ಸಾರಾಂಶ
ಕರ್ತವ್ಯಲೋಪ ತೋರಿದ ಹಿನ್ನೆಲೆ ವಿಜಯಪುರ ಸಾರ್ವಜನಿಕ ಶಿಕ್ಷಣ ಇಲಾಖೆಯ ಮೂವರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ವಿಜಯಪುರ ಡಿಡಿಪಿಐ ಎನ್.ಎಚ್.ನಾಗೂರ, ವಿಜಯಪುರ ಡಯಟ್ ಹಿರಿಯ ಉಪನ್ಯಾಸಕ ಎಸ್.ಎ.ಮುಜಾವರ ಹಾಗೂ ಎ.ಎಸ್.ಹತ್ತಳ್ಳಿ ಅಮಾನತುಗೊಂಡಿದ್ದಾರೆ.
ವಿಜಯಪುರ: ಕರ್ತವ್ಯಲೋಪ ತೋರಿದ ಹಿನ್ನೆಲೆ ವಿಜಯಪುರ ಸಾರ್ವಜನಿಕ ಶಿಕ್ಷಣ ಇಲಾಖೆಯ ಮೂವರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ವಿಜಯಪುರ ಡಿಡಿಪಿಐ ಎನ್.ಎಚ್.ನಾಗೂರ, ವಿಜಯಪುರ ಡಯಟ್ ಹಿರಿಯ ಉಪನ್ಯಾಸಕ ಎಸ್.ಎ.ಮುಜಾವರ ಹಾಗೂ ಎ.ಎಸ್.ಹತ್ತಳ್ಳಿ ಅಮಾನತುಗೊಂಡಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಅವರು ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ. 2009-10 ಹಾಗೂ 2011-12 ಸಾಲಿನಲ್ಲಿ ಐಇಡಿಎಸ್ ಎಸ್ ಯೋಜನೆ ಅನುದಾನ ದುರುಪಯೋಗ ಮಾಡಿರೋ ಆರೋಪವಿರುವದರಿಂದ ಸಾರ್ವಜನಿಕ ಶಿಕ್ಷಣ ಇಲಾಖಾ ವಿಚಾರಣೆ ಕಾಯ್ದಿರಿಸಿ ಮಂಗಳವಾರ ಅಮಾನತು ಆದೇಶ ಹೊರಡಿಸಿದ್ದಾರೆ. ಅಸ್ತಿತ್ವದಲ್ಲಿ ಇರದ ಎನ್‌ಜಿಒಗಳಿಗೆ ನಿಯಮ ಬಾಹಿರವಾಗಿ ಹಣ ಬಿಡುಗಡೆ ಮಾಡಿರೋ ಆರೋಪವಿದೆ.