ಸ್ವಸ್ಥ ನಾರಿ ಶಕ್ತಿ ಪರಿವಾರ ಅಭಿಯಾನಕ್ಕೆ ಇಂದು ಚಾಲನೆ: ಪ್ರದೀಪಕುಮಾರ

| Published : Sep 17 2025, 01:06 AM IST

ಸ್ವಸ್ಥ ನಾರಿ ಶಕ್ತಿ ಪರಿವಾರ ಅಭಿಯಾನಕ್ಕೆ ಇಂದು ಚಾಲನೆ: ಪ್ರದೀಪಕುಮಾರ
Share this Article
  • FB
  • TW
  • Linkdin
  • Email

ಸಾರಾಂಶ

ಶಿಬಿರದಲ್ಲಿ ಮುಖ್ಯವಾಗಿ ರಕ್ತ, ಕ್ಯಾನ್ಸರ್, ಮಾನಸಿಕ ಆರೋಗ್ಯದ ತಪಾಸಣೆ, ರಕ್ತದಾನ, ಟಿಬಿ ತಪಾಸಣೆಗೆ ವಿಶೇಷ ಒತ್ತು ನೀಡಲಾಗುವುದು. ಜಿಲ್ಲೆಯನ್ನು ಟಿಬಿ ಮುಕ್ತ ಜಿಲ್ಲೆಯನ್ನಾಗಿಸುವ ಉದ್ದೇಶ ಹೊಂದಲಾಗಿದೆ.

ಹಾವೇರಿ: ಜಿಲ್ಲೆಯಲ್ಲಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಜಿಲ್ಲಾ ಆಸ್ಪತ್ರೆ ಸಹಯೋಗದಲ್ಲಿ ಅ. 2ರ ವರೆಗೆ ಹಮ್ಮಿಕೊಂಡಿರುವ ಸ್ವಸ್ಥ ನಾರಿ ಶಕ್ತಿ ಪರಿವಾರ ಅಭಿಯಾನಕ್ಕೆ ಸೆ. 17ರಂದು ಚಾಲನೆ ನೀಡಲಾಗುತ್ತಿದೆ ಎಂದು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನಿರ್ದೇಶಕ ಪ್ರದೀಪಕುಮಾರ ತಿಳಿಸಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸ್ವಸ್ಥ ನಾರಿ ಶಕ್ತಿ ಪರಿವಾರ ಅಭಿಯಾನದಲ್ಲಿ ಮಹಿಳೆಯರು, ಹದಿಹರೆಯದವರು ಮತ್ತು ಮಕ್ಕಳ ಹಲವು ಆರೋಗ್ಯ ಚಟುವಟಿಕೆಗಳನ್ನು ಆಯ್ಕೆ ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳ ಮಾರ್ಗದರ್ಶನದೊಂದಿಗೆ ಆಯುಷ್ಮಾನ್ ಆರೋಗ್ಯ ಕೇಂದ್ರದ ಸಿಬ್ಬಂದಿ ಸಮನ್ವಯ ಸಾಧಿಸಿಕೊಂಡು ಅವರ ಆರೋಗ್ಯ ತಪಾಸಣೆ ಮಾಡಲಾಗುವುದು ಎಂದರು.ಜಿಲ್ಲೆಯ ಐದು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಶಿಬಿರಗಳನ್ನು ಏರ್ಪಡಿಸಲಾಗಿದೆ. ಸೆ. 20ರಂದು ಸಮುದಾಯ ಆರೋಗ್ಯ ಕೇಂದ್ರ ಬಂಕಾಪುರ, ಸೆ. 22ರಂದು ಸಮುದಾಯ ಆರೋಗ್ಯ ಕೇಂದ್ರ ಗುತ್ತಲ, ಸೆ. 23ರಂದು ಸಮುದಾಯ ಆರೋಗ್ಯ ಕೇಂದ್ರ ರಟ್ಟೀಹಳ್ಳಿ, ಸೆ. 25ರಂದು ಸಮುದಾಯ ಆರೋಗ್ಯ ಕೇಂದ್ರ ಮಾಸೂರು, ಸೆ. 27ರಂದು ಸಮುದಾಯ ಆರೋಗ್ಯ ಕೇಂದ್ರ ಅಕ್ಕಿ ಆಲೂರನಲ್ಲಿ ತಜ್ಞ ವೈದ್ಯರಿಂದ ಆರೋಗ್ಯ ತಪಾಸಣೆ ಮಾಡಲಾಗುವುದು.ಶಿಬಿರದಲ್ಲಿ ಮುಖ್ಯವಾಗಿ ರಕ್ತ, ಕ್ಯಾನ್ಸರ್, ಮಾನಸಿಕ ಆರೋಗ್ಯದ ತಪಾಸಣೆ, ರಕ್ತದಾನ, ಟಿಬಿ ತಪಾಸಣೆಗೆ ವಿಶೇಷ ಒತ್ತು ನೀಡಲಾಗುವುದು. ಜಿಲ್ಲೆಯನ್ನು ಟಿಬಿ ಮುಕ್ತ ಜಿಲ್ಲೆಯನ್ನಾಗಿಸುವ ಉದ್ದೇಶ ಹೊಂದಲಾಗಿದೆ ಎಂದರು. ಜಿಲ್ಲಾದ್ಯಂತ ಸಾರ್ವಜನಿಕರ ಬದುಕನ್ನು ಸುಗಮಗೊಳಿಸಲು ಅದರಲ್ಲೂ ಮುಖ್ಯವಾಗಿ ಮಹಿಳೆಯರು ಮತ್ತು ಮಕ್ಕಳಿಗಾಗಿ ವಿಶೇಷ ಅರೋಗ್ಯ ತಪಾಸಣೆ ಮಾಡಿ, ಅವರನ್ನು ಆರೋಗ್ಯವಂತರನ್ನಾಗಿ ಮಾಡುವ ಉದ್ದೇಶ ಹೊಂದಲಾಗಿದೆ. ಸಮುದಾಯದ ಅರೋಗ್ಯ ಕೇಂದ್ರ ವ್ಯಾಪ್ತಿಯ ಸಾರ್ವಜನಿಕರು ಇದರ ಈ ಅಭಿಯಾನದ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ. ಜಯಾನಂದ ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಪಿ.ಆರ್. ಹಾವನೂರ ಇದ್ದರು.