ಸಾರಾಂಶ
ಕನ್ನಡಪ್ರಭ ವಾರ್ತೆ ತುಮಕೂರುಕರ್ನಾಟಕ ಕೌಶಲ್ಯಾಭಿವೃದ್ದಿ ಮಂಡಳಿ ಮಾಜಿ ಅಧ್ಯಕ್ಷ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ ಹಾಲಪ್ಪ ಅವರ ಮನೆಗೆ ವಿವಿಧ ಮಠಗಳ ಸ್ವಾಮೀಜಿಗಳು ಭೇಟಿ ನೀಡಿ ಪಾದಪೂಜೆಯಲ್ಲಿ ಪಾಲ್ಗೊಂಡು,ಗುರುವಂದನೆ ಸ್ವೀಕರಿಸಿ, ದಂಪತಿಯನ್ನು ಆಶೀರ್ವದಿಸಿದರು. ಮಠಾಧೀಶರಾದ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ, ಭೋವಿ ಮಠದ ಸಿದ್ದರಾಮ ಚೈತನ್ಯ ಸ್ವಾಮೀಜಿ, ರಾಜನಹಳ್ಳಿ ಮಠದ ಡಾ.ವಾಲ್ಮೀಕಿ ಪ್ರಸ್ನನಾನಂದ ಸ್ವಾಮೀಜಿ, ಹೊಸದುರ್ಗ ಕುಂಚಟಿಗ ಮಹಾಸಂಸ್ಥಾನ ಮಠದ ಶಾಂತವೀರ ಸ್ವಾಮೀಜಿ, ಲಿಂಗಾಯಿತ ಪಂಚಮಶಾಲಿ ಮಠದ ವಚನಾನಂದಸ್ವಾಮೀಜಿ, ಮಧುರೆ ಭಗೀರಥ ಗುರುಪೀಠದ ಪುರುಷೋತ್ತಮಾನಂದ ಪುರಿ ಸ್ವಾಮೀಜಿ, ಚಿತ್ರದುರ್ಗ ಮಡಿವಾಳ ಮಠದ ಬಸವ ಮಡಿವಾಳ ಮಾಚಿದೇವಸ್ವಾಮೀಜಿ, ಚಿತ್ರದುರ್ಗದ ಕೇತೇಶ್ವರ ಸ್ವಾಮೀಜಿ, ಚಿತ್ರದುರ್ಗದ ಕುಂಬಾರ ಗುಂಡಯ್ಯ ಸ್ವಾಮೀಜಿ, ಉದಯಾನಂದ ಸ್ವಾಮೀಜಿ, ರೇಣುಕಾನಂದ ಸ್ವಾಮೀಜಿ, ಬಸವ ಬೃಂಗೇಶ್ವರ ಸ್ವಾಮೀಜಿಗಳು ಭೇಟಿ ನೀಡಿ ಪಾದಪೂಜೆಯಲ್ಲಿ ಪಾಲ್ಗೊಂಡಿದ್ದರು.ಈ ವೇಳೆ ಸ್ವಾಮೀಜಿಗಳ ಬಳಿ ರಾಜ್ಯದಲ್ಲಿ ಮಾದಕ ವಸ್ತುಗಳ ಬಳಕೆ ಹೆಚ್ಚುತ್ತಿದ್ದು, ಕರ್ನಾಟಕವನ್ನು ಡ್ರಗ್ಸ್ ಮುಕ್ತ ರಾಜ್ಯವನ್ನಾಗಿಸಲು ಮಠಾಧೀಶರು ಸರಕಾರ ಹಾಗೂ ಸಾರ್ವಜನಿಕರೊಂದಿಗೆ ಕೈಜೋಡಿಸುವಂತೆ ಮನವಿ ಮಾಡಿರುವುದಾಗಿ ಮುರುಳೀಧರ ಹಾಲಪ್ಪ ತಿಳಿಸಿದರು.ರಾಜ್ಯದಲ್ಲಿ ಶಿಕ್ಷಣ ಸಂಸ್ಥೆಗಳು ಹೆಚ್ಚಾದಂತೆ ಎಂಜಿನಿಯರಿಂಗ್, ಮೆಡಿಕಲ್, ಇನ್ನಿತರ ಉದ್ಯೋಗಾಧಾರಿತ ಕೋರ್ಸುಗಳನ್ನು ಕಲಿಯಲು ಆಗಮಿಸುತ್ತಿದ್ದು, ಶ್ರೀಮಂತ ಕ್ಯಾಂಪಸ್‌ಗಳನ್ನು ಗುರಿಯಾಗಿಸಿ ಮಾದಕ ವಸ್ತುಗಳ ಮಾರಾಟ ಮತ್ತು ಬಳಕೆ ಹೆಚ್ಚಾಗಿದೆ. ತುಮಕೂರು ಜಿಲ್ಲೆಯಲ್ಲಿಯೂ ಸಹ ಮಾದಕ ವಸ್ತುಗಳು ಅತಿ ಸುಲಭವಾಗಿ ದೊರೆಯುತ್ತಿರುವುದು ಆತಂಕವನ್ನುಂಟು ಮಾಡಿದೆ ಎಂದರು. ಈ ವೇಳೆ ಮಾಜಿ ಶಾಸಕರಾದ ಗಂಗಹನುಮಯ್ಯ,ಡಾ.ಎಂ.ಆರ್.ಹುಲಿನಾಯ್ಕರ್,ಮುಖಂಡರಾದ ಎನ್.ಗೋವಿಂದರಾಜು, ಗೋವಿಂದೇಗೌಡ, ಮರಿಚನ್ನಮ್ಮ, ಸಿದ್ದಲಿಂಗೇಗೌಡ, ಕೊಪ್ಪಲ್ ನಾಗರಾಜು, ಸಿಮೆಂಟ್ ಮಂಜುನಾಥ್,ವಸುಂಧರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.