ಸಾರಾಂಶ
ಪ್ರಶಸ್ತಿಯು ೧೫ ಸಾವಿರ ರುಪಾಯಿ ನಗದು, ಫಲಕ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ ಎಂದು ಸಂಘದ ಅಧ್ಯಕ್ಷ ಬಿ. ಐತ್ತಪ್ಪ ನಾಯ್ಕ್ ತಿಳಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಪುತ್ತೂರು
ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವತಿಯಿಂದ ಕೊಡ ಮಾಡುವ ‘ಸ್ವರ್ಣ ಸಾಧನಾ ಪ್ರಶಸ್ತಿ’ಗೆ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಆಯ್ಕೆಯಾಗಿದ್ದಾರೆ. ಮೇ ೪ರಂದು ಪುತ್ತೂರಿನ ಬೈಪಾಸ್ ಪಕ್ಕದಲ್ಲಿರುವ ಜೈನ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.೨೦೨೨ರಿಂದ ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವತಿಯಿಂದ ವಿವಿಧ ಕ್ಷೇತ್ರದ ಸಾಧಕರಿಗೆ ಈ ವಿಶೇಷ ಸಾಧನಾ ಪ್ರಶಸ್ತಿ ನೀಡಲಾಗುತ್ತಿದೆ. ಈ ಬಾರಿ ಖ್ಯಾತ ಸಾಹಿತಿ ಹಾಗೂ ಕವಿ ಸುಬ್ರಾಯ ಚೊಕ್ಕಾಡಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ೧೫ ಸಾವಿರ ರುಪಾಯಿ ನಗದು, ಫಲಕ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ ಎಂದು ಸಂಘದ ಅಧ್ಯಕ್ಷ ಬಿ. ಐತ್ತಪ್ಪ ನಾಯ್ಕ್ ತಿಳಿಸಿದ್ದಾರೆ.