ಕನಕಪುರ: ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ತಾಯಿ ಗೌರಮ್ಮನವರು ನೆಲೆಸಿರುವ ಕೋಡಿಹಳ್ಳಿ ನಿವಾಸಕ್ಕೆ ಭಾನುವಾರ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿ ಆಶೀರ್ವದಿಸಿದರು
ಕನಕಪುರ: ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ತಾಯಿ ಗೌರಮ್ಮನವರು ನೆಲೆಸಿರುವ ಕೋಡಿಹಳ್ಳಿ ನಿವಾಸಕ್ಕೆ ಭಾನುವಾರ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿ ಆಶೀರ್ವದಿಸಿದರು. ಈ ವೇಳೆ ಮರಳೇಗವಿ ಮಠದ ಡಾ.ಶ್ರೀ ಮುಮ್ಮಡಿ ಶಿವರುದ್ರ ಸ್ವಾಮೀಜಿ ಉಪಸ್ಥಿತರಿದ್ದರು. ಸುತ್ತೂರು ಶ್ರೀಗಳು ಕಾರ್ಯಕ್ರಮವೊಂದರ ನಿಮಿತ್ತ ಕೋಡಿಹಳ್ಳಿಗೆ ಆಗಮಿಸಿದ್ದ ಸಂದರ್ಭದಲ್ಲಿ ಗೌರಮ್ಮನವರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.