ಸ್ವಚ್ಛತಾ ಹಿ ಸೇವಾ ಅಭಿಯಾನ ವಿದ್ಯುಕ್ತ ಚಾಲನೆ

| Published : Sep 19 2024, 01:46 AM IST

ಸ್ವಚ್ಛತಾ ಹಿ ಸೇವಾ ಅಭಿಯಾನ ವಿದ್ಯುಕ್ತ ಚಾಲನೆ
Share this Article
  • FB
  • TW
  • Linkdin
  • Email

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಜಿಲ್ಲಾ ಪಂಚಾಯತಿ ಕಚೇರಿ ಆವರಣದಲ್ಲಿ ಸ್ವಚ್ಛತಾ ಹಿ ಸೇವಾ ಅಭಿಯಾನಕ್ಕೆ ಜಿಲ್ಲಾ ಪಂಚಾಯತಿ ಸಿಇಒ ರಿಷಿ ಆನಂದ ವಿದ್ಯುಕ್ತ ಚಾಲನೆ ನೀಡಿದರು. ಅಭಿಯಾನದ ಅಂಗವಾಗಿ ಜಿಪಂ ಎಲ್ಲಾ ಕೊಠಡಿ, ವಾಹನ ನಿಲುಗಡೆ ಸ್ಥಳ, ಸಾರ್ವಜನಿಕರ ಭೇಟಿ ಸ್ಥಳ ಮತ್ತು ಉದ್ಯಾನ ಸ್ಥಳವು ಸೇರಿದಂತೆ ಒಳಾಂಗಣ ಮತ್ತು ಹೊರ ಆವರಣಗಳನ್ನು ಸ್ವಚ್ಛತೆ ಮಾಡಲಾಯಿತು. ಕರ್ತವ್ಯ ಸ್ಥಳದಲ್ಲಿಯೂ ಸ್ವಚ್ಛತೆ ಕಾಪಾಡಬೇಕು ಎಂದು ಸಿಇಒ ಸೂಚನೆ ನೀಡಿದರು. ಇದೇ ವೇಳೆ ಸ್ವಚ್ಛತೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಕನ್ನಡಪ್ರಭ ವಾರ್ತೆ ವಿಜಯಪುರ

ನಗರದ ಜಿಲ್ಲಾ ಪಂಚಾಯತಿ ಕಚೇರಿ ಆವರಣದಲ್ಲಿ ಸ್ವಚ್ಛತಾ ಹಿ ಸೇವಾ ಅಭಿಯಾನಕ್ಕೆ ಜಿಲ್ಲಾ ಪಂಚಾಯತಿ ಸಿಇಒ ರಿಷಿ ಆನಂದ ವಿದ್ಯುಕ್ತ ಚಾಲನೆ ನೀಡಿದರು.

ಅಭಿಯಾನದ ಅಂಗವಾಗಿ ಜಿಪಂ ಎಲ್ಲಾ ಕೊಠಡಿ, ವಾಹನ ನಿಲುಗಡೆ ಸ್ಥಳ, ಸಾರ್ವಜನಿಕರ ಭೇಟಿ ಸ್ಥಳ ಮತ್ತು ಉದ್ಯಾನ ಸ್ಥಳವು ಸೇರಿದಂತೆ ಒಳಾಂಗಣ ಮತ್ತು ಹೊರ ಆವರಣಗಳನ್ನು ಸ್ವಚ್ಛತೆ ಮಾಡಲಾಯಿತು. ಕರ್ತವ್ಯ ಸ್ಥಳದಲ್ಲಿಯೂ ಸ್ವಚ್ಛತೆ ಕಾಪಾಡಬೇಕು ಎಂದು ಸಿಇಒ ಸೂಚನೆ ನೀಡಿದರು. ಇದೇ ವೇಳೆ ಸ್ವಚ್ಛತೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಈ ವೇಳೆ ಜಿಪಂ ಸಿಇಒ ರಿಷಿ ಆನಂದ್ ಮಾತನಾಡಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಕೇಂದ್ರ ಜಲಶಕ್ತಿ ಮಂತ್ರಾಲಯ ಸಹಯೋಗದಲ್ಲಿ ದೇಶದಲ್ಲಿ ಸ್ವಭಾವ ಸ್ವಚ್ಛತಾ, ಸಂಸ್ಕಾರ ಸ್ವಚ್ಛತಾ ಎಂಬ ಘೋಷವಾಕ್ಯದೊಂದಿಗೆ ಎರಡು ವಾರಗಳ ಕಾಲ ಜಿಲ್ಲಾ ಹಾಗೂ ತಾಲೂಕು, ಪ್ರತಿ ಗ್ರಾಮ ಪಂಚಾಯತಿಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಪ್ರತಿ ದಿನವೂ ಸ್ವಚ್ಛತೆ ಎಂಬುದು ಆದ್ಯತೆಯಾಗಬೇಕು ಎಂದು ಹೇಳಿದರು.

