ಸಾರಾಂಶ
ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಎಸ್‌ವಿಪಿಎಲ್ ಕ್ರಿಕೆಟ್ ಟೂರ್ನಿಯ ಉದ್ಘಾಟನಾ ಸಮಾರಂಭ ನಡೆಯಿತು.
ಕನ್ನಡಪ್ರಭ ವಾರ್ತೆ ಬೈಂದೂರು
ಗ್ರಾಮೀಣ ಮಟ್ಟದಲ್ಲಿ ಹಮ್ಮಿಕೊಳ್ಳುವ ಪಂದ್ಯಾಟಗಳು ವಿದ್ಯಾರ್ಥಿಗಳು ಉನ್ನತ ಸಾಧನೆಗಳನ್ನು ಮಾಡುವಲ್ಲಿ ಬಹಳ ದೊಡ್ಡ ಪ್ರೇರಣೆಯನ್ನು ನೀಡುತ್ತವೆ. ವಿದ್ಯಾರ್ಥಿಗಸಳು ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಗಂಗೊಳ್ಳಿಯ ಖ್ಯಾತ ಉದ್ಯಮಿ ವಿಠಲ ಶೆಣೈ ಅಭಿಪ್ರಾಯಪಟ್ಟರು.ಅವರು ಇಲ್ಲಿನ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ಎಸ್‌ವಿಪಿಎಲ್ ಕ್ರಿಕೆಟ್ ಟೂರ್ನಿಯ ಉದ್ಘಾಟನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಮುಖ್ಯ ಅತಿಥಿಯಾಗಿ ಜಿ.ಎಸ್.ವಿ.ಎಸ್. ಅಸೋಸಿಯೇಷನ್ ಅಧ್ಯಕ್ಷ ಡಾ. ಕಾಶಿನಾಥ್ ಪೈ, ಸರಸ್ವತಿ ವಿದ್ಯಾಲಯ ಸಂಸ್ಥೆಗಳ ಸಂಚಾಲಕ ಸದಾಶಿವ ನಾಯಕ್, ಎನ್.ಜಿ.ಎಸ್.ವಿ.ಎಸ್. ಅಸೋಸಿಯೇಷನ್ ಖಜಾಂಚಿ ಅಶ್ವಿನ್ ನಾಯಕ್, ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್, ಉಪನ್ಯಾಸಕಿ ಸುಗುಣ ಆರ್.ಕೆ. ವಿದ್ಯಾರ್ಥಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.ಈ ಸಂದರ್ಭ ಸರಸ್ವತಿ ವಿದ್ಯಾಲಯ ಹಮ್ಮಿಕೊಂಡ ವಿವಿಧ ಕ್ರೀಡಾಕೂಟಗಳ ಯಶಸ್ವಿಗೆ ಶ್ರಮಿಸಿದ ವಿವಿಧ ಕ್ರೀಡಾಳುಗಳನ್ನು ಅಭಿನಂದಿಸಿ ಗೌರವಿಸಲಾಯಿತು. ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ದೀಕ್ಷಿತ್ ಮೇಸ್ತ ಪ್ರಾಸ್ತಾವಿಕ ನುಡಿಗಳನಾಡಿದರು. ದೈಹಿಕ ಶಿಕ್ಷಣ ಶಿಕ್ಷಕ ಸೂರಜ್ ಸಾರಂಗ ಅತಿಥಿಗಳನ್ನು ಸ್ವಾಗತಿಸಿದರು. ಸುಶ್ಮಿತಾ ಗಾಣಿಗ ನಿರೂಪಿಸಿದರು. ಶ್ರೇಯಲ್ ವಂದಿಸಿದರು.
;Resize=(128,128))
;Resize=(128,128))