ಜಿಲ್ಲಾ ಮಾನವ ಅಭಿವೃದ್ಧಿ ವರದಿ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ದೂರದೃಷ್ಟಿ ಯೋಜನೆ ತರಬೇತಿ ಕಾರ್ಯಾಗಾರವು ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು.
ಕನ್ನಡಪ್ರಭ ವಾರ್ತೆ ಮಡಿಕೇರಿ
ಜಿಲ್ಲಾ ಮಾನವ ಅಭಿವೃದ್ಧಿ ವರದಿ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ದೂರದೃಷ್ಟಿ ಯೋಜನೆ ತರಬೇತಿ ಕಾರ್ಯಾಗಾರವು ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು. ಕಾರ್ಯಾಗಾರವನ್ನು ಜಿಲ್ಲಾ ಪಂಚಾಯಿತಿ ಸಿಇಒ ಆನಂದ್ ಪ್ರಕಾಶ್ ಮೀನಾ ಉದ್ಘಾಟಿಸಿ ಮಾತನಾಡಿ ಜಿಲ್ಲಾ ಮಟ್ಟದ ಅಧಿಕಾರಿಗಳು ನೀಡುವ ಅಂಕಿ ಅಂಶ ವಿವರವನ್ನು ಮುಂದಿನ ಯೋಜನೆಗಳಿಗೆ, ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಲಿದ್ದು, ವರದಿಗೆ ಸಂಬಂಧಿಸಿದ ನಿಖರವಾದ ಮಾಹಿತಿಯನ್ನು ಫೆಬ್ರವರಿ-2026 ರೊಳಗೆ ಸಂಬಂಧಿಸಿದ ಇಲಾಖೆ ಮಾಹಿತಿ ನೀಡಬೇಕು ಎಂದು ಅವರು ತಿಳಿಸಿದರು. ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಗಳಾದ ಡಾ.ಗಣೇಶ್ ಪ್ರಸಾದ್ ಮಾತನಾಡಿ, ಸಮಗ್ರ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ವರದಿಗಾಗಿ 117 ಅಂಶಗಳ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಮಾನವ ಅಭಿವೃದ್ಧಿ ವರದಿ ಆಧಾರದ ಮೇಲೆ ಗ್ರಾಮ, ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿಗಳಿಗೆ ಅನುದಾನ ಹಂಚಿಕೆಯಾಗುತ್ತದೆ. ಶಿಶು ಮತ್ತು ತಾಯಂದಿರ ಮರಣ, ಶಾಲೆ ಬಿಟ್ಟ ಮಕ್ಕಳ ಸಂಖ್ಯೆಗಳನ್ನು ನಿಖರವಾಗಿ ದಾಖಲಿಸಬೇಕು ಎಂದರು. ಮೈಸೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರಾದ ಡಾ.ನವಿತಾ ತಿಮ್ಮಯ್ಯ. ಮೈಸೂರು ಗ್ರಾಮ ಸಂಸ್ಥೆಯ ಮಲ್ಲಿಕಾರ್ಜುನ ಸ್ವಾಮಿ, ಅವರು ವರದಿಗಳ ಸಂಯೋಜಕರಾಗಿದ್ದು, ಹಲವಾರು ಮಾನದಂಡಗಳನ್ನು ಗುರುತಿಸಿ ವಿಷಯವಾರು ಮಾಹಿತಿಗಳನ್ನು ಅಂಕಿ ಅಂಶಗಳನ್ನು ಅಧಿಕಾರಿಗಳು ನೀಡಬೇಕು ಎಂದು ಹೇಳಿದರು. ವಿವಿಧ ಇಲಾಖೆಯ ಮಾಹಿತಿ ಆಧಾರದ ಮೇಲೆ ಶಿಕ್ಷಣ ಮತ್ತು ಆರೋಗ್ಯವನ್ನು ಮೂಲ ಮಾನದಂಡವಾಗಿ ಪರಿಗಣಿಸಲಾಗುತ್ತದೆ ಎಂದು ತಿಳಿಸಿದರು. ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಮುಖ್ಯ ಯೋಜನಾಧಿಕಾರಿ ಅಬ್ದುಲ್ ನಭಿ, ಜಿಲ್ಲಾ ಹಾಗೂ ತಾಲೂಕಿನ ಅಧಿಕಾರಿಗಳು ಇದ್ದರು.