ಬಬಲೇಶ್ವರ ತಾಲೂಕಿನ ಹೊನಗನಹಳ್ಳಿ ಗ್ರಾಪಂ ಸರ್ಕಾರಿ ಪ್ರೌಢಶಾಲೆ ಅವರಣದಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನದಡಿ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ವಿದ್ಯಾರ್ಥಿಗಳು ಸ್ವಚ್ಛತೆಗೆ ಮತ್ತು ಆರೋಗ್ಯ ಕಡೆ ಹೆಚ್ಚಿನ ಆದ್ಯತೆ ಕೊಡಬೇಕು. ನೆರೆಹೊರೆ ವಾತಾವರಣದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಶೌಚಾಲಯವಿಲ್ಲದ ಕುಟುಂಬಗಳು ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸಿ, ಸಹಾಯಧನದಿಂದ ಶೌಚಾಲಯ ಕಟ್ಟಿಸಿ ತಮ್ಮ ಮನೆಯ ಸುತ್ತಲಿನ ಪರಿಸರ ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು. ಸಾಂಕ್ರಾಮಿಕ ರೋಗ ಹರಡದಂತೆ ಮುಂಜಾಗ್ರತೆ ವಹಿಸಬೇಕು ಎಂದು ಸಿಇಒ ಹೇಳಿದರು.

ಜಿ.ಪಂ. ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಉಪ ಕಾರ್ಯದರ್ಶಿ ಡಾ.ವಿಜಯಕುಮಾರ ಆಜೂರ, ಯೋಜನಾ ನಿರ್ದೇಶಕ ಸಿ. ಬಿ. ದೇವರಮನಿ, ಸಹಾಯಕ ಕಾರ್ಯದರ್ಶಿ ಅನುಸೂಯಾ ಚಲವಾದಿ, ಬಬಲೇಶ್ವರ ತಾ.ಪಂ. ಇಓ ವಿ. ಎಸ್. ಹಿರೇಮಠ, ಗ್ರಾ.ಪಂ. ಅಧ್ಯಕ್ಷ ನಚಿಕೇತ ಬಿದರಿ, ಉಪಾಧ್ಯಕ್ಷ ರಮೇಶ್ ಕಾಂಬಳೆ, ಪಿಡಿಓ ಜಯಶ್ರೀ ಪವಾರ ಇದ್ದರು.--------

ಬಾಕ್ಸ್‌....

ಗಮನ ಸೆಳೆದ ಎಸ್‌ಎಚ್‌ಎಸ್‌

ವಿದ್ಯಾರ್ಥಿಗಳು ತಮ್ಮ ಓದಿಗೆ ಪೂರಕವಾಗಿ ಆಸಕ್ತಿ ಕ್ಷೇತ್ರದ ಕುರಿತು ಪೂರ್ವ ತಯಾರಿ ಮಾಡಿಕೊಳ್ಳಬೇಕು. ಶಿಕ್ಷಕರ ಸಹಕಾರದಿಂದ ಗುರಿ ಹಾಗೂ ನಿಖರ ಯೋಜನೆಯೊಂದಿಗೆ ವಿದ್ಯಾರ್ಥಿಗಳು ಸಾಧನೆ ಮಾಡಲು ಸಾಧ್ಯ. ವಿದ್ಯಾಭ್ಯಾಸದ ಜೊತೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಯಲ್ಲಿಯೂ ಭಾಗವಹಿಸಬೇಕು.ಷೀ ವೇಳೆ ಸ್ವಚ್ಛತಾ ಹೀ ಸೇವಾ ಅಭಿಯಾನದ ಇಂಗ್ಲಿಷ ಅಕ್ಷರದಲ್ಲಿ ಮೂಡಿದ ಸಾಂದರ್ಭಿಕ ಸಂಕೇತ ಎಲ್ಲರ ಗಮನ ಸೆಳೆಯಿತು. ಬಳಿಕ ಸಿಇಒ ಅವರು ಸ್ವತಃ ಪ್ರೌಢಶಾಲೆ ಆವರಣದ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿ ಅಭಿಯಾನಕ್ಕೆ ಚಾಲನೆ ನೀಡಿದರು. ಹೊನಗನಹಳ್ಳಿ ಗ್ರಾಮದ ಗ್ರಂಥಾಲಯದ ಅರಿವು ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿನ ಮೂಲ ಸೌಕರ್ಯಗಳನ್ನು ಪರಿಶೀಲಿಸಿದರು. ವಾಚಕರಿಗೆ ಅನುಕೂಲವಾಗುವ ಪುಸ್ತಕಗಳ ಪಟ್ಟಿಮಾಡಿ, ಕಂಪ್ಯೂಟರ್ ಹಾಗೂ ಇತರ ಪರಿಕರಗಳನ್ನು ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಅನುದಾನದಲ್ಲಿ ಖರೀದಿಸಲು ಕಾರ್ಯನಿರ್ವಾಹಕ ಅಧಿಕಾರಿಗಳಾದ ವಿ.ಎಸ್.ಹಿರೇಮಠ ಅವರಿಗೆ ಸೂಚಿಸಿದರು.

ಹೊನಗನಹಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಮೂಲಸೌಕರ್ಯಗಳನ್ನು ಪರಿಶೀಲಿಸಿದರು. ಆಸ್ಪತ್ರೆಗೆ ಬರುವ ರೋಗಿಗಳಿಗೆ ಸ್ಪಂದಿಸಬೇಕು. ನೀರಿನ ವ್ಯವಸ್ಥೆ, ಶೌಚಾಲಯಗಳ ವ್ಯವಸ್ಥೆ, ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.