ಸಾರಾಂಶ
ತನ್ನ ಪತ್ನಿಯೊಂದಿಗೆ ತಂದೆ ಅನೈತಿಕ ಸಂಬಂಧ ಇಟ್ಟುಕೊಂಡಿರುವುದಾಗಿ ಆರೋಪಿಸಿ ಮಗನೇ ತಂದೆಯ ತಲೆಗೆ ಕಲ್ಲಿನಿಂದ ಹೊಡೆದು ಹತ್ಯೆ ಮಾಡಿದ ಘಟನೆ ಹನೂರು ತಾಲೂಕಿನ ಸಂದನಪಾಳ್ಯ ಗ್ರಾಮದಲ್ಲಿ ನಡೆದಿದೆ.
ಕನ್ನಡ ಪ್ರಭ ವಾರ್ತೆ, ಹನೂರು
ತನ್ನ ಪತ್ನಿಯೊಂದಿಗೆ ತಂದೆ ಅನೈತಿಕ ಸಂಬಂಧ ಇಟ್ಟುಕೊಂಡಿರುವುದಾಗಿ ಆರೋಪಿಸಿ ಮಗನೇ ತಂದೆಯ ತಲೆಗೆ ಕಲ್ಲಿನಿಂದ ಹೊಡೆದು ಹತ್ಯೆ ಮಾಡಿದ ಘಟನೆ ಹನೂರು ತಾಲೂಕಿನ ಸಂದನಪಾಳ್ಯ ಗ್ರಾಮದಲ್ಲಿ ನಡೆದಿದೆ.ಪಾಕಿಯನಾಥನ್ ಅಲಿಯಾಸ್ ಆರುಳನಂದ ಮೃತ ದುರ್ದೈವಿ. ಸಂದನಪಾಳ್ಯ ಗ್ರಾಮದ ಜಾನ್ಸನ್ ಜೀವ ತನ್ನ ತಂದೆ ಪಾಕಿಯನಾಥನ್ ಅವರನ್ನು ಕಲ್ಲಿನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ.
ಘಟನೆಯ ವಿವರ:ಜಾನ್ಸನ್ ಜೀವನ ಪತ್ನಿಯ ಜೊತೆ ಪಾಕಿಯನಾಥನ್ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಅನುಮಾನ ವ್ಯಕ್ತಪಡಿಸಿ ಆಗಾಗ ಗಲಾಟೆ ನಡೆಯುತ್ತಿತ್ತು. ಹೀಗಾಗಿ ತಂದೆ ಡ್ರೈವರ್ ಕೆಲಸ ಮಾಡುತ್ತಿದ್ದು ಕಳೆದ ವಾರ ಜಾನ್ಸನ್ ಮನೆಗೆ ಬಂದು ತನ್ನ 9 ತಿಂಗಳ ಮಗುವನ್ನು ನೋಡಿಕೊಂಡು ಹೋಗಿದ್ದಾನೆ ಎನ್ನಲಾಗಿದೆ. ಹೀಗಾಗಿ ಜಾನ್ಸನ್ ಇಲ್ಲದ ಸಮಯದಲ್ಲಿ ತಂದೆ ಬರುವುದು ಅವನಿಗೆ ಇಷ್ಟ ಇರಲಿಲ್ಲ. ಹೀಗಾಗಿ ಕುಡಿದ ಮತ್ತಿನಲ್ಲಿ ಗಲಾಟೆ ನಡೆದು ಪರಸ್ಪರ ತಂದೆ ಮಲಗಿದ್ದಾಗ ರಾತ್ರಿ 12:30 ರಲ್ಲಿ ಕಲ್ಲಿನಿಂದ ತಲೆಗೆ ಜಜ್ಜಿ ಕೊಲೆ ಮಾಡಿ ಜಾನ್ಸನ್ ಜೀವ ಪರಾರಿಯಾಗಿದ್ದನು. ಈತನನ್ನು ರಾಮಪುರ ಪೊಲೀಸರು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ. ಪ್ರಕರಣ ದಾಖಲಾಗಿದೆ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ಟಿ ಕವಿತಾ ಹಾಗೂ ಪ್ರಭಾರ ಡಿವೈಎಸ್ಪಿ ಲಕ್ಷ್ಮಯ್ಯ ಹಾಗೂ ರಾಮಪುರ ಇನ್ಸ್ಪೆಕ್ಟರ್ ಚಿಕ್ಕರಾಜ ಶೆಟ್ಟಿ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವವನ್ನು ಚಾಮರಾಜನಗರ ಜಿಲ್ಲೆಯ ಸಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ನಂತರ ವಾರಸುದಾರರಿಗೆ ನೀಡಲಾಯಿತು.