ಸಾರಾಂಶ
ಆರೋಗ್ಯವಂತ ನಾರಿಯರು ಆರೋಗ್ಯವಂತ ಕುಟುಂಬವನ್ನು ಕಟ್ಟುತ್ತಾರೆ ಎನ್ನುವ ಪರಿಕಲ್ಪನೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದಂದು ಕೇಂದ್ರ ಸರ್ಕಾರ ಸ್ವಸ್ಥ ನಾರಿ ಸಶಕ್ತ ಪರಿವಾರ್ ಯೋಜನೆಯನ್ನು ಜಾರಿಗೆ ತರಲಾಗಿದೆ. ಅ ಮೂಲಕವಾಗಿ ಆರೋಗ್ಯವಂತ ಸಮಾಜ ನಿರ್ಮಾಣ ಸಾದ್ಯವಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ನವೀನ್ ಕುಮಾರ್ ಹೇಳಿದರು.
ಮೊಳಕಾಲ್ಮೂರು: ಆರೋಗ್ಯವಂತ ನಾರಿಯರು ಆರೋಗ್ಯವಂತ ಕುಟುಂಬವನ್ನು ಕಟ್ಟುತ್ತಾರೆ ಎನ್ನುವ ಪರಿಕಲ್ಪನೆಯಲ್ಲಿ
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದಂದು ಕೇಂದ್ರ ಸರ್ಕಾರ ಸ್ವಸ್ಥ ನಾರಿ ಸಶಕ್ತ ಪರಿವಾರ್ ಯೋಜನೆಯನ್ನು ಜಾರಿಗೆ ತರಲಾಗಿದೆ. ಅ ಮೂಲಕವಾಗಿ ಆರೋಗ್ಯವಂತ ಸಮಾಜ ನಿರ್ಮಾಣ ಸಾದ್ಯವಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ನವೀನ್ ಕುಮಾರ್ ಹೇಳಿದರು.ತಾಲೂಕಿನ ರಾಂಪುರ ಗ್ರಾಮದ ಎಸ್.ಪಿ.ಎಸ್.ಆರ್ ಪಿಯು ಕಾಲೇಜಿನ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಪೋಷಣ ಮಾಸಾಚರಣೆ ಹಾಗೂ ಸ್ವಸ್ಥ ನಾರಿ ಸಶಕ್ತ ಪರಿವಾರ್ ತಂಬಾಕು ಮುಕ್ತ ಯುವ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸರ್ಕಾರ ಮಹಿಳೆಯರ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ಜಾರಿ ಮಾಡಿದೆ, ಅ ಮೂಲಕ ಮಹಿಳೆಯರನ್ನು ಸಬಲರನ್ನಾಗಿಸಲಾಗಿದೆ. ಮಹಿಳೆಯರು ಯೋಜನೆಗಳ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು. ರಾಂಪುರ ಗ್ರಾಪಂ ಅಧ್ಯಕ್ಷೆ ನಾಗವೇಣಿ ರವಿಶಂಕರ್ ಮಾತನಾಡಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿಗಾಗಿ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿದೆ. ಪ್ರತಿಯೊಬ್ಬರೂ ಯೋಜನೆಗಳ ಮಾಹಿತಿಯನ್ನು ಪಡೆಯುವ ಜತೆಗೆ ಸದುಪಯೋಗ ಪಡೆದುಕೊಳ್ಳಬೇಕು ಎಂದರು.ಪಿಯು ಕಾಲೇಜಿನ ಸಹ ಪ್ರಾಂಶುಪಾಲ ಬೋರಯ್ಯ ಮಾತನಾಡಿ, ವಿಕಸಿತ ಭಾರತ 2047ಕ್ಕೆ ಸದೃಢ ಹಾಗೂ ಸಂಪದ್ಭರಿತ ದೇಶವಾಗುವುದರಲ್ಲಿ ಯುವ ಜನತೆಯ ಪಾತ್ರ ಅಪಾರವಾಗಿದೆ. ಪ್ರತಿಯೊಬ್ಬರು ಭಾರತವನ್ನು ವಿಶ್ವಗುರು ಮಾಡಲು ಶ್ರಮವಹಿಸಬೇಕು. ಯುವಶಕ್ತಿ ಬಳಕೆಯಿಂದ ಮಾತ್ರ ವಿಕಸಿತ ಭಾರತ ನಿರ್ಮಾಣವಾಗಲು ಸಾಧ್ಯ ಎಂದರು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಜಿಲ್ಲಾ ಸಲಹೆಗಾರ .ಬಿ.ಎಂ.ಪ್ರಭುದೇವ ಮಾತನಾಡಿದರು.ಕಾರ್ಯಕ್ರಮದ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ಸ್ಪರ್ಧಾ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಹಿರಿಯ ಆರೋಗ್ಯ ನಿರೀಕ್ಷಕ ಗುರುಮೂರ್ತಿ, ಆಪ್ತ ಸಮಾಲೋಚಕ ಕಾಂತರಾಜು, ಇಸಿಓ ಲೋಹಿತ್ ಕುಮಾರ್ ,ಕೇಂದ್ರ ಸಂವಹನ ಇಲಾಖೆಯ ಎನ್.ರಾಮಕೃಷ್ಣ ಇದ್ದರು.;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))