ಸುತ್ತೂರು ಶಿವರಾತ್ರಿ ರಾಜೇಂದ್ರ ಸ್ವಾಮೀಜಿಗೆ ಭಾರತ ರತ್ನ ನೀಡಿ

| Published : Aug 31 2025, 01:09 AM IST

ಸುತ್ತೂರು ಶಿವರಾತ್ರಿ ರಾಜೇಂದ್ರ ಸ್ವಾಮೀಜಿಗೆ ಭಾರತ ರತ್ನ ನೀಡಿ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದ ಸುತ್ತೂರು ಮಹಾಸಂಸ್ಥಾನದ ಪೀಠಾಧಿಪತಿಗಳಾಗಿದ್ದ ಡಾ. ಶ್ರೀ ಶಿವರಾತ್ರಿರಾಜೇಂದ್ರ ಮಹಾಸ್ವಾಮೀಜಿಗೆ ಭಾರತ ಸರ್ಕಾರ ಈ ಬಾರಿಯ "ಭಾರತ ರತ್ನ " ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಿ ಗೌರವಿಸಬೇಕೆಂದು ಅಖಿಲ ಕರ್ನಾಟಕ ಕನ್ನಡ ಮಹಾಸಭಾ ಸದಸ್ಯರು ಜಿಲ್ಲಾಧಿಕಾರಿ ಶಿಲ್ಪಾನಾಗ್‌ಗೆ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ರಾಜ್ಯದ ಸುತ್ತೂರು ಮಹಾಸಂಸ್ಥಾನದ ಪೀಠಾಧಿಪತಿಗಳಾಗಿದ್ದ ಡಾ. ಶ್ರೀ ಶಿವರಾತ್ರಿರಾಜೇಂದ್ರ ಮಹಾಸ್ವಾಮೀಜಿಗೆ ಭಾರತ ಸರ್ಕಾರ ಈ ಬಾರಿಯ "ಭಾರತ ರತ್ನ " ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಿ ಗೌರವಿಸಬೇಕೆಂದು ಅಖಿಲ ಕರ್ನಾಟಕ ಕನ್ನಡ ಮಹಾಸಭಾ ಸದಸ್ಯರು ಜಿಲ್ಲಾಧಿಕಾರಿ ಶಿಲ್ಪಾನಾಗ್‌ಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಹಾಸಭಾದ ರಾಜ್ಯಾಧ್ಯಕ್ಷ ಚಾ.ರಂ. ಶ್ರೀನಿವಾಸಗೌಡ ಮಾತನಾಡಿ, ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರ, ಅನ್ನದಾಸೋಹ ಕ್ಷೇತ್ರ ಮತ್ತು ಆರೋಗ್ಯ ಕ್ಷೇತ್ರ ಇನ್ನೂ ಹಲವಾರು ಕ್ಷೇತ್ರಗಳಲ್ಲಿ ಕಳೆದ ೭೦ ವರ್ಷಗಳಿಂದ ನಿರಂತರವಾಗಿ ಶ್ರೀಗಳು ಸೇವೆ ಸಲ್ಲಿಸಿದ್ದಾರೆ. ಕೋಟ್ಯಾಂತರ ವಿದ್ಯಾರ್ಥಿಗಳಿಗೆ ಇಡೀ ದೇಶಾದ್ಯಂತ ವಿದ್ಯಾರ್ಜನೆಯನ್ನು ಮಾಡಿ ಲಕ್ಷಾಂತರ ಮಂದಿಗೆ ಉದ್ಯೋಗವನ್ನು ನೀಡಿ ಅವರ ಬಾಳಿಗೆ ಬೆಳಕಾಗಿರುವ ಮತ್ತು ಕರ್ನಾಟಕ ರಾಜ್ಯದ ಹಳ್ಳಿ ಹಳ್ಳಿಗಳಲ್ಲೂ ಸಹ ಶಿಕ್ಷಣ ಸಂಸ್ಥೆಗಳನ್ನು ತೆರೆದು ಪ್ರಾಥಮಿಕ ವಿದ್ಯಾಭ್ಯಾಸದಿಂದ ಹಿಡಿದು ಉನ್ನತ ಶಿಕ್ಷಣ, ತಾಂತ್ರಿಕ ಶಿಕ್ಷಣ, ವೈದ್ಯಕೀಯ ಶಿಕ್ಷಣ, ಸ್ನಾತಕೋತ್ತರ ಶಿಕ್ಷಣ, ಇನ್ನೂ ಹಲವಾರು ಬಗೆಯ ಶಿಕ್ಷಣವನ್ನು ನೀಡಿ ಒಂದು ಸರ್ಕಾರ ಮಾಡಬೇಕಾದ ಕೆಲಸವನ್ನು ಒಂದು ಶಿಕ್ಷಣ ಸಂಸ್ಥೆಯ ಮುಖಾಂತರ ಮಾಡಿ ಇಡೀ ಕರ್ನಾಟಕ ರಾಜ್ಯದಲ್ಲೇ ಮನೆ ಮಾತಾಗಿರುವ ಜೆಎಸ್‌ಎಸ್ ಶಿಕ್ಷಣ ಸಂಸ್ಥೆಗಳ ರೂವಾರಿಗಳು ರಾಜೇಂದ್ರ ಶ್ರೀಗಳು ಎಂದರು.

ಅನ್ನದಾಸೋಹದ ಮುಖಾಂತರ ಪ್ರತಿನಿತ್ಯ ಸಹಸ್ರಾರು ಜನರಿಗೆ ಅನುಕೂಲ ಮಾಡಿಕೊಟ್ಟಿರುವ ಮತ್ತು ಆರೋಗ್ಯ ಕೇಂದ್ರಗಳನ್ನು ತೆರೆದು ಲಕ್ಷಾಂತರ ಬಡ ರೋಗಿಗಳಿಗೆ ಸಹಾಯವನ್ನು ಮಾಡುತ್ತಿರುವ ಇನ್ನು ಅನೇಕ ಕಾಯಕಗಳನ್ನು ಮಾಡಿರುವ ಮತ್ತು ನಮ್ಮ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ ಅನ್ನದಾಸೋಹಿ, ತ್ರಿಗುಣ ದಾಸೋಹಿ, ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳು ಈ ಮನುಕುಲಕ್ಕೆ ನೀಡಿರುವ ಅಪಾರ ಸೇವೆಯನ್ನು ಪರಿಗಣಿಸಿ ಅವರ ೧೧೦ನೇ ಜನ್ಮ ದಿನಾಚರಣೆಯ ಸುಸಂದರ್ಭದಲ್ಲಿ ಭಾರತ ಸರ್ಕಾರ ಕೊಡಮಾಡುವ ಪ್ರತಿಷ್ಠಿತ ಭಾರತರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಬೇಕೆಂದು ನಾಡಿನ ಜನತೆಯ ಪರವಾಗಿ ಮನವಿ ಮಾಡುತ್ತೇವೆ ಎಂದರು.

ಈ ಸಂದರ್ಭದಲ್ಲಿ ಮಹೇಶ್‌ಗೌಡ, ಡಾ. ಪರಮೇಶ್ವರಪ್ಪ, ಮಂಗಲದ ಶಿವು, ಪಣ್ಯದಹುಂಡಿ ರಾಜು, ರಾಚಪ್ಪ. ತಾಂಡವಮೂರ್ತಿ, ಮುತ್ತಿಗೆ ಗೋವಿಂದರಾಜು, ಚಾ.ಸಿ. ಸಿದ್ದರಾಜು, ವೀರಭದ್ರಪ್ಪಇದ್ದರು.