ಮಕ್ಕಳ ಕೈಗೆ ಪೆನ್‌ ಬದಲು ತಲ್ವಾರ್‌ ಕೊಡಿ: ಸ್ವಾಮೀಜಿ! ಅಫಜಲ್ಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ

| Published : Nov 12 2024, 01:31 AM IST / Updated: Nov 12 2024, 10:27 AM IST

Delhi Traffic Police Checking Viral Video
ಮಕ್ಕಳ ಕೈಗೆ ಪೆನ್‌ ಬದಲು ತಲ್ವಾರ್‌ ಕೊಡಿ: ಸ್ವಾಮೀಜಿ! ಅಫಜಲ್ಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ
Share this Article
  • FB
  • TW
  • Linkdin
  • Email

ಸಾರಾಂಶ

‘ಮಕ್ಕಳ ಕೈಯಲ್ಲಿ ಪೆನ್ನು ಕೊಡುವ ಬದಲು, ತಲ್ವಾರ್ ಕೊಡಿ’ ಎಂಬುದಾಗಿ ಮಾಶಾಳ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ವಿರಕ್ತಮಠದ ಮಠಾಧಿಪತಿ ಶ್ರೀ ಮರುಳಾರಾಧ್ಯ ಶಿವಾಚಾರ್ಯರು ಹೇಳಿಕೆ ನೀಡಿದ್ದು, ಇವರ ವಿರುದ್ಧ ಅಫಜಲ್ಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 ಅಫಜಲ್ಪುರ‘ಮಕ್ಕಳ ಕೈಯಲ್ಲಿ ಪೆನ್ನು ಕೊಡುವ ಬದಲು, ತಲ್ವಾರ್ ಕೊಡಿ’ ಎಂಬುದಾಗಿ ಮಾಶಾಳ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ವಿರಕ್ತಮಠದ ಮಠಾಧಿಪತಿ ಶ್ರೀ ಮರುಳಾರಾಧ್ಯ ಶಿವಾಚಾರ್ಯರು ಹೇಳಿಕೆ ನೀಡಿದ್ದು, ಇವರ ವಿರುದ್ಧ ಅಫಜಲ್ಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಲಬುರಗಿ ಜಿಲ್ಲೆ ಅಫಜಲ್ಪುರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಭಾನುವಾರ ವಕ್ಫ್ ಆಸ್ತಿ ವಿವಾದ ವಿರುದ್ಧ ‘ವಕ್ಫ್ ಹಠಾವೋ ದೇಶ ಬಚಾವೋ’ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯಲ್ಲಿ ತಾಲೂಕಿನ ಮಾಶಾಳದ ಗ್ರಾಮದ ಶ್ರೀ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಪ್ರಚೋದನಕಾರಿ ಭಾಷಣ ಮಾಡಿದ್ದರು. ಭಾರತವನ್ನು ಪಾಕಿಸ್ತಾನ ಮಾಡುತ್ತೇವೆ ಎಂದು ಕೆಲವರು ಹೊರಟಿದ್ದಾರೆ. ನಾವು ಇನ್ನೂ ಎಚ್ಚೆತ್ತುಕೊಳ್ಳದಿದ್ದರೆ ಈ ದೇಶ ಇರುವುದಿಲ್ಲ. ಆದ್ದರಿಂದ ಇನ್ನು ಮುಂದೆ ಮಕ್ಕಳ ಕೈಯಲ್ಲಿ ಪೆನ್ನು ಕೊಡುವ ಬದಲು ತಲ್ವಾರ್ ಕೊಡೋಣ. ವಕ್ಫ್ ಕಾಯ್ದೆ ರದ್ದಾಗದಿದ್ದರೆ ಜೀವ ತೆಗೆಯಲು, ಜೀವ ಕೊಡಲು ಸಿದ್ಧರಿದ್ದೇವೆ ಎಂದು ತೋರಿಸೋಣ ಎಂದಿದ್ದರು.

ಈ ಹಿನ್ನೆಲೆಯಲ್ಲಿ ಸೋಮವಾರ ಅಫಜಲ್ಪುರ ಪೊಲೀಸರು ಸ್ವಾಮೀಜಿ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿದ್ದಾರೆ. ಭಾರತೀಯ ನ್ಯಾಯ ಸಂಹಿತೆಯ (ಬಿಎನ್.ಎಸ್.) 299 ಮತ್ತು 353/2 ರಡಿ ದೂರು ದಾಖಲಾಗಿದೆ.

ಸ್ವಾಮೀಜಿ ಹೇಳಿದ್ದು

ಭಾರತವನ್ನು ಪಾಕಿಸ್ತಾನ ಮಾಡುತ್ತೇವೆ ಎಂದು ಕೆಲವರು ಹೊರಟಿದ್ದಾರೆ. ನಾವು ಇನ್ನೂ ಎಚ್ಚೆತ್ತುಕೊಳ್ಳದಿದ್ದರೆ ಈ ದೇಶ ಇರುವುದಿಲ್ಲ. ಇನ್ನುಮುಂದೆ ಮಕ್ಕಳ ಕೈಯಲ್ಲಿ ಪೆನ್ನು ಕೊಡುವ ಬದಲು ತಲ್ವಾರ್ ಕೊಡೋಣ. ವಕ್ಫ್ ಕಾಯ್ದೆ ರದ್ದಾಗದಿದ್ದರೆ ಜೀವ ತೆಗೆಯಲು, ಜೀವ ಕೊಡಲು ಸಿದ್ಧರಿದ್ದೇವೆ.