ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮದ ಸಮಾರೋಪ ಸಮಾರಂಭ

| Published : Oct 05 2024, 01:42 AM IST

ಸಾರಾಂಶ

ಸ್ವಚ್ಛತಾ ಹೀ ಸೇವಾ ಆಂದೋಲನ ಕಾರ್ಯಕ್ರಮದ ಅಂಗವಾಗಿ ಉಡುಪಿ ನಗರದ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಸ್ವಚ್ಛತಾ ಪ್ರತಿಜ್ಞೆ, ಸಸಿ ನೆಡುವುದು, ತ್ಯಾಜ್ಯದಿಂದ ಕಲಾಕೃತಿ, ನೈರ್ಮಲ್ಯ ಶುಚಿತ್ವ ಕುರಿತು ಪ್ರಬಂಧ ಸ್ಪರ್ಧೆ, ಸ್ವಚ್ಛತೆಯ ಬಗ್ಗೆ ಕಿರು ನಾಟಕ, ಸ್ವಚ್ಛತಾ ಕಾರ್ಯಕ್ರಮ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಸಾರ್ವಜನಿಕರಲ್ಲಿ ನೈರ್ಮಲ್ಯ ಶುಚಿತ್ವದ ಮಹತ್ವ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ‘ಸ್ವಭಾವ ಸ್ವಚ್ಛತಾ ಸಂಸ್ಕಾರ ಸ್ವಚ್ಛತಾ’ ಎಂಬ ಧ್ಯೇಯವಾಕ್ಯದೊಂದಿಗೆ ಸ್ವಚ್ಛತಾ ಹೀ ಸೇವಾ ಆಂದೋಲನ ಕಾರ್ಯಕ್ರಮದ ಅಂಗವಾಗಿ ನಗರದ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಸ್ವಚ್ಛತಾ ಪ್ರತಿಜ್ಞೆ, ಸಸಿ ನೆಡುವುದು, ತ್ಯಾಜ್ಯದಿಂದ ಕಲಾಕೃತಿ, ನೈರ್ಮಲ್ಯ ಶುಚಿತ್ವ ಕುರಿತು ಪ್ರಬಂಧ ಸ್ಪರ್ಧೆ, ಸ್ವಚ್ಛತೆಯ ಬಗ್ಗೆ ಕಿರು ನಾಟಕ, ಸ್ವಚ್ಛತಾ ಕಾರ್ಯಕ್ರಮ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.ಅ.2ರಂದು ಗಾಂಧಿ ಜಯಂತಿ ಆಚರಣೆಯೊಂದಿಗೆ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು.

ಈ ಸಂದರ್ಭ ಜಿಲ್ಲಾ ಸರ್ಜನ್ ಡಾ. ಎಚ್. ಅಶೋಕ್ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿ, ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡುವುದು, ಸಾರ್ವಜನಿಕರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ನಮ್ಮೆಲ್ಲರ ಕರ್ತವ್ಯ ಎಂದರು.ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಮ ರಾವ್, ಜಿಲ್ಲಾ ಆಸ್ಪತ್ರೆಯ ನಿವಾಸಿ ವೈದ್ಯಾಧಿಕಾರಿ ಡಾ. ವಾಸುದೇವ ಎಸ್., ಎಂ.ಸಿ.ಎಚ್. ಆಸ್ಪತ್ರೆಯ ಎ.ಎಂ.ಒ. ಡಾ. ರಾಜಗೋಪಾಲ ಭಂಡಾರಿ, ಆಸ್ಪತ್ರೆಯ ವೈದ್ಯಾಧಿಕಾರಿಗಳು, ನರ್ಸಿಂಗ್ ಅಧಿಕಾರಿಗಳು, ಆಸ್ಪತ್ರೆಯ ಸಿಬ್ಬಂದಿ ಉಪಸ್ಥಿತರಿದ್ದರು.ತ್ಯಾಜ್ಯದಿಂದ ಕಲಾಕೃತಿ ಹಾಗೂ ನೈರ್ಮಲ್ಯ ಶುಚಿತ್ವ ಕುರಿತ ಪ್ರಬಂಧ ಸ್ಪರ್ಧೆ ಹಾಗೂ ಸ್ವಚ್ಛತೆಯ ಬಗ್ಗೆ ಕಿರು ನಾಟಕ ಸ್ಪರ್ಧೆಯಲ್ಲಿ ಭಾಗವಹಿಸಿದವರಿಗೆ ಬಹುಮಾನಗಳನ್ನು ಪ್ರದಾನ ಮಾಡಲಾಯಿತು.