳ್ಳಲು ಅಧಿಕಾರಿ ವರ್ಗದವರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕ ಬಂಧುಗಳು ಹೆಚ್ಚು ಶ್ರಮ ವಹಿಸಿದ್ದಾರೆ. ಜಿಲ್ಲೆಯಲ್ಲಿ ಏಕಕಾಲದಲ್ಲಿ ಎರಡು ಕಡೆ ಮಾನವ ಸರಪಳಿ ರಚನೆಯಾಗಿದ್ದು, ಮೊದಲ ಭಾಗದಲ್ಲಿ ನೆಲಮಂಗಲ ತಾಲೂಕಿನ ಹಳೆ ನಿಜಗಲ್‌ನಿಂದ ಪ್ರಾರಂಭವಾಗಿ ದಾಬಸ್‌ಪೇಟೆ ಮುಖಾಂತರ ತಾಲೂಕಿನ ಹೆಗ್ಗಡಿಹಳ್ಳಿ ಕ್ರಾಸ್‌ವರೆಗೆ 54 ಕಿಲೋ ಮೀಟರ್ ಸರಪಳಿ ರಚನೆಯಾಗಿದೆ. ಎರಡನೇ ಭಾಗದಲ್ಲಿ ಹೊಸಕೋಟೆ ತಾಲೂಕಿನ ವೆಂಕಟಪುರದಿಂದ ಪ್ರಾರಂಭಿಸಿ ಮುಗಬಾಳ ಮುಖಾಂತರ ಹೊಸಕೋಟೆಯ ದೊಡ್ಡ ಅಮಾನಿಕೆರೆವರೆಗೆ 23 ಕಿಲೋಮೀಟರ್ ಸೇರಿ ಒಟ್ಟು 77 ಕಿಲೋಮೀಟರ್ ವರೆಗೆ ಮಾನವ ಸರಪಳಿ ಯಶಸ್ವಿಯಾಗಿದೆ ಎಂದರು.
ಜಿಪಂ ಸಿಇಒ ಡಾ.ಕೆ.ಎನ್ ಅನುರಾಧ ಮಾತನಾಡಿ, ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯ ಸಮಾನತೆ ಸಿಗುವಂತಾಗಬೇಕು. ಯಾವುದೇ ಭೇದ ಭಾವ ಇಲ್ಲದೆ ನಾವೆಲ್ಲರು ಒಂದೆ ಎಂಬ ಮನೋಭಾವ ಬೆಳೆಸಿಕೊಳ್ಳಬೇಕು. ರಾಜ್ಯದ ಹಿತಕ್ಕಾಗಿ ಒಟ್ಟಾಗಿ ದುಡಿಯಬೇಕು. ಆಡಂಬರದ ಆಚರಣೆ ಮಾಡದೆ ಸಂವಿಧಾನದ ಆಶಯದ ಬಗ್ಗೆ ತಿಳಿಸುವ ಕಾರ್ಯಕ್ರಮ ಇದಾಗಿದೆ ಎಂದು ಹೇಳಿದರು.ಕಾರ್ಯಕ್ರದಲ್ಲಿ ಸಂವಿಧಾನ ಪೀಠಿಕೆಯನ್ನು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಬೋಧಿಸಿದರು. ಜಿಲ್ಲಾ ಗ್ಯಾರಂಟಿ ಅನುಷ್ಠಾನಗಳ ಅಧ್ಯಕ್ಷ ಬಿ.ರಾಜಣ್ಣ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧ್ಯಕ್ಷ ವಿ. ಶಾಂತಕುಮಾರ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ, ಸಚಿವರ ಆಪ್ತ ಕಾರ್ಯದರ್ಶಿ ನಟರಾಜ, ತಾಲೂಕು ತಹಶೀಲ್ದಾರ್ ಗಳು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಕೃಷ್ಣಮೂರ್ತಿ, ವಿವಿಧ ಸಂಘಟನೆಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರದಲ್ಲಿ ಕಾರ್ಯಕ್ರಮ:ಇದಕ್ಕೂ ಮುನ್ನ ದೊಡ್ಡಬಳ್ಳಾಪುರ ಪ್ರವಾಸಿ ಮಂದಿರ ವೃತ್ತದಲ್ಲಿ ನಡೆದ ಮಾನವ ಸರಪಳಿಯಲ್ಲಿ ಭಾಗಿಯಾದ ಸಚಿವ ಕೆ.ಎಚ್.ಮುನಿಯಪ್ಪ, ವಿದ್ಯಾರ್ಥಿಗಳು ಹಾಗೂ ಕಾರ್ಯಕರ್ತರು, ಅಧಿಕಾರಿಗಳೊಂದಿಗೆ ಮಾನವ ಸರಪಳಿ ರಚಿಸಿ ಪ್ರಜಾಪ್ರಭುತ್ವದ ಮೌಲ್ಯಗಳ ರಕ್ಷಣೆ ಸಂದೇಶ ಸಾರಿದರು.
ಪ್ರಜಾಪ್ರಭುತ್ವದ ಮೂಲಾಧಾರವಾದ ಸಂವಿಧಾನ ಪೀಠಿಕೆಯ ಒಕ್ಕಣೆಯ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.(ಚೆಂದದ ಒಂದು ಫೋಟೋ ಬಳಸಿ ಸರ್)
15ಕೆಡಿಬಿಪಿ1- ದೊಡ್ಡಬಳ್ಳಾಪುರ ತಾಲೂಕಿನ ಹೆಗ್ಗಡಿಹಳ್ಳಿಯಲ್ಲಿ ಭಾನುವಾರ ಅಂ.ರಾ.ಪ್ರಜಾಪ್ರಭುತ್ವ ದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಕೆ.ಎಚ್.ಮುನಿಯಪ್ಪ ಮಾತನಾಡಿದರು.15ಕೆಡಿಬಿಪಿ2- ದೊಡ್ಡಬಳ್ಳಾಪುರದ ಪ್ರವಾಸಿ ಮಂದಿರ ವೃತ್ತದಲ್ಲಿ ಭಾನುವಾರ ಪ್ರಜಾಪ್ರಭುತ್ವ ದಿನದ ಅಂಗವಾಗಿ ನಡೆದ ಮಾನವ ಸರಪಳಿಯಲ್ಲಿ ಸಚಿವ ಕೆ.ಎಚ್.ಮುನಿಯಪ್ಪ, ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿಯಾದರು.
15ಕೆಡಿಬಿಪಿ3-ದೊಡ್ಡಬಳ್ಳಾಪುರದ ಪ್ರವಾಸಿ ಮಂದಿರ ವೃತ್ತದಲ್ಲಿ ಭಾನುವಾರ ಪ್ರಜಾಪ್ರಭುತ್ವ ದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಕೆ.ಎಚ್.ಮುನಿಯಪ್ಪ, ಜಿಲ್ಲಾ ಮಟ್ಟದ ಅಧಿಕಾರಿಗಳು ಸಂವಿಧಾನ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
;Resize=(128,128))
;Resize=(128,128))
;Resize=(128,128))