ಸಾರಾಂಶ
ತುರುವೇಕೆರೆ: ರಾಜ್ಯದ ಲೋಕಾಯುಕ್ತ ಎಡಿಜಿಪಿ ಆಗಿರುವ ಚಂದ್ರಶೇಖರ್ ಒಬ್ಬ ಭ್ರಷ್ಟ ಅಧಿಕಾರಿಯಾಗಿದ್ದಾರೆ. ಅವರನ್ನು ಅಮಾನತು ಮಾಡಿ , ಅವರ ವಿರುದ್ಧ ಸೂಕ್ತ ತನಿಖೆ ನಡೆಸಬೇಕು ಹಾಗೂ ರಾಜ್ಯದಿಂದ ಎತ್ತಂಗಡಿ ಮಾಡಬೇಕೆಂದು ಶಾಸಕ ಎಂ.ಟಿ.ಕೃಷ್ಣಪ್ಪ ಆಗ್ರಹಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್, ಕೇಂದ್ರ ಕ್ಯಾಬಿನೆಟ್ ಸಚಿವ ಎಚ್.ಡಿ.ಕುಮಾರಸ್ವಾಮಿಯವರ ಬಗ್ಗೆ ಬಹಳ ಲಘುವಾಗಿ ಮಾತನಾಡಿರುವುದು ಖಂಡನೀಯ. ಎಡಿಜಿಪಿ ಚಂದ್ರಶೇಖರ್ ಮೇಲೆ ಕ್ರಮ ಕೈಗೊಳ್ಳುವಂತೆ ಈಗಾಗಲೇ ಜೆಡಿಎಸ್, ಬಿಜೆಪಿ ಪಕ್ಷದ ಎಲ್ಲ ಶಾಸಕರು ಮನವಿ ಮಾಡಿದ್ದೇವೆ. ಕೂಡಲೇ ಕ್ರಮ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು. ಅಲ್ಲದೇ ವಿಧಾನಸೌಧದ ಮುಂದೆ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.ದುಡ್ಡಿನ ದಂಧೆ: ರಾಜ್ಯದಲ್ಲಿ ಮುಖ್ಯಮಂತ್ರಿ ಸೇರಿ ಎಲ್ಲಾ ಸಚಿವರೂ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಅವರಿಗೆ ರಾಜ್ಯದ ಅಭಿವೃದ್ಧಿ ಬಗ್ಗೆ ಕಾಳಜಿ ಇಲ್ಲ. ದುಡ್ಡು ಮಾಡುವ ದಂಧೆಯಲ್ಲಿ ತೊಡಗಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ೧೬೫೦ ಎಕರೆ ಡಿನೋಟಿಫಿಕೇಷನ್ ಮಾಡಿ ಸಾವಿರಾರು ಕೋಟಿ ರು. ಲೂಟಿ ಮಾಡಿದ್ದಾರೆ. ಈ ಭ್ರಷ್ಟಾಚಾರ ಹೊರಬರಬಾರದೆಂದು ಲೋಕಾಯುಕ್ತ ಅಧಿಕಾರ ಮೊಟಕುಗೊಳಿಸಿ ಎಸಿಬಿ ಮಾಡಿದ್ದರು. ಆದರೆ ವಿಪರ್ಯಾಸವೆಂಬಂತೆ ಲೋಕಾಯುಕ್ತರ ಕುಣಿಕೆಯಲ್ಲಿ ಈಗ ಸಿದ್ದರಾಮಯ್ಯ ಸಿಲುಕಿದ್ದಾರೆ ಎಂದು ಕುಟುಕಿದರು.
ಜೆಡಿಎಸ್ ವಕ್ತಾರ ವೆಂಕಟಾಪುರ ಯೋಗೀಶ್, ಮುಖಂಡರಾದ ಹೆಡಗಿಹಳ್ಳಿ ವಿಶ್ವನಾಥ್, ವಿಜೇಂದ್ರಕುಮಾರ್, ಪರಮೇಶ್ ಸೇರಿ ಇತರರು ಇದ್ದರು.