ತರೀಕೆರೆಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಯುವಜನತೆಯನ್ನು ವ್ಯಸನಗಳಿಂದ ರಕ್ಷಿಸಿ, ಉತ್ತಮ ಜೀವನದ ಕಡೆಗೆ ಕರೆದೊಯ್ಯುವ ಒಂದು ಸಾಮಾಜಿಕ ಜಾಗೃತಿ ಅಭಿಯಾನವಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕು ಯೋಜನಾಧಿಕಾರಿ ಕುಸುಮಾಧರ್ ಹೇಳಿದರು.

ತರೀಕೆರೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ, ತರೀಕೆರೆ

ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಯುವಜನತೆಯನ್ನು ವ್ಯಸನಗಳಿಂದ ರಕ್ಷಿಸಿ, ಉತ್ತಮ ಜೀವನದ ಕಡೆಗೆ ಕರೆದೊಯ್ಯುವ ಒಂದು ಸಾಮಾಜಿಕ ಜಾಗೃತಿ ಅಭಿಯಾನವಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕು ಯೋಜನಾಧಿಕಾರಿ ಕುಸುಮಾಧರ್ ಹೇಳಿದರು.

ಪಟ್ಟಣದ ಸದ್ವಿ ದ್ಯಾ ಪ್ರೌಢಶಾಲೆಯಲ್ಲಿ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸ್ವಾಸ್ಥ್ಯ ಸಂಕಲ್ಪ ಎಂದರೆ ಯುವಜನರ ದುಶ್ಚಟಗಳಾದ ಮಾದಕ ವಸ್ತುಗಳಾದ ಮದ್ಯ, ಗುಟ್ಕಾ, ಮೊಬೈಲ್ ವ್ಯಸನಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ, ಆರೋಗ್ಯಕರ ಜೀವನಶೈಲಿಗೆ ಪ್ರೇರೇಪಿಸುವ ಮತ್ತು ವ್ಯಸನಮುಕ್ತ ಸಮಾಜ ನಿರ್ಮಾಣದ ಸಂಕಲ್ಪ ತೆಗೆದುಕೊಳ್ಳಲು ಪ್ರೋತ್ಸಾಹಿಸುವ ಒಂದು ಸಾಮಾಜಿಕ ಜಾಗೃತಿ ಕಾರ್ಯಕ್ರಮ. ಈ ಕಾರ್ಯ ಕ್ರಮವನ್ನು ಮುಖ್ಯವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಆಯೋಜಿಸುತ್ತಿದ್ದು ಶಾಲಾ-ಕಾಲೇಜುಗಳಲ್ಲಿ ನಡೆಸಲಾಗುತಿದ್ದು ತಾಲೂಕಿನಾದ್ಯಂತ ಇಂತಹ ಕಾರ್ಯಕ್ರಮ ನಡೆಸಿ ಮಾಹಿತಿ ನೀಡಲಾಗುತಿದೆ ಎಂದು ತಿಳಿಸಿದರು.

ಶ್ರೀನಿವಾಸ್ ಮಾತನಾಡಿ ಇಂದಿನ ಮಕ್ಕಳು, ಯುವ ಜನತೆ ಮದ್ಯವ್ಯಸನ, ಗುಟ್ಕಾ, ಧೂಮಪಾನಗಳಿಂದ ಯುವ ಜನತೆ ಜೀವನ ಹಾಳಾಗುತ್ತಿದೆ. ಸಹವಾಸ ದೋಷ, ಆಕಸ್ಮಿಕ ಆಕರ್ಷಣೆಗಳ ಕಾರಣ ದುಶ್ಚಟ ಒಮ್ಮೆ ಆರಂಭವಾದರೆ ಬದುಕು ವಿನಾಶದ ಹಾದಿಯಲ್ಲಿ ಸಾಗುತ್ತದೆ ಇದರಿಂದ ವೈಯಕ್ತಿಕ ಜೀವನದ ಜೊತೆಗೆ ಸಮಾಜದ ಸ್ವಾಸ್ಥ್ಯ ಸಹ ಹಾಳಾಗುತ್ತದೆ ವಿದ್ಯಾರ್ಥಿ ಜೀವನದ ದೆಸೆಯಿಂದಲೇ ಉತ್ತಮ ಕ್ರಿಯಾಶೀಲ ಹವ್ಯಾಸ ರೂಢಿಸಿಕೊಂಡು ಉತ್ತಮ ಸಮಾಜ ಕಟ್ಟುವ ಕಾರ್ಯ ಕ್ರಮಕ್ಕೆ ದೃಢ ಸಂಕಲ್ಪ ಕೈಗೊಳ್ಳಬೇಕು ಎಂದರು.

ಇದೇ ವೇಳೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಶಾಲೆ ಪ್ರಾಂಶುಪಾಲರಾದ ಹರ್ಷಿಣಿ, ವಲಯದ ಮೇಲ್ವಿಚಾರಕ ಹೊಮ್ಯ ನಾಯ್ಕ್,ಶಿಕ್ಷಕರಾದ ರಾಕೀಬ್, ಸೇವಾಪ್ರತಿನಿಧಿ ಉಷಾ, ಪ್ರೀತಿ, ಶಾಲಾ ಮಕ್ಕಳು ಉಪಸ್ಥಿತರಿದ್ದರು.

-

29ಕೆಟಿಆರ್.ಕೆ.2ಃ

ತರೀಕೆರೆಯಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಏರ್ಪಾಡಾಗಿದ್ದ ಸ್ವಾಸ್ಥ್ಯ ಸಂಕಲ್ಪದಲ್ಲಿ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